ಬ್ರೇಕಿಂಗ್ ನ್ಯೂಸ್
04-05-24 04:04 pm HK News Desk ಕರ್ನಾಟಕ
ಹುಬ್ಬಳ್ಳಿ, ಮೇ.4: ಕೋವಿಡ್ ಶೀಲ್ಡ್ ಲಸಿಕೆ ಪಡೆದವರಲ್ಲಿ ಅಡ್ಡ ಪರಿಣಾಮಗಳು ಉಂಟಾಗುತ್ತಿದೆ ಎಂಬುದರ ಕುರಿತು ಜನರು ಭಯ ಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಧಾರವಾಡದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಚಿವರು, ಕೆಲವರಿಗೆ ಅಡ್ಡ ಪರಿಣಾಮಗಳು ಆಗಿರುವ ಬಗ್ಗೆ ಮಾಹಿತಿ ಇದೆ. ಲಸಿಕೆ ಎಂದ ಮೇಲೆ ಸಣ್ಣ ಪ್ರಮಾಣದ ಸೈಡ್ ಎಫೆಕ್ಟ್ ಇರುತ್ತೆ. ಆದರೆ ಜನರು ಏನೋ ಆಗಿಬಿಡುತ್ತೆ ಎಂದು ಭಯಪಡಬಾರದು ಎಂದು ಹೇಳಿದರು.
ಕರ್ನಾಟಕದಲ್ಲಿ ಕೋವಿಡ್ ಶೀಲ್ಡ್ ಲಸಿಕೆ ಪಡೆದವರಲ್ಲಿ ಬೆರಳಣಿಕೆಯಷ್ಟು ಜನರಿಗೆ ಮಾತ್ರ ಗಂಭೀರ ಆರೋಗ್ಯ ಸಮಸ್ಯೆಗಳು ಕಂಡುಬಂದಿದೆ. ಈ ಬಗ್ಗೆ ಆರೋಗ್ಯ ಇಲಾಖೆಯಿಂದ ಪರಿಶೀಲನೆ ನಡೆಸಲಾಗಿದೆ. ನಾಲ್ಕು ಐದು ಜನರಿಗೆ ವ್ಯಾಕ್ಸಿನ್ ಪಡೆದ ಬಳಿಕ ಗಂಭೀರ ಆರೋಗ್ಯ ಸಮಸ್ಯೆ ಎದುರಿಸಿರುವ ಬಗ್ಗೆ ಮಾಹಿತಿ ಇದೆ. ಆದರೆ ಇದು ಲಸಿಕೆಯಿಂದಲೇ ಆಗಿದೆಯಾ ಅಥವಾ ಬೇರೆ ಅರೋಗ್ಯದ ಸಮಸ್ಯೆಗಳು ಕಾರಣವಾ ಎಂಬುದನ್ನ ನೋಡಬೇಕು ಎಂದರು.

ಕೋವಿಶೀಲ್ಡ್ ವಾಕ್ಸಿನ್ ಪಡೆದವರೆಲ್ಲರಿಗೂ ಆರೋಗ್ಯ ತೊಂದರೆಗಳಾಗುತ್ತವೆ ಎಂದು ಭಯಪಡುವ ಅಗತ್ಯವಿಲ್ಲ. ಏನೋ ಆಗಿಬಿಡುತ್ತೆ ಎಂದು ಸಾರ್ವತ್ರಿಕವಾಗಿ ಭಯದ ವಾತವಾರಣ ಸೃಷ್ಟಿಯಾಗುತ್ತಿರುವುದನ್ನ ಗಮನಿಸಿದ್ದೇನೆ. ಆದರೆ ಈಗಾಗಲೇ ವ್ಯಾಕ್ಸಿನ್ ಪಡೆದು ಎರಡು ವರ್ಷಗಳು ಕಳೆದು ಹೋಗಿವೆ. ಹೀಗಿರುವಾಗ ಈಗ ಅಷ್ಟೊಂದು ಅಡ್ಡಪರಿಣಾಮ ಆಗಲ್ಲ ಎಂಬ ಅಭಿಪ್ರಾಯಗಳು ಕೂಡ ಇವೆ.
ವದಂತಿಗಳಿಗೆ ಜನರು ಕಿವಿಗೊಡಬಾರದು. ಯಾರಿಗೆ ದೇಹದಲ್ಲಿ ಸಮಸ್ಯೆಗಳು ಕಂಡುಬಂದು, ಅನುಮಾನಗಳಿದ್ದರೆ ಅವರು ಆಸ್ಪತ್ರೆಗಳಿಗೆ ಭೇಟಿ ನೀಡಿ ತಪಾಸಣೆ ಮಾಡಿಸಿಕೊಳ್ಳುವುದು ಉತ್ತಮ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಯಾವ ನಿರ್ದೇಶನ ನೀಡಲಿದೆ ನೋಡೊಣ. ವ್ಯಾಕ್ಸಿನೇಷನ್ ಮಾಡುವುದನ್ನ ಕೇಂದ್ರ ಸರ್ಕಾರವೇ ನೋಡಿಕೊಳ್ಳುತ್ತದೆ. ಕೇಂದ್ರ ಸರ್ಕಾರದ ಬಳಿ ಈ ಬಗ್ಗೆ ಹೆಚ್ಚಿನ ಮಾಹಿತಿ ಇರುತ್ತದೆ. ಹೀಗಾಗಿ ರಾಜ್ಯಗಳು ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ನ ಪಾಲಿಸುತ್ತವೆ. ಕರ್ನಾಟಕದ ಮಟ್ಟಿಗೆ ಹೇಳುವುದಾದರೆ ಕೋವಿಡ್ ಲಸಿಕೆ ಪಡೆದವರಲ್ಲಿ ಬೆರಳೆಣಿಯಷ್ಟು ಜನರಿಗೆ ಮಾತ್ರ ಆರೋಗ್ಯದಲ್ಲಿ ಸಮಸ್ಯೆಗಳಾಗಿರುವ ಬಗ್ಗೆ ಮಾಹಿತಿ ಇದೆ. ಈ ಬಗ್ಗೆ ಇನ್ನೂ ಹೆಚ್ಚಿನ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
Health Minister Dinesh Gundurao has said that there is no need to worry about the side effects of those who have received the Covid Shield vaccine. The minister gave a response to the media in Dharwad and said that some people are aware of the side effects. But he said that people should not be afraid that something will happen.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 02:08 pm
Mangalore Correspondent
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm