ಬ್ರೇಕಿಂಗ್ ನ್ಯೂಸ್
28-04-24 03:09 pm Bangalore Correspondent ಕರ್ನಾಟಕ
ಬೆಂಗಳೂರು, ಎ.28: ಹಾಸನದಲ್ಲಿ ಹೊರಬಿದ್ದ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿ ಡಿಸಿಎಂ ಡಿಕೆ ಶಿವಕುಮಾರ್, ಕುಮಾರಸ್ವಾಮಿ ಪೆನ್ ಡ್ರೈವ್ ಬಗ್ಗೆ ವ್ಯಂಗ್ಯ ಪ್ರಶ್ನೆಯನ್ನು ಎತ್ತಿದ್ದಾರೆ. ಕುಮಾರಸ್ವಾಮಿ ಅವರು ಕಳೆದ ಚುನಾವಣೆ ವೇಳೆಗೆ ತೋರಿಸುತ್ತಿದ್ದ ಪೆನ್ ಡ್ರೈವ್ ಯಾವುದು, ಅದರಲ್ಲಿ ಏನಿದೆ ಎಂಬುದು ಆಗ ನನಗೆ ಗೊತ್ತಿರಲಿಲ್ಲ. ಅದರಲ್ಲಿ ಏನಿದೆ ಎಂದು ಈಗ ಗೊತ್ತಾಯಿತು. ಈ ಪೆನ್ ಡ್ರೈವ್ ಬಗ್ಗೆ ಕುಮಾರಣ್ಣನಿಗೆ ಚೆನ್ನಾಗಿ ಗೊತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ.
ಕುಮಾರಣ್ಣ ಅವರು ತಮ್ಮ ಜೇಬಿನಲ್ಲೇ ಪೆನ್ ಡ್ರೈವ್ ಇಟ್ಟುಕೊಂಡಿದ್ದನ್ನು ಮಾಧ್ಯಮದವರಿಗೆ ತೋರಿಸಿದ್ದರು. ಹೀಗಾಗಿ ಇದರ ಬಗ್ಗೆ ಕುಮಾರಸ್ವಾಮಿ ಅವರನ್ನೇ ನೀವು ಕೇಳಬೇಕು. ಇದಕ್ಕೆ ಉತ್ತರಿಸಲು ಅವರೇ ಸೂಕ್ತ ವ್ಯಕ್ತಿ ಎಂದು ಹೇಳಿದರು. ಮಾಧ್ಯಮಗಳು ಈ ವಿಚಾರದಲ್ಲಿ ಸುಳ್ಳು ಹೇಳುತ್ತಿವೆ. ಅದು ಬರೀ ಹಾಸನದ ನಾಯಕನದಲ್ಲ. ಹಾಸನ ಲೋಕಸಭಾ ಕ್ಷೇತ್ರದ ಎಡಿಎ ಮೈತ್ರಿ ಕೂಟದ ಅಭ್ಯರ್ಥಿಯದ್ದು, ಸಂಸದನದ್ದು. ಹೀಗಾಗಿ ಈ ವಿಚಾರವಾಗಿ ಪ್ರಧಾನಮಂತ್ರಿಗಳು, ವಿಜಯೇಂದ್ರ, ಶೋಭಕ್ಕ, ಅಶೋಕ್, ಕುಮಾರಣ್ಣ, ಗಂಡಸ್ತನದ ಬಗ್ಗೆ ಮಾತನಾಡುತ್ತಿದ್ದ ಅಶ್ವತ್ಥ್ ನಾರಾಯಣ್ ಉತ್ತರ ನೀಡಬೇಕು. ನಮ್ಮ ಹೆಸರಿಗೆ ಮಸಿ ಬಳಿಯಲು ಈ ರೀತಿ ಮಾಡುತ್ತಿದ್ದಾರೆ ಎಂದು ಅವರೇ ದೂರು ಕೊಟ್ಟಿರುವ ಬಗ್ಗೆ ಮಾಧ್ಯಮಗಳಲ್ಲಿ ಓದಿದೆ. ಮಹಿಳಾ ಆಯೋಗದ ಅಧ್ಯಕ್ಷರು ಇದೆಲ್ಲವನ್ನು ನೋಡಿ ರಾಜ್ಯದ ಗೃಹ ಸಚಿವರು ಹಾಗೂ ಸಿಎಂಗೆ ಪತ್ರ ಬರೆದಿದ್ದಾರೆ. ಈ ವಿಚಾರದಲ್ಲಿ ನೀವು (ಮಾಧ್ಯಮದವರು) ಯಾಕೆ ಮೌನ ತಾಳುತ್ತಿದ್ದೀರಿ? ಈ ವಿಚಾರದಲ್ಲಿ ನೀವು ರಾಜ್ಯದ ಜನತೆಗೆ ಬೆಳಕು ಚೆಲ್ಲಬೇಕು ಎಂದು ಮನವಿ ಮಾಡುತ್ತೇನೆ ಎಂದು ಹೇಳಿದರು.
ಸಂತ್ರಸ್ತ ಮಹಿಳೆಯರ ಪರವಾಗಿ ಕಾಂಗ್ರೆಸ್ ನಿಲ್ಲಲಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಾಧ್ಯಮಗಳು ಬಹುಮುಖ್ಯ ಆಧಾರಸ್ತಂಭ. ನೀವು ನಿಮ್ಮ ನಡುವಣ ಪೈಪೋಟಿ, ಆಂತರಿಕ ವಿಚಾರಕ್ಕೆ, ಬೇರೆಯವರಿಗೆ ಹೆಸರು ಬರುತ್ತದೆ ಎಂಬ ಕಾರಣಕ್ಕೆ ಇಂತಹ ದೊಡ್ಡ ವಿಚಾರಗಳನ್ನು ಮುಚ್ಚಿ ಹಾಕುತ್ತಿರುವುದು ನಿಮಗೆ ಶೋಭೆ ತರುವುದಿಲ್ಲ ಎಂದು ಭಾವಿಸುತ್ತೇನೆ. ನಮ್ಮ ಆತ್ಮಸಾಕ್ಷಿಗಾದರೂ ನಾವು ಕೆಲಸ ಮಾಡಬೇಕು ಅಲ್ಲವೇ ಎಂದರು.
DK shivakumar slams Prajwal Revanna over his sex leaked videos, says that the pen drive kumarswami was showing was of Prajwal Revanna he added.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm