ಬ್ರೇಕಿಂಗ್ ನ್ಯೂಸ್
30-04-24 11:31 am HK News Desk ಕರ್ನಾಟಕ
ಕಣ್ಣೂರು, ಏ.30: ಕಾರು - ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಮೃತಪಟ್ಟಿರುವ ದಾರುಣ ಘಟನೆ ಕಣ್ಣೂರು ಜಿಲ್ಲೆಯ ಚೆರುಕುನ್ನು ಸಮೀಪದ ಪುನ್ನಚೇರಿ ಎಂಬಲ್ಲಿ ಸೋಮವಾರ ರಾತ್ರಿ ನಡೆದಿದೆ.
ಕಾರು ಚಲಾಯಿಸುತ್ತಿದ್ದ ಕಾಸರಗೋಡು ಕಾಳೀಚನಡುಕ್ಕಂನ ಸಾಸ್ತಂಪಾರದ ಪದ್ಮಕುಮಾರ್ (59), ಭೀಮಾನಡಿಯ ಚೂರಿಕಟ್ಟೆಯ ಸುಧಾಕರನ್ (52), ಸುಧಾಕರನ್ ಅವರ ಪತ್ನಿ ಅಜತಾ (35), ಅವರ ತಂದೆ ಕೊಜುಮ್ಮಲ್ ಕೃಷ್ಣನ್ (65) ಮತ್ತು ಅಜಿತಾ ಅವರ ಸಹೋದರ ಅಜಿತ್ ಅವರ ಮಗ ಆಕಾಶ್ (9) ಮೃತಪಟ್ಟಿದ್ದಾರೆ.






ಘಟನೆಯಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಬಾಲಕ ಆಕಾಶ್ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿರುವುದಾಗಿ ಪೊಲೀಸರು ಹೇಳಿದ್ದಾರೆ.
ಚೆರುಕುನ್ನು ಬಳಿಯ ಪುನ್ನಚೇರಿಯ ಪೆಟ್ರೋಲ್ ಪಂಪ್ ಬಳಿ ಈ ಅಪಘಾತ ಸಂಭವಿಸಿದೆ. ಹಿಂಬದಿಯಿಂದ ಬಂದ ಲಾರಿ ಕಾರಿಗೆ ಢಿಕ್ಕಿ ಹೊಡೆದಿದ್ದರಿಂದ ಕಾರು ನಿಯಂತ್ರಣ ತಪ್ಪಿ ಎದುರುಗಡೆಯಿಂದ ಬರುತ್ತಿದ್ದ ಮತ್ತೊಂದು ಲಾರಿಗೆ ಢಿಕ್ಕಿ ಹೊಡೆದು ಪಲ್ಟಿಯಾಗಿ ಈ ಘಟನೆ ಸಂಭವಿಸಿದೆ.
ಗ್ಯಾಸ್ ಸಿಲಿಂಡರ್ ತುಂಬಿದ ಲಾರಿ ಮಂಗಳೂರಿನಿಂದ ಬರುತ್ತಿತ್ತು. ಸುಧಾಕರನ್ ಮತ್ತು ಅವರ ಕುಟುಂಬ ಸದಸ್ಯರು ತಮ್ಮ ಮಗ ಸೌರವ್‌ನನ್ನು ಕೋಝಿಕ್ಕೋಡ್ನಲ್ಲಿರುವ ಶಿಕ್ಷಣ ಸಂಸ್ಥೆಗೆ ಸೇರಿಸಿದ ನಂತರ ಕಾಸರಗೋಡಿಗೆ ಹಿಂತಿರುಗುತ್ತಿದ್ದರು.
ಕಾರಿನೊಳಗೆ ಸಿಲುಕಿದ್ದವರನ್ನು ಕಾರಿನ ಗಾಜು ಒಡೆದು ಸ್ಥಳೀಯರು ಹೊರಗೆ ತೆಗೆಯಲು ಯತ್ನಿಸಿ ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅಪಘಾತ ಮಾಡಿದ ಲಾರಿಗಳ ಇಬ್ಬರು ಚಾಲಕರನ್ನು ಕನ್ನಪುರಂ ಪೊಲೀಸರು ವಶಕ್ಕೆ ಪಡೆದಿದ್ದಾರೆ.
Five people, including a boy, were killed in a collision involving a car and a lorry at Punnachery in Kannapuram, Kannur Monday night. The deceased have been identified as K N Padmakumar (59), a native of Kalichanadukkam, Bheemanadi-native Choorikkatt Sudhakaran (52), his wife Ajitha (35), father-in-law Kozhummal Krishnan (65) and Ajitha's nephew Akash (nine).
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm