ಬ್ರೇಕಿಂಗ್ ನ್ಯೂಸ್
05-05-24 10:54 pm HK News Desk ಕರ್ನಾಟಕ
ಬೆಂಗಳೂರು, ಮೇ 05: ಅತ್ಯಾಚಾರ ಪ್ರಕರಣದ ಸಂತ್ರಸ್ತೆಯನ್ನು ಅಪಹರಿಸಿ, ಅಕ್ರಮ ಬಂಧನದಲ್ಲಿ ಇರಿಸಿದ ಆರೋಪದ ಮೇಲೆ ಶಾಸಕ ರೇವಣ್ಣ ಅವರನ್ನ ಬಂಧಿಸಿರುವುದು ಸರಿಯಾದ ಕ್ರಮ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಹೇಳಿದರು.
ಅಲ್ಲದೇ, ಪ್ರಜ್ವಲ್ ರೇವಣ್ಣ ಈಗಲೂ ಕಾಂಗ್ರೆಸ್– ಜೆಡಿಎಸ್ ಮೈತ್ರಿ ಸಂಸದರಾಗಿಯೇ ಇದ್ದಾರೆ. ಅವರು ಈ ಚುನಾವಣೆಯಲ್ಲಿ ಗೆದ್ದು ಎನ್‌ಡಿಎ ಸಂಸದರಾದರೆ ಅವರ ವಿರುದ್ಧ ಪಕ್ಷದ ವತಿಯಿಂದಲೇ ಕಾನೂನು ಕ್ರಮ ಜರುಗಿಸುವ ಸಾಧ್ಯತೆಗಳ ಬಗ್ಗೆ ವರಿಷ್ಠರ ಜತೆ ಚರ್ಚಿಸುವುದಾಗಿ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಪ್ರಜ್ವಲ್ ರೇವಣ್ಣ ನಡೆಸಿದ ಮಹಿಳಾ ದೌರ್ಜನ್ಯದ ಘಟನೆಗಳು ಯಾವಾಗ ನಡೆದಿವೆ ಎಂಬ ಬಗ್ಗೆ ತನಿಖಾ ತಂಡ ವರದಿ ನೀಡಬೇಕಿದೆ. ನಮ್ಮ ಹೊಂದಾಣಿಕೆಯಲ್ಲಿ ಇನ್ನೂ ಪ್ರಜ್ವಲ್ ರೇವಣ್ಣ ಗೆದ್ದಿಲ್ಲ. ಈಗ ಕಾಂಗ್ರೆಸ್– ಜೆಡಿಎಸ್ ಮೈತ್ರಿ ಸಂಸದರಾಗಿಯೇ ಇದ್ದಾರೆ. ಜೆಡಿಎಸ್ ಪಕ್ಷ ಈಗಾಗಲೇ ಪ್ರಜ್ವಲ್ ವಿರುದ್ಧ ಕ್ರಮ ಕೈಗೊಂಡಿದೆ ಎಂದು ಅವರು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ಜೆಡಿಎಸ್ ಜತೆಗೆ ಇದೇ ಮೊದಲ ಬಾರಿ ಚುನಾವಣಾ ಮೈತ್ರಿ ಏರ್ಪಟ್ಟಿದೆ. ಜೆಡಿಎಸ್ ತನ್ನ ಕೋಟಾದಲ್ಲಿ ಪ್ರಜ್ವಲ್‌ಗೆ ಟಿಕೆಟ್ ಕೊಟ್ಟಿದೆ. ಅವರ ಮೇಲೆ ಆರೋಪ ಕೇಳಿ ಬಂದ ಬಳಿಕ ಅವರನ್ನು ಜೆಡಿಎಸ್ ಅಮಾನತು ಮಾಡಿದೆ ಎಂದರು.
ಈಗ ಪ್ರಜ್ವಲ್ ಅವರನ್ನು ಅತ್ಯಾಚಾರಿ ಎಂದು ಕರೆಯುವ ಸಿದ್ದರಾಮಯ್ಯ 2019 ರ ಏಪ್ರಿಲ್‌ನಲ್ಲಿ ಕಡೂರಿನ ಎಪಿಎಂಸಿ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಜ್ವಲ್ ರೇವಣ್ಣ ಅವರನ್ನು ಪಕ್ಕದಲ್ಲಿ ಕೂರಿಸಿಕೊಂಡು ಹಾಡಿ ಹೊಗಳಿದ್ದರು. ‘ಪ್ರಜ್ವಲ್ ಯುವ ನಾಯಕ, ಓಡಾಡಿ ಕೆಲಸ ಮಾಡ್ತಾರೆ. ಆದ್ದರಿಂದ ಅವರಿಗೇ ಮತ ನೀಡಿ ಗೆಲ್ಲಿಸಿಕೊಡಿ ಎಂದು ಟ್ವೀಟ್ ಮಾಡಿದ್ದರು. ಈ ಮೂಲಕ ಪ್ರಜ್ವಲ್ ಪರ ಕೆಲಸ ಮಾಡಿ ಸಿದ್ದರಾಮಯ್ಯ ಮತವನ್ನು ಯಾಚಿಸಿದ್ದರು ಎಂದು ಅಶೋಕ ಹೇಳಿದರು.
ಪ್ರಜ್ವಲ್ ರೇವಣ್ಣ ಮತ್ತು ರೇವಣ್ಣ ಅವರ ಪ್ರಕರಣವನ್ನು ಬಿಜೆಪಿ ಒಪ್ಪಿಕೊಳ್ಳುವುದಿಲ್ಲ. ಆದರೆ, ಪ್ರಕರಣದ ಹಿಂದೆ ರಾಜಕೀಯ ಪಿತೂರಿ ಇದೆ ಎಂದು ಅವರು ತಿಳಿಸಿದರು.
ಬಿಜೆಪಿಗೂ ಈ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ. ಈ ವಿಷಯವಾಗಿ ಎಚ್.ಡಿ.ಕುಮಾರಸ್ವಾಮಿ ಅವರೇ ಸ್ಪಷ್ಟನೆ ನೀಡಿದ್ದಾರೆ ಎಂದರು.
BJP R Ashok says Revanna arrest has been a right move by congress government. In case if Prajwal wins this coming lok sabha elections the party also will take right action against him he added.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm