ಬ್ರೇಕಿಂಗ್ ನ್ಯೂಸ್
28-04-24 01:47 pm Bangalore Correspondent ಕರ್ನಾಟಕ
ಬೆಂಗಳೂರು, ಎ.28: ಲೋಕಸಭೆ ಚುನಾವಣೆ ಹೊತ್ತಿನಲ್ಲಿ ಸದ್ದು ಮಾಡಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣದ ಬಗ್ಗೆ ರಾಜ್ಯ ಸರ್ಕಾರ ತನಿಖೆಗೆ ವಿಶೇಷ ತನಿಖಾ ತಂಡ ರಚಿಸಿದೆ. ಹಿರಿಯ ಪೊಲೀಸ್ ಅಧಿಕಾರಿಗಳನ್ನು ಒಳಗೊಂಡ ತಂಡ ಭಾನುವಾರವೇ ತನಿಖೆ ಕೈಗೆತ್ತಿಕೊಳ್ಳಲಿದೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾಹಿತಿ ನೀಡಿರುವ ಗೃಹ ಸಚಿವ ಡಾ.ಜಿ. ಪರಮೇಶ್ವರ್, ಎಸ್ಐಟಿ ತಂಡ ಕೆಲವೇ ಹೊತ್ತಿನಲ್ಲಿ ತನಿಖೆ ಆರಂಭಿಸಲಿದೆ. ಪ್ರಜ್ವಲ್ ರೇವಣ್ಣ ಅವರಿಗೆ ನೊಟೀಸ್ ಜಾರಿ ಮಾಡುವುದು ಅಥವಾ ಬಿಡುವುದು ಎಸ್ ಐಟಿಗೆ ಬಿಟ್ಟದ್ದು. ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು ಯಾವುದೇ ಹಸ್ತಕ್ಷೇಪವಿಲ್ಲದೆ ತನಿಖೆ ನಡೆಸಲಾಗುವುದು ಎಂದರು. ಇದೇ ವೇಳೆ, ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗಿರುವ ಬಗ್ಗೆ ಮಾಹಿತಿ ಇದೆ ಎಂದವರು ಹೇಳಿದರು.
ಹಿರಿಯ ಪೊಲೀಸ್ ಅಧಿಕಾರಿ ನೇತೃತ್ವದಲ್ಲಿ ಎಸ್‌ಐಟಿ ತನಿಖೆ ನಡೆಸುತ್ತೇವೆ. ಸಂತ್ರಸ್ತ ಮಹಿಳೆಯರನ್ನು ಮಹಿಳಾ ಆಯೋಗ ಸಂಪರ್ಕ ಮಾಡುತ್ತಿದೆ. ಎಸ್‌ಐಟಿ ರಚಿಸಿದ ಮೇಲೆ ಅಧಿಕಾರಿಗಳಿಗೆ ಸಂಪೂರ್ಣ ಅಧಿಕಾರವನ್ನು ಕೊಟ್ಟು ತನಿಖೆ ಮಾಡಿಸಲಾಗುವುದು ಎಂದರು.
ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ತುಣುಕು ಈಗಾಗಲೇ ವಾಟ್ಸಪ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಈ ಹಿನ್ನೆಲೆಯಲ್ಲಿ ಎಸ್‌ಐಟಿ ತನಿಖೆ ನಡೆಸುವಂತೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದರು. ಈ ಹಿನ್ನೆಲೆಯಲ್ಲಿ ತನಿಖೆಗೆ ಸರ್ಕಾರ ವಿಶೇಷ ತನಿಖಾ ತಂಡ ರಚನೆ ಮಾಡಿದ್ದಾಗಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು. ಚುನಾವಣೆ ಹೊತ್ತಲ್ಲೇ ಅಶ್ಲೀಲ ವಿಡಿಯೋ ಹೊರ ಬಂದಿದ್ದರಿಂದ ಜೆಡಿಎಸ್ ನಾಯಕರು ತೀವ್ರ ಮುಜುಗರಕ್ಕೆ ಸಿಲುಕಿದ್ದಾರೆ. ಒಂದು ವಿಡಿಯೋದಲ್ಲಂತೂ ಮಹಿಳಾ ಪೊಲೀಸ್ ಅಧಿಕಾರಿ ಖಾಕಿ ಬಟ್ಟೆಯಲ್ಲೇ ಕಾಣಿಸಿಕೊಂಡಿದ್ದಾರೆ. ಎಲ್ಲ ವಿಡಿಯೋಗಳಲ್ಲೂ ಹುಡುಗನ ಮುಖವನ್ನು ಬ್ಲರ್ ಮಾಡಲಾಗಿದೆ.
ಪ್ರಜ್ವಲ್ ರೇವಣ್ಣ ಜರ್ಮನಿಗೆ?
ಅಶ್ಲೀಲ ವಿಡಿಯೋ ಚುನಾವಣೆಗೆ ಎರಡು ದಿನ ಇರುವಾಗ ಲೀಕ್ ಆಗಿತ್ತು. ಸುದ್ದಿ ವಾಹಿನಿಗಳಲ್ಲಿ ವಿಡಿಯೋ ಭಾರೀ ಸದ್ದು ಮಾಡುತ್ತಿದ್ದಂತೆ ಕಾಂಗ್ರೆಸ್ ನಾಯಕರು ಮುಗಿಬಿದ್ದಿದ್ದರು. ಮಹಿಳೆಯರನ್ನು ದುರ್ಬಳಕೆ, ದೌರ್ಜನ್ಯ ಮಾಡಿದ್ದಾರೆಂದು ಮಹಿಳಾ ಆಯೋಗ ತನಿಖೆಗೆ ಆಗ್ರಹಿಸಿತ್ತು. ಇಷ್ಟಾಗುತ್ತಿದ್ದಂತೆ ಇತ್ತ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗಿದ್ದಾರೆ ಎನ್ನಲಾಗಿದೆ. ಮತದಾನ ಮುಗಿದ ಮರುದಿನವೇ ನಸುಕಿನ 3 ಗಂಟೆ ಸುಮಾರಿಗೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನದಿಂದ ಜರ್ಮನಿಯ ಫ್ರಾಂಕ್‌ಫರ್ಟ್‌ಗೆ ಹೋಗಿದ್ದಾರೆ ಎನ್ನುವ ಮಾತು ಕೇಳಿಬಂದಿದೆ. ಪೂರ್ವ ನಿಯೋಜಿತ ಕಾರ್ಯಕ್ರಮಕ್ಕಾಗಿ ವಿದೇಶಕ್ಕೆ ಹೋಗಿದ್ದಾರೆಯೇ, ತನಿಖೆಯ ಭಯದಲ್ಲಿ ತಲೆಮರೆಸಿಕೊಳ್ಳುವ ಉದ್ದೇಶ ಇದೆಯೇ ಎನ್ನುವ ಬಗ್ಗೆ ಚರ್ಚೆ ನಡೆಯುತ್ತಿದೆ.
Prajwal Revanna sex videos leaked in Hassan, flees to Germany amid SIT probe. Janata Dal MP Prajwal Revanna, who is the grandson of former Prime Minister and JD(S) supremo HD Deve Gowda, has fled the country as the Karnataka government decided to form a special investigation team in connection with the "sex videos" case. The videos had gone viral on social media just two days before the first phase of the Lok Sabha elections in Karnataka on April 26.
01-07-26 09:49 pm
HK News Desk
ದನ ಕೊಂದವರು ಜೈಲಿಗೆ, ಮನುಷ್ಯರನ್ನು ಕೊಂದವರು ಪ್ರಧಾನ...
29-06-26 10:33 pm
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
01-07-26 10:37 pm
HK News Desk
ಭಾರಿ ಮಳೆ ; ಜುಲೈ 2 ದಕ್ಷಿಣ ಕನ್ನಡ ಶಾಲೆ - ಕಾಲೇಜಿಗ...
01-07-26 09:58 pm
ನಾಗುರಿ ದುರಂತ ನಮಗೆಲ್ಲ ಎಚ್ಚರಿಕೆ ಕರೆಗಂಟೆ, ವಿಕೋಪಗ...
01-07-26 09:18 pm
Mangalore Garodi Landslide: ನಾಗುರಿ ದುರಂತ ; ಗು...
01-07-26 08:41 pm
ಕಡೆಗೂ ಮಳೆ ಬಿರುಸು ; ತೊಕ್ಕೊಟ್ಟಿನಲ್ಲಿ ಮನೆ ಮೇಲೆರ...
01-07-26 11:46 am
01-07-26 09:34 pm
HK News Desk
ಹೋಂ ಸ್ಟೇನಲ್ಲಿ ಯುವತಿ ನಿಗೂಢ ಸಾವು ; ನನ್ನ ಪ್ರಿಯತಮ...
01-07-26 06:52 pm
ಭಗ್ನ ಪ್ರೇಮಿಯಿಂದ ಕಾರು ಸ್ಫೋಟ ಕೇಸ್ ; ಕಚ್ಚಾ ಬಾಂಬ್...
01-07-26 04:51 pm
ಕಂಕನಾಡಿ ಗರೋಡಿಯಲ್ಲಿ ನಾಲ್ಕು ಬಾಡಿಗೆ ಮನೆಗಳಿದ್ದ ಕಟ...
01-07-26 08:59 am
Panambur Gold Robbery, Update: ಪಣಂಬೂರಿನಲ್ಲಿ ಚ...
30-06-26 11:02 pm