ಬ್ರೇಕಿಂಗ್ ನ್ಯೂಸ್
01-05-24 01:19 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 1: ಅಶ್ಲೀಲ ಸಿಡಿ ಭೀತಿ ಹಿನ್ನೆಲೆಯಲ್ಲಿ ತಮ್ಮ ವಿರುದ್ಧ ಯಾವುದೇ ಮಾನಹಾನಿಯಾಗುವಂತಹ ವರದಿ, ದೃಶ್ಯ, ಪೋಟೋ ಸೇರಿದಂತೆ ಯಾವುದೇ ರೀತಿಯ ಸುದ್ದಿಗಳನ್ನು ಪ್ರಕಟಿಸದಂತೆ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅವರ ಪುತ್ರ ಕೆಇ ಕಾಂತೇಶ್ ನಗರದ ನ್ಯಾಯಾಲಯದಿಂದ ಮಾಧ್ಯಮಗಳ ವಿರುದ್ಧ ನಿರ್ಬಂಧ ಆದೇಶ ಪಡೆದಿದ್ದಾರೆ.
ಕಾಂತೇಶ್ ಸಲ್ಲಿಸಿದ್ದ ಅರ್ಜಿ ಪರಿಶೀಲಿಸಿದ ಸಿಸಿಎಚ್ 11ನೇ ನ್ಯಾಯಾಲಯ ಇಂಟರ್ನೆಟ್, ಫೇಸ್‌ಬುಕ್, ವಾಟ್ಸ್ಯಾಪ್, ಯೂಟ್ಯೂಬ್ ಚಾನಲ್ ಸೇರಿದಂತೆ ಎಲ್ಲಾ ಮುದ್ರಣ, ದೃಶ್ಯ ಹಾಗೂ ಸಾಮಾಜಿಕ ಮಾಧ್ಯಮಗಳ ವಿರುದ್ಧ ನಿರ್ಬಂಧ ಆದೇಶ ನೀಡಿದೆ.
ಅಲ್ಲದೆ, ಪ್ರಕರಣದ ಸಂಬಂಧ ಎಲ್ಲಾ 50 ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿರುವ ನ್ಯಾಯಾಲಯ, ವಿಚಾರಣೆಯನ್ನು ಆಗಸ್ಟ್ 3 ಕ್ಕೆ ಮುಂದೂಡಿದೆ.
ಪೋಟೊ, ದೃಶ್ಯಗಳನ್ನು ಪ್ರಸಾರ ಮಾಡುವಂತಿಲ್ಲ ;
ಅರ್ಜಿದಾರರ ಪರ ವಾದ ಆಲಿಸಿದ ಬಳಿಕ ನ್ಯಾಯಾಲಯ, ''ಮುಂದಿನ ಅದೇಶದವರೆಗೆ ಅರ್ಜಿದಾರರ ವಿರುದ್ಧ ಅವಹೇಳನಕಾರಿ ಅಥವಾ ಮಾನಹಾನಿಯಾಗುವಂತಹ ಯಾವುದೇ ರೀತಿಯ ಸುದ್ದಿ, ಪೋಟೊ, ದೃಶ್ಯಗಳನ್ನು ಪ್ರಸಾರ ಮಾಡುವಂತಿಲ್ಲ'' ಎಂದು ಆದೇಶಿಸಿದೆ.
ಅರ್ಜಿದಾರರು ಸಲ್ಲಿಸಿರುವ ಮಾಹಿತಿ ಗಮನಿಸಿದರೆ ಮೇಲ್ನೋಟಕ್ಕೆ ಮಾಧ್ಯಮಗಳು ಅವರ ವಿರುದ್ಧ ಮಾನಹಾನಿಕಾರ ವರದಿ, ವಿಡಿಯೋಗಳನ್ನು ಪ್ರಸಾರ ಮಾಡುವ
ಸಾಧ್ಯತೆಯಿರುವ ಹಿನ್ನೆಲೆಯಲ್ಲಿ, ಸುಪ್ರೀಂಕೋರ್ಟ್‌ನ ಹಲವು ತೀರ್ಪುಗಳ ಆಧಾರದಲ್ಲಿಈ ನಿರ್ಬಂಧ ಆದೇಶ ಹೊರಡಿಸಲಾಗುತ್ತಿದೆ, ಎಂದು ನ್ಯಾಯಾಲಯ ಹೇಳಿದೆ.
ಅರ್ಜಿದಾರರರ ಪರ ವಕೀಲರು, 'ಲೋಕಸಭಾ ಚುನಾವಣೆ ಸಮಯದಲ್ಲಿ ಉದ್ದೇಶಪೂರ್ವಕವಾಗಿಯೇ ಅವರ ಹೆಸರಿಗೆ ಮಸಿ ಬಳಿಯಲು ಪ್ರಯತ್ನ ನಡೆಸಲಾಗುತ್ತಿದೆ. ಹಾಗಾಗಿ, ಯಾವುದೇ ರೀತಿಯ ಆಶ್ಲೀಲ ಆಡಿಯೋ, ವಿಡಿಯೋ, ಪೋಟೊಗಳನ್ನು ಪ್ರಸಾರ ಮಾಡದಂತೆ ನಿರ್ಬಂಧ ವಿಧಿಸಬೇಕು ' ಎಂದು ನ್ಯಾಯಾಲಯವನ್ನು ಕೋರಿದ್ದರು.
Eshwarappa son Kantesh gets injunction order against 50 media houses in Bengaluru over his sex cd case. son of now-expelled BJP leader KS Eshwarappa, has obtained a temporary injunction order from a Bengaluru court, preventing the media from publishing or broadcasting any explicit images or videos pertaining to him.
25-02-25 10:30 pm
Bangalore Correspondent
Belagavi Accident, Kumbh Mela: ಬಸ್ ಗೆ ಡಿಕ್ಕಿ...
24-02-25 01:36 pm
Kumar Bangarappa, BJP President: ಬಿಜೆಪಿ ರಾಜ್ಯ...
23-02-25 06:38 pm
Telangana Model, Pramod Muthalik, CM Siddaram...
21-02-25 10:47 pm
Rohini Sindhuri, Roopa moudgil, latest news:...
21-02-25 10:12 pm
24-02-25 10:14 pm
HK News Desk
India Pak Match 2025 Live: ಪಾಕ್ ತಂಡವನ್ನು ಚಾಂಪ...
23-02-25 11:22 pm
ಗಂಗಾ ನದಿಗಿದೆ ಸ್ವಯಂ ಶುದ್ಧೀಕರಣದ ಶಕ್ತಿ ; ಕೋಟ್ಯಂತ...
23-02-25 09:52 pm
ದುಬೈನಲ್ಲಿ ಕ್ರಿಮಿನಲ್ ಇನ್ವೆಸ್ಟಿಗೇಶನ್ ಅಧಿಕಾರಿಗಳ...
22-02-25 09:48 pm
ದುಬೈ ಉದ್ಯಮಿ ಬಿ.ಆರ್ ಶೆಟ್ಟಿಗೆ ದುಬೈ ಕೋರ್ಟಿನಿಂದ ಮ...
22-02-25 07:51 pm
25-02-25 10:58 pm
Mangalore Correspondent
C-Band Doppler Weather Radar, Mangalore: ಮಂಗಳ...
25-02-25 09:34 pm
Bantwal accident, Mangalore: ಚಾಲಕಿಯ ಧಾವಂತಕ್ಕೆ...
25-02-25 02:34 pm
Puttur doctor, C Section, Mangalore: ಸಿಸೇರಿಯನ...
25-02-25 12:24 pm
Puttur News, Dr Anil Baipadithaya, hospital:...
24-02-25 02:50 pm
25-02-25 08:10 pm
Mangalore Correspondent
Mangalore, Kotekar bank robbery, Bhaskar Belc...
25-02-25 05:18 pm
Kerala Murder, Crime, Affan: ತಿರುವನಂತಪುರ ; ಒಂ...
25-02-25 01:37 pm
Delhi crime, Wife Murder: ತ್ರಿವೇಣಿ ಸಂಗಮದಲ್ಲಿ...
24-02-25 10:51 pm
Illegal drug supply, Mangalore: ಮಂಗಳೂರು ಜೈಲಿಗ...
24-02-25 09:43 pm