ಬ್ರೇಕಿಂಗ್ ನ್ಯೂಸ್
25-04-24 10:57 pm HK News Desk ಕರ್ನಾಟಕ
ಹುಬ್ಬಳ್ಳಿ , ಏ 25: ನೇಹಾ ಹಿರೇಮಠ ಕೊಲೆಯಾಗಿ ಒಂದು ವಾರದ ಬಳಿಕ ಕೊನೆಗೂ ಆಕೆ ಮನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿದರು. ಇದೇ ವೇಳೆ ನೇಹಾ ತಂದೆ-ತಾಯಿಗೆ ಸಾಂತ್ವನ ಹೇಳಿದರು.
ಹುಬ್ಬಳ್ಳಿಯಲ್ಲಿನ ನೇಹಾ ನಿವಾಸಕ್ಕೆ ಗುರುವಾರ ಭೇಟಿ ನೀಡಿ, ಕುಟುಂಬದವರಿಗೆ ಸಾಂತ್ವನ ಹೇಳಿದ ಸಿಎಂ, ನೇಹಾ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ''ಇದೊಂದು ದುರಾದೃಷ್ಟಕರ ಘಟನೆ. ಈ ಪ್ರಕರಣವನ್ನು ಈಗಾಗಲೇ ನಾವು ಸಿಐಡಿಗೆ ಕೊಟ್ಟಿದ್ದೇವೆ. ಆರೋಪಿಯನ್ನು ಬಂಧಿಸಲಾಗಿದೆ. ಸಿಐಡಿ ತನಿಖೆ ಆರಂಭಗೊಂಡಿದೆ'' ಎಂದರು.

ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂಬ ಬಿಜೆಪಿ ನಾಯಕರ ಆಗ್ರಹದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ, ''ನೇಹಾ ಹತ್ಯೆಯಲ್ಲಿ ಬಿಜೆಪಿಯು ರಾಜಕೀಯ ಮಾಡುತ್ತಿದೆ. ಇಲ್ಲಿಯವರೆಗೆ ಅವರು ಒಂದು ಪ್ರಕರಣವನ್ನಾದರೂ ಸಿಬಿಐಗೆ ಕೊಟ್ಟಿದ್ದಾರಾ? ನಮ್ಮ ಅವಧಿಯಲ್ಲಿ ಸಾಕಷ್ಟು ಪ್ರಕರಣಗಳನ್ನು ಸಿಬಿಐಗೆ ಒಪ್ಪಿಸಿದ್ದೇವೆ'' ಎಂದು ತಿರುಗೇಟು ನೀಡಿದರು.
'ನೇಹಾ ಕುಟುಂಬದ ಜೊತೆಗೆ ನಾವು ಇರುತ್ತೇವೆ. ಅವರಿಗೆ ರಕ್ಷಣೆ ಬೇಕಿದ್ದರೂ ಕೊಡುತ್ತೇವೆ. ಸಿಐಡಿ ಅಧಿಕಾರಿಗಳು ತನಿಖೆ ಮಾಡುತ್ತಿದ್ದು, ವಿಶೇಷ ಕೋರ್ಟ್ಗೆ ಚಾರ್ಜ್ಶೀಟ್ ಸಲ್ಲಿಸುತ್ತಾರೆ. ನಂತರ ಕೋರ್ಟ್ನಲ್ಲಿ ವಿಚಾರಣೆ ನಡೆಯಲಿದೆ. ಆದಷ್ಟು ಬೇಗ ನ್ಯಾಯಾಲಯದಲ್ಲಿ ಆರೋಪಿಗೆ ಗರಿಷ್ಠ ಶಿಕ್ಷೆ ಆಗುತ್ತದೆ. ಧೈರ್ಯವಾಗಿರಿ, 120 ದಿನಗಳೊಳಗೆ ನ್ಯಾಯ ಕೊಡಿಸೋಣ' ಎಂದು ಸಿಎಂ ನೇಹಾ ತಂದೆಯ ಬೆನ್ನು ತಟ್ಟಿದರು.
ಸಿಎಂ ಎದುರು ನಿರಂಜನ ಹಿರೇಮಠ ಬೇಡಿಕೆ:
ಇದೇ ವೇಳೆ ಮಗಳ ಸಾವಿಗೆ ನ್ಯಾಯ ಬೇಕೆಂದು ನೇಹಾ ತಂದೆ ನಿರಂಜನ ಹಿರೇಮಠ ಸಿಎಂ ಬಳಿ ಕೋರಿದರು. ಇದೇ ವೇಳೆ ಮಾತನಾಡಿದ ಅವರು, ''ನಮ್ಮ ಕುಟುಂಬಕ್ಕೆ ಭದ್ರತೆ ಒದಗಿಸಬೇಕು. ವಿಶೇಷ ನ್ಯಾಯಾಲಯದಲ್ಲಿ 90-120 ದಿನಗಳ ಒಳಗಾಗಿ ನ್ಯಾಯ ಸಿಗಬೇಕು. ಸಾವಿಗೆ ಸಾವೇ ಶಿಕ್ಷೆ ಆಗಬೇಕು'' ಎಂದು ಬೇಡಿಕೆ ಇಟ್ಟರು.
ಫಯಾಜ್ನನ್ನು ಗಲ್ಲಿಗೇರಿದ ಮೇಲೆಯೇ ನಮಗೆ ಸಮಾಧಾನ, ಅಲ್ಲಿಯವರೆಗೆ ಹೋರಾಟ ಮಾಡುತ್ತೇವೆ. ಸರ್ಕಾರ ನಮ್ಮ ಜೊತೆಗೆ ಇರಬೇಕು. ಸಿಎಂ ನಮ್ಮ ಜೊತೆಗೆ ಇದ್ದು ನ್ಯಾಯ ಒದಗಿಸಬೇಕೆಂದು ಮನವಿ ಮಾಡುತ್ತೇನೆ. ಸಿಐಡಿ ತನಿಖೆಗೆ ಒಪ್ಪಿಸಿದ್ದು ಸಂತೋಷ ತಂದಿದೆ. ಕಾಂಗ್ರೆಸ್ ಮುಖಂಡರು ನಮ್ಮ ಬೆನ್ನಿಗೆ ನಿಂತಿದ್ದಾರೆ. ಕೋಪದಲ್ಲಿ ಯಾರಿಗಾದರೂ ನೋವು ತರುವ ಹಾಗೆ ಮಾತನಾಡಿದರೆ ಕ್ಷಮೆ ಕೋರುತ್ತೇನೆ ಎಂದು ಭಾವುಕರಾದರು.
ಈ ಸಂದರ್ಭದಲ್ಲಿ ಸಚಿವರಾದ ಹೆಚ್.ಕೆ.ಪಾಟೀಲ್, ಸಂತೋಷ ಲಾಡ್, ಮಾಜಿ ಸಚಿವ ಎ.ಎಂ.ಹಿಂಡಸಗೇರಿ, ಶಾಸಕ ಪ್ರಸಾದ್ ಅಬ್ಬಯ್ಯ, ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಅಸೂಟಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
Karnataka Chief Minister Siddaramaiah on Thursday visited Neha Hiremath's house and offered condolences to her family members. Neha Hiremath (23), daughter of Congress councilor of Hubballi-Dharwad Muncipal Corporation Niranjan Hiremath, was stabbed to death on the campus of BVB College on April 18 by her former classmate Fayaz Khondunaik.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm