ಬ್ರೇಕಿಂಗ್ ನ್ಯೂಸ್
26-04-24 04:53 pm HK News Desk ಕರ್ನಾಟಕ
ಚಾಮರಾಜನಗರ, ಏ, 26: ಮತದಾನ ಬಹಿಷ್ಕಾರ ಮಾಡಿದ್ದ ಗ್ರಾಮಸ್ಥರು ಇದೀಗ ಮತಗಟ್ಟೆಯನ್ನೇ ಧ್ವಂಸ ಮಾಡಿರುವ ಘಟನೆ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟ ಗ್ರಾಮ ಪಂಚಾಯತಿ ವ್ಯಾಪ್ತಿಯ ಇಂಡಿಗನತ್ತ ಗ್ರಾಮದಲ್ಲಿ ನಡೆದಿದೆ.
ಇಂದು ರಾಜ್ಯದ 14 ಕ್ಷೇತ್ರಗಳಿಗೆ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಬಿರುಸಿನಿಂದ ನಡೆಯುತ್ತಿದ್ದು, ಮತಗಟ್ಟೆಗಳ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ನಡುವೆಯೇ ಗ್ರಾಮಸ್ಥರು ಮತಗಟ್ಟೆಯನ್ನು ಧ್ವಂಸ ಮಾಡಿದ ಘಟನೆ ಇಂಡಿಗನತ್ತ ಗ್ರಾಮದಲ್ಲಿ ನಡೆದಿದೆ.
ಮೂಲಸೌಕರ್ಯಕ್ಕೆ ಆಗ್ರಹಿಸಿ ಮಲೆಮಹದೇಶ್ವರ ಬೆಟ್ಟ ಗ್ರಾಮ ಪಂಚಾಯತಿ ವ್ಯಾಪ್ತಿಯ 5 ಗ್ರಾಮಗಳ ಜನರು ಮತದಾನ ಬಹಿಷ್ಕಾರ ಮಾಡಿದ್ದರು. ಬಳಿಕ ಅಧಿಕಾರಿಗಳು ಮನವೊಲಿಕೆಗೆ ತೆರಳಿದ್ದ ವೇಳೆ ತಾವು ಮತದಾನ ಮಾಡಲ್ಲವೆಂದು ಗ್ರಾಮಸ್ಥರೆಲ್ಲ ಸೇರಿ ಮತಗಟ್ಟೆಯನ್ನು ಧ್ವಂಸ ಮಾಡಿದ್ದಾರೆ.

ಘಟನೆಗೆ ಕಾರಣವೇನು?:
ಮಲೆ ಮಹದೇಶ್ವರ ಗ್ರಾಮ ಪಂಚಾಯಿತಿಗೆ ಸೇರಿದ ಇಂಡಿಗನತ್ತ, ಮೆಂದಾರೆ, ತುಳಿಸಿಕರೆ, ತೇಕಣೆ, ಪಡಸಲನತ್ತ ಈ ಗ್ರಾಮಗಳಲ್ಲಿ ಲೋಕಸಭಾ ಚುನಾವಣೆಯಲ್ಲಿ ಮತ ಚಲಾಯಿಸದೆ ಮತದಾರರು ದೂರ ಉಳಿದಿದ್ದರು.
ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯ್ತಿ ವ್ಯಾಪ್ತಿಗೆ ಬರುವ ತುಳಿಸಿಕರೆಯ 480 ಮತದಾರರು, ಇಂಡಿಗನತ್ತ ಪೋಡಿನ 528 ಮತದಾರರು, ಪಡಸಲನತ್ತ ಪೋಡಿನ 298 ನಿವಾಸಿಗಳು ಮತದಾನದಿಂದ ದೂರ ಉಳಿದಿದ್ದರು. ತಮಗೆ ಮೂಲಸೌಕರ್ಯ ಕೊಡಬೇಕು ಇಲ್ಲದಿದ್ದರೇ ತಾವು ಮತ ಹಾಕುವುದಿಲ್ಲ ಎಂದು ಪಟ್ಟು ಹಿಡಿದಿದ್ದರು.
ವಿಚಾರ ಅರಿತ ಪೊಲೀಸ್ ಸಿಬ್ಬಂದಿ, ಚುನಾವಣಾ ಅಧಿಕಾರಿಗಳು ಮತದಾರರನ್ನು ಮನವೊಲಿಸಲು ತೆರಳಿದ್ದರು. ಈ ವೇಳೆ ಕೆಲವರನ್ನು ಮತದಾನಕ್ಕೆ ಮನವೊಲಿಸಿದ್ದರು. ಇದರಿಂದ ರೊಚ್ಚಿಗೆದ್ದ ಗ್ರಾಮಸ್ಥರು ಮತಗಟ್ಟೆ ಧ್ಚಂಸ ಮಾಡಿ, ಇವಿಎಂ ಹೊಡೆದು ಹಾಕಿ, ಕಲ್ಲು ತೂರಿದ್ದಾರೆ. ಈ ವೇಳೆ ಅಲ್ಲಿದ್ದ ಅಧಿಕಾರಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ.
Angry over politicians for no development in Village, angry people destroy Poll Booth In Chamarajanagar by villagers.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm