ಬ್ರೇಕಿಂಗ್ ನ್ಯೂಸ್
28-04-24 04:26 pm Bangalore Correspondent ಕರ್ನಾಟಕ
ಬೆಂಗಳೂರು, ಎ.28: ಉಪ್ಪು ತಿಂದವರು ನೀರು ಕುಡಿಯಲೇಬೇಕು. ತಪ್ಪು ಮಾಡಿದ್ದರೆ ಈ ನೆಲದ ಕಾನೂನಿನಲ್ಲಿ ಎಲ್ಲರಿಗೂ ಒಂದೇ ರೀತಿಯ ಶಿಕ್ಷೆಯಾಗುತ್ತದೆ. ಈಗಾಗಲೇ ಸರ್ಕಾರ ತನಿಖೆಗೆ ವಹಿಸಿದೆ, ತನಿಖೆಯಾಗಿ ವಾಸ್ತವಾಂಶ ಹೊರಬರಲಿ ಎಂದು ಅಶ್ಲೀಲ ವಿಡಿಯೋ ಕುರಿತ ಎಸ್ಐಟಿ ತನಿಖೆ ಬಗ್ಗೆ ಜೆಡಿಎಸ್ ರಾಜ್ಯಾಧ್ಯಕ್ಷ, ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.
ನಾನಾಗಲಿ, ದೇವೇಗೌಡರಾಗಲಿ ಯಾವತ್ತಿಗೂ ಹೆಣ್ಣು ಮಕ್ಕಳ ವಿಚಾರದಲ್ಲಿ ಗೌರವಯುತವಾಗಿ ನಡೆದುಕೊಂಡಿದ್ದೇವೆ. ಯಾರಾದರೂ ಕಷ್ಟ ಹೇಳಿಕೊಂಡು ಬಂದರೆ ಅವರ ಕಷ್ಟ ನಿವಾರಿಸಿ ಕಳುಹಿಸಿದ್ದೇವೆ. ನಮ್ಮ ಸಾರ್ವಜನಿಕ ಜೀವನದಲ್ಲಿ ಮಹಿಳೆಯರಿಗೆ ಗೌರವ ನೀಡಿಕೊಂಡು ಬಂದಿದ್ದೇವೆ ಎಂದರು.
ಪ್ರಕರಣದ ಬಗ್ಗೆ ಎಸ್ಐಟಿ ತನಿಖೆಗೆ ಈಗಾಗಲೇ ರಾಜ್ಯ ಸರ್ಕಾರ ಆದೇಶ ಮಾಡಿದೆ. ತನಿಖೆ ನಡೆಯಲಿ. ಎಸ್‌ಐಟಿ ತನಿಖೆಯಿಂದ ವಾಸ್ತವ ಹೊರಗೆ ಬರಲಿ. ಈ ನೆಲದ ಕಾನೂನಿನಲ್ಲಿ ಯಾರೇ ತಪ್ಪು ಮಾಡಿದರೂ ಉಪ್ಪು ತಿಂದವರು ನೀರು ಕುಡಿಯಲೇ ಬೇಕು. ನಾವಂತೂ ಯಾವುದಕ್ಕೂ ತಪ್ಪು ಮಾಡಿದ ವಿಷಯದಲ್ಲಿ ಯಾರಿಗೂ ಕ್ಷಮಿಸುವ ಪ್ರಶ್ನೆಯಿಲ್ಲ. ತನಿಖೆಯ ವರದಿ ಸಂಪೂರ್ಣ ಹೊರಗೆ ಬರಲಿ. ಬಂದ ನಂತರ ಈ ಬಗ್ಗೆ ಮಾತನಾಡುತ್ತೇನೆ ಎಂದು ಹೇಳಿದರು.
ವಿಡಿಯೋ ಪ್ರಕರಣ ರಾಜ್ಯದಲ್ಲಿ ಸಂಚಲನ ಮೂಡಿಸುತ್ತಿದ್ದಂತೆ ಪ್ರಜ್ವಲ್ ರೇವಣ್ಣ ಅವರು ವಿದೇಶಕ್ಕೆ ಹೋಗಿದ್ದಾರೆ ಎನ್ನುವ ಪ್ರಶ್ನೆಗೆ ಉತ್ತರಿಸಿದ ಕುಮಾರಸ್ವಾಮಿ, ಪ್ರಜ್ವಲ್ ರೇವಣ್ಣ ಅವರು ವಿದೇಶಕ್ಕೆ ಹೋಗಿದ್ದಾರೆ ಎನ್ನುವುದು ನನಗೆ ಗೊತ್ತಿಲ್ಲ. ಅದು ನನಗೆ ಸಂಬಂಧ ಪಟ್ಟ ವಿಷಯ ಅಲ್ಲ. ಸರ್ಕಾರ ಎಸ್‌ಐಟಿ ತನಿಖೆಗೆ ಆದೇಶ ಮಾಡಿದೆ. ಅವರು ವಿದೇಶಕ್ಕೆ ಹೋಗಿದ್ದರೂ ಕರೆದುಕೊಂಡು ಬರುವ ಜವಾಬ್ದಾರಿ ಅವರದ್ದು. ಅವರು ಕರೆದುಕೊಂಡು ಬರುತ್ತಾರೆ. ಅದರ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ ಎಂದರು.
JD(S) leader H D Kumaraswamy on Sunday said he would like to wait for the facts to come out of the investigation into an alleged sex scandal involving his nephew and Hassan MP Prajwal Revanna, but asserted that there is no question of forgiving anyone who has committed a crime as per law.
24-02-25 01:36 pm
HK News Desk
Kumar Bangarappa, BJP President: ಬಿಜೆಪಿ ರಾಜ್ಯ...
23-02-25 06:38 pm
Telangana Model, Pramod Muthalik, CM Siddaram...
21-02-25 10:47 pm
Rohini Sindhuri, Roopa moudgil, latest news:...
21-02-25 10:12 pm
Santosh Lad, Modi, Nitin Gadkari: ಬಿಜೆಪಿ ಅಧಿಕ...
21-02-25 04:36 pm
24-02-25 10:14 pm
HK News Desk
India Pak Match 2025 Live: ಪಾಕ್ ತಂಡವನ್ನು ಚಾಂಪ...
23-02-25 11:22 pm
ಗಂಗಾ ನದಿಗಿದೆ ಸ್ವಯಂ ಶುದ್ಧೀಕರಣದ ಶಕ್ತಿ ; ಕೋಟ್ಯಂತ...
23-02-25 09:52 pm
ದುಬೈನಲ್ಲಿ ಕ್ರಿಮಿನಲ್ ಇನ್ವೆಸ್ಟಿಗೇಶನ್ ಅಧಿಕಾರಿಗಳ...
22-02-25 09:48 pm
ದುಬೈ ಉದ್ಯಮಿ ಬಿ.ಆರ್ ಶೆಟ್ಟಿಗೆ ದುಬೈ ಕೋರ್ಟಿನಿಂದ ಮ...
22-02-25 07:51 pm
25-02-25 09:34 pm
Mangalore Correspondent
Bantwal accident, Mangalore: ಚಾಲಕಿಯ ಧಾವಂತಕ್ಕೆ...
25-02-25 02:34 pm
Puttur doctor, C Section, Mangalore: ಸಿಸೇರಿಯನ...
25-02-25 12:24 pm
Puttur News, Dr Anil Baipadithaya, hospital:...
24-02-25 02:50 pm
Mangalore accident, Surathkal, Raichur: ಸುರತ್...
23-02-25 03:20 pm
25-02-25 08:10 pm
Mangalore Correspondent
Mangalore, Kotekar bank robbery, Bhaskar Belc...
25-02-25 05:18 pm
Kerala Murder, Crime, Affan: ತಿರುವನಂತಪುರ ; ಒಂ...
25-02-25 01:37 pm
Delhi crime, Wife Murder: ತ್ರಿವೇಣಿ ಸಂಗಮದಲ್ಲಿ...
24-02-25 10:51 pm
Illegal drug supply, Mangalore: ಮಂಗಳೂರು ಜೈಲಿಗ...
24-02-25 09:43 pm