ಬ್ರೇಕಿಂಗ್ ನ್ಯೂಸ್
07-05-24 06:18 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.7: ಬಿಟ್ ಕಾಯಿನ್ ಪ್ರಕರಣದ ಪ್ರಮುಖ ಆರೋಪಿ ಹ್ಯಾಕರ್ ಶ್ರೀಕಿ ಅಲಿಯಾಸ್ ಶ್ರೀಕೃಷ್ಣನನ್ನು ಎಸ್ಐಟಿ ಅಧಿಕಾರಿಗಳು ದಿಢೀರಾಗಿ ಬಂಧಿಸಿದ್ದು ಆಮೂಲಕ ಚುನಾವಣೆ ಹೊತ್ತಲ್ಲೇ ಬಿಜೆಪಿ ಕಾಲದ ಹಗರಣವನ್ನು ಕೈಗೆತ್ತಿಕೊಳ್ಳುವ ಸುಳಿವನ್ನು ಕಾಂಗ್ರೆಸ್ ನೀಡಿದೆ.
ತುಮಕೂರಿನ ಸೆನ್ ಪೊಲೀಸ್ ಠಾಣೆಯಲ್ಲಿ ಯೋನೊಕಾಯಿನ್ ಕಂಪನಿಯ ಕೋಟ್ಯಾಂತರ ಮೌಲ್ಯದ ಬಿಟ್ ಕಾಯಿನ್ ಹ್ಯಾಕ್ ಮಾಡಿರುವ ಆರೋಪದಡಿ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ. ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಹಲವು ಬಾರಿ ಶ್ರೀಕಿಗೆ ನೋಟಿಸ್ ನೀಡಲಾಗಿತ್ತು. ಆದರೆ ವಿಚಾರಣೆಗೆ ಗೈರಾದ ಹಿನ್ನೆಲೆಯಲ್ಲಿ ಆರೋಪಿಯನ್ನು ಸೆರೆ ಹಿಡಿಯಲಾಗಿದೆ ಎನ್ನುವುದು ಸದ್ಯದ ಮಾಹಿತಿ.
2017ರಲ್ಲಿ ತುಮಕೂರಿನ ಸೆನ್ ಪೊಲೀಸ್ ಠಾಣೆಯಲ್ಲಿ ಯೂನೋಕಾಯಿನ್ ಟೆಕ್ನಾಲಜೀಸ್ ಕಂಪನಿಯ ಸಹ ಸಂಸ್ಥಾಪಕ ಬಿ.ವಿ.ಹರೀಶ್ ಎಂಬವರು ದೂರು ನೀಡಿದ್ದರು. ಕಂಪನಿಗೆ ಸೇರಿದ 60.6 ಬಿಟ್ ಕಾಯಿನ್ಗಳನ್ನು ಕಳವು ಮಾಡಲಾಗಿದೆ, ಪ್ರತಿ ಬಿಟ್ ಕಾಯಿನ್ ಬೆಲೆ 1.67 ಲಕ್ಷದಂತೆ ಸುಮಾರು 1.14 ಕೋಟಿ ರೂ ಮೌಲ್ಯದ ಬಿಟ್ ಕಾಯಿನ್ ಕಳವು ಮಾಡಲಾಗಿದೆ ಎಂದು ಆರೋಪಿಸಿ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣವನ್ನು ಪೊಲೀಸರು ಎಸ್‌ಐಟಿಗೆ ವರ್ಗಾವಣೆ ಮಾಡಿದ್ದರು. ಇವುಗಳ ಸದ್ಯದ ಮಾರುಕಟ್ಟೆ ಮೌಲ್ಯ 32 ಕೋಟಿಯಾಗಿದೆ.
ಬಿಟ್ ಕಾಯಿನ್ ಹಗರಣ ಸಂಬಂಧ ತನಿಖೆ ನಡೆಸುತ್ತಿರುವ ಎಸ್ಐಟಿ ಕಾಟನ್ ಪೇಟೆ, ಕೆಂಪೇಗೌಡನಗರ, ಅಶೋಕನಗರ, ಸೈಬರ್ ಕ್ರೈಂ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ಒಟ್ಟು ಎಂಟು ಪ್ರಕರಣಗಳ ಕುರಿತಂತೆ ತನಿಖೆ ನಡೆಸುತ್ತಿದೆ. ಅಮೆರಿಕದ ಬಿಟ್ ಫಿನಾನ್ಸ್ ಸೇರಿದಂತೆ ಹಲವು ಕಂಪನಿಗಳ ಸಾವಿರಾರು ಕೋಟಿ ರೂಪಾಯಿ ಮೌಲ್ಯದ ಬಿಟ್ ಕಾಯಿನ್ ಗಳನ್ನು ಕಳವು ಮಾಡಿದ್ದು 2020ರಲ್ಲಿ ಹಗರಣ ಬೆಳಕಿಗೆ ಬಂದಿತ್ತು. ಆದರೆ ಆಗಿನ ಬಿಜೆಪಿ ಸರ್ಕಾರದ ಪ್ರಮುಖ ರಾಜಕಾರಣಿಗಳು ಶ್ರೀಕಿ ಜೊತೆ ಸೇರಿ ಕಳ್ಳತನದಲ್ಲಿ ಪಾಲು ಪಡೆದಿದ್ದರು ಎಂಬ ಆರೋಪ ಕೇಳಿಬಂದಿತ್ತು. ಇದರ ತನಿಖೆಗಾಗಿ ಕಾಂಗ್ರೆಸ್ ಸರ್ಕಾರ ಎಸ್ಐಟಿ ರಚನೆ ಮಾಡಿದ್ದರೂ, ತನಿಖೆಯನ್ನು ನಡೆಸದೆ ಒಳಗಿಂದೊಳಗೆ ಕೊಡು ಕೊಳ್ಳುವಿಕೆಯ ಮೂಲಕ ಹಳ್ಳ ಹಿಡಿಸಲಾಗಿತ್ತು. ಇದೀಗ ಪೆನ್ ಡ್ರೈವ್ ಪ್ರಕರಣ ಕಾಂಗ್ರೆಸ್ ನಾಯಕರ ಕೊರಳು ಸುತ್ತಿಕೊಳ್ಳುತ್ತಿದ್ದಂತೆ ಬಿಜೆಪಿ ನಾಯಕರ ಹಳೆ ಕೇಸಿಗೆ ಮತ್ತೆ ಜೀವ ಕೊಡುವುದಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಪ್ರಜ್ವಲ್ ರೇವಣ್ಣರ ಪೆನ್ ಡ್ರೈವ್ ಕೇಸನ್ನು ಸಿಬಿಐಗೆ ಕೊಡಬೇಕೆಂದು ಹೆಚ್ಚು ಹಾರಾಡಿದರೆ, ಬಿಟ್ ಕಾಯಿನ್ ಅಸ್ತ್ರ ಬಳಸಿ ಚುನಾವಣೆ ಹೊತ್ತಲ್ಲೇ ಆರೋಪ ಹೊತ್ತ ರಾಜಕಾರಣಿಗಳಿಗೆ ನೋಟಿಸ್ ಜಾರಿ ಮಾಡುವ ಸುಳಿವನ್ನು ಈಮೂಲಕ ನೀಡಿದೆ.
ಆಗಿನ ಬಿಜೆಪಿ ರಾಜ್ಯಾಧ್ಯಕ್ಷ, ಗೃಹ ಸಚಿವ ಸೇರಿದಂತೆ ಪ್ರಮುಖ ರಾಜಕಾರಣಿಗಳು, ನಿವೃತ್ತ ಅಧಿಕಾರಿಗಳ ಮಕ್ಕಳು ಈ ಹಗರಣದಲ್ಲಿ ಭಾಗಿಯಾಗಿದ್ದಾರೆಂಬ ಆರೋಪಗಳಿದ್ದವು. ಇತ್ತ ಪೆನ್ ಡ್ರೈವ್ ಕೇಸಿನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಆರೋಪಿಯಾಗಿಸಬೇಕು, ತನಿಖೆಯನ್ನು ಸಿಬಿಐ ಎತ್ತಿಕೊಳ್ಳಬೇಕು ಎನ್ನುವ ಆಗ್ರಹವನ್ನು ಗೌಡ್ರ ಕುಟುಂಬ ಮತ್ತು ಬಿಜೆಪಿ ನಾಯಕರು ಕೇಂದ್ರ ಸರ್ಕಾರದ ಮುಂದಿಟ್ಟಿದ್ದಾರೆ.
A Special Investigation Team (SIT) probing the infamous multi-crore Bitcoin scam in Karnataka on Tuesday, 7 May, arrested the alleged mastermind Srikrishna Ramesh alias Sriki in a related 2017 case.
25-02-25 10:30 pm
Bangalore Correspondent
Belagavi Accident, Kumbh Mela: ಬಸ್ ಗೆ ಡಿಕ್ಕಿ...
24-02-25 01:36 pm
Kumar Bangarappa, BJP President: ಬಿಜೆಪಿ ರಾಜ್ಯ...
23-02-25 06:38 pm
Telangana Model, Pramod Muthalik, CM Siddaram...
21-02-25 10:47 pm
Rohini Sindhuri, Roopa moudgil, latest news:...
21-02-25 10:12 pm
24-02-25 10:14 pm
HK News Desk
India Pak Match 2025 Live: ಪಾಕ್ ತಂಡವನ್ನು ಚಾಂಪ...
23-02-25 11:22 pm
ಗಂಗಾ ನದಿಗಿದೆ ಸ್ವಯಂ ಶುದ್ಧೀಕರಣದ ಶಕ್ತಿ ; ಕೋಟ್ಯಂತ...
23-02-25 09:52 pm
ದುಬೈನಲ್ಲಿ ಕ್ರಿಮಿನಲ್ ಇನ್ವೆಸ್ಟಿಗೇಶನ್ ಅಧಿಕಾರಿಗಳ...
22-02-25 09:48 pm
ದುಬೈ ಉದ್ಯಮಿ ಬಿ.ಆರ್ ಶೆಟ್ಟಿಗೆ ದುಬೈ ಕೋರ್ಟಿನಿಂದ ಮ...
22-02-25 07:51 pm
25-02-25 10:58 pm
Mangalore Correspondent
C-Band Doppler Weather Radar, Mangalore: ಮಂಗಳ...
25-02-25 09:34 pm
Bantwal accident, Mangalore: ಚಾಲಕಿಯ ಧಾವಂತಕ್ಕೆ...
25-02-25 02:34 pm
Puttur doctor, C Section, Mangalore: ಸಿಸೇರಿಯನ...
25-02-25 12:24 pm
Puttur News, Dr Anil Baipadithaya, hospital:...
24-02-25 02:50 pm
25-02-25 08:10 pm
Mangalore Correspondent
Mangalore, Kotekar bank robbery, Bhaskar Belc...
25-02-25 05:18 pm
Kerala Murder, Crime, Affan: ತಿರುವನಂತಪುರ ; ಒಂ...
25-02-25 01:37 pm
Delhi crime, Wife Murder: ತ್ರಿವೇಣಿ ಸಂಗಮದಲ್ಲಿ...
24-02-25 10:51 pm
Illegal drug supply, Mangalore: ಮಂಗಳೂರು ಜೈಲಿಗ...
24-02-25 09:43 pm