ಬ್ರೇಕಿಂಗ್ ನ್ಯೂಸ್
07-05-24 09:11 pm HK News Desk ಕರ್ನಾಟಕ
ಬೆಂಗಳೂರು, ಮೇ 7: ಪ್ರಜ್ವಲ್ ರೇವಣ್ಣ ಪ್ರಕರಣಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ನೇರ ಹಸ್ತಕ್ಷೇಪವಿದ್ದು ಈ ರೀತಿಯ ತನಿಖೆಯಿಂದ ವಾಸ್ತವ ಹೊರಬರುವುದಿಲ್ಲ. ಅಂಥ ವ್ಯಕ್ತಿಯನ್ನು ಸಂಪುಟದಲ್ಲಿ ಇಟ್ಟುಕೊಂಡು ತನಿಖೆ ಮಾಡಿದರೆ ಸೂಕ್ತ ರೀತಿಯಲ್ಲಿ ತನಿಖೆ ಸಾಗದು. ಸಂತ್ರಸ್ತರಿಗೆ ನ್ಯಾಯವೂ ಸಿಗದು. ಹೀಗಾಗಿ ಅವರನ್ನು ಸಂಪುಟದಿಂದ ವಜಾಗೊಳಿಸಿ ತನಿಖೆ ಮುಂದುವರಿಸಿ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ, ಸಿಎಂ ಸಿದ್ದರಾಮಯ್ಯ ಅವರನ್ನು ಆಗ್ರಹಿಸಿದ್ದಾರೆ.
ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ತುರ್ತು ಸುದ್ದಿಗೋಷ್ಠಿ ಕರೆದು ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣ ಸಿಡಿ ಪ್ರಕರಣದಲ್ಲಿ ಡಿ ಕೆ ಶಿವಕುಮಾರ್ ಪಿತೂರಿ ಎದ್ದು ಕಾಣುತ್ತಿದೆ, ಪ್ರಕರಣವನ್ನು ಪಾರದರ್ಶಕವಾಗಿ ತನಿಖೆ ಮಾಡಲು ಸಿಬಿಐ ತನಿಖೆಗೆ ಸರ್ಕಾರ ವಹಿಸಲಿ, ನಮಗೆ ಎಸ್ ಐಟಿ ತನಿಖೆ ಮೇಲೆ ನಂಬಿಕೆಯಿಲ್ಲ. ಪ್ರತಿದಿನ ಎಸ್ ಐಟಿ ಅಧಿಕಾರಿಗಳು ಡಿ ಕೆ ಶಿವಕುಮಾರ್ ಮತ್ತು ಇತರ ಕಾಂಗ್ರೆಸ್ ನಾಯಕರ ಕೈಗೊಂಬೆಗಳಂತೆ ಕೆಲಸ ಮಾಡುತ್ತಿದ್ದಾರೆ ಎಂದರು.
ಡಿ.ಕೆ. ಶಿವಕುಮಾರ್ ಇತಿಹಾಸ ಎಲ್ಲರಿಗೂ ಗೊತ್ತು. ಮೊದಲು ಈ ಒಳಸಂಚು ಮಾಡಿದ್ದಕ್ಕಾಗಿ ಸಂಪುಟದಿಂದ ಕಿತ್ತು ಬೀಸಾಕಿ. ವಿಡಿಯೋ ಲೀಕ್ ಮಾಡಿಸಿದ್ದೇ ಇವರು. ಮಹಿಳೆಯರ ಮಾನ ಹರಾಜು ಮಾಡಿಸಿದ್ದಾರೆ. ರೇವಣ್ಣ ಅವರನ್ನ ವಶಕ್ಕೆ ಪಡೆದ್ರಲ್ಲ ಸಿಎಂ ಅವರೇ. ಮೊದಲು ನಿಮ್ಮ ಕ್ಯಾಬಿನೆಟ್ ನಿಂದ ಡಿಕೆ ಶಿವಕುಮಾರ್ ಅವರನ್ನ ಕಿತ್ತಾಕಿ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.
ನೀವು ನಿಮ್ಮ ಹೆಸರು ಬಳಸದಂತೆ ತಡೆಯಾಜ್ಞೆ ತಂದಿರುವ ಬಗ್ಗೆ ಕೇಳಿದ್ದಕ್ಕೆ, ನಮ್ಮ ಹೆಸರನ್ನ ಪದೇ ಪದೇ ಬಳಸಿಕೊಳ್ಳುತ್ತಿದ್ದಕ್ಕಾಗಿ ತಡೆಯಾಜ್ಞೆ ತಂದಿದ್ದೇನೆ. ನಾನು ಇಲ್ಲಿ ಜನಪ್ರತಿನಿಧಿಯಾಗಿ, ಶಾಸಕಾಂಗ ಪಕ್ಷದ ನಾಯಕನ ಜವಾಬ್ದಾರಿಯಲ್ಲಿದ್ದೇನೆ. ನನ್ನ ವೈಯಕ್ತಿಕ ಕಾರಣಕ್ಕೆ ಈ ತಡೆಯಾಜ್ಞೆ ತಂದಿದ್ದು ಅಲ್ಲ ಎಂದು ಹೇಳಿದರು. ಪ್ರಜ್ವಲ್ ಪ್ರಕರಣದಲ್ಲಿ 16 ವರ್ಷ ವಯಸ್ಸಿನ ಬಾಲಕಿಯೂ ಸಂತ್ರಸ್ತೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಹಿರಂಗವಾಗಿ ಹೇಳಿದ್ದಾರೆ. ಯಾವ ಆಧಾರದ ಮೇಲೆ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಆ ಹೇಳಿಕೆ ನೀಡಿದರು? ಆ ಬಗ್ಗೆ ಇದುವರೆಗೂ ಯಾಕೆ ಎಸ್ಐಟಿ ತನಿಖೆ ಮಾಡಿಲ್ಲ? 400 ಮಹಿಳೆಯರನ್ನು ಅತ್ಯಾಚಾರ ಮಾಡಲಾಗಿದೆ ಎನ್ನುತ್ತಾರೆ. ಹಾಗಾದರೆ ಯಾಕೆ ರಾಹುಲ್ ಗಾಂಧಿಯವರನ್ನು ಇನ್ನೂ ಬಿಟ್ಟಿದ್ದಾರೆ ಎಂದು ಪ್ರಶ್ನಿಸಿದರು.
ನಾನೇನೂ ಪ್ರಜ್ವಲ್ ರೇವಣ್ಣರನ್ನ ವಹಿಸಿಕೊಂಡು ಮಾತನಾಡುತ್ತಿಲ್ಲ. ಒಂದು ತನಿಖೆ ಪ್ರಾರಂಭ ಮಾಡಿದಾಗ ಮಾಹಿತಿ ಸೋರಿಕೆ ಆಗಬಾರದು. ಸರ್ಕಾರಕ್ಕೆ ಸಂತ್ರಸ್ತೆಯರಿಗೆ ರಕ್ಷಣೆ ಕೊಡುವುದು ಬೇಕಾಗಿಲ್ಲ. ಈ ಸರ್ಕಾರಕ್ಕೆ ಬೇಕಾಗಿರುವುದು ಕೇವಲ ಪ್ರಚಾರ ಅಷ್ಟೇ. ಹಾಸನ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ಪರ ಏಪ್ರಿಲ್ 22 ರಂದು ಬೇಲೂರಿನಲ್ಲಿ ಚುನಾವಣಾ ಪ್ರಚಾರ ಸಭೆ ನಡೆಯಿತು. ಏಪ್ರಿಲ್ 22ರಂದು ಪ್ರಜ್ವಲ್ ಪಕ್ಕದಲ್ಲಿ ಕುಳಿತ ಹೆಣ್ಣು ಮಗಳು ಯಾರು? ಅತ್ಯಾಚಾರ ಆಗಿದ್ರೆ ಆ ಹೆಣ್ಮಗಳು ಯಾಕೆ ಒಂದೇ ವೇದಿಕೆಯಲ್ಲಿ ಇರುತ್ತಿದ್ದರು? ಪ್ರಜ್ವಲ್ ಪಕ್ಕ ಆ ಹೆಣ್ಣು ಮಗಳು ಯಾಕೆ ಕುಳಿತುಕೊಳ್ಳುತ್ತಿದ್ದರು ಎಂದು ಪ್ರಶ್ನಿಸಿದರು.
ಕಾಂಗ್ರೆಸ್ ಇಷ್ಟೆಲ್ಲ ಕುತಂತ್ರ ನಡೆಸ್ತಿರೋದು ನಮ್ಮ ಮೈತ್ರಿ ಆದ ಮೇಲೆ. ಅವರ ವೇಗ, ಗ್ಯಾರಂಟಿಗಳೆಲ್ಲ ಮುಳುಗೋಯ್ತು, 25 ಸ್ಥಾನ ನಾವು ಗೆಲ್ತೀವಿ ಅಂತ ಭಯದಲ್ಲಿ ಹೀಗೆಲ್ಲ ಮಾಡಿದ್ದಾರೆ. ನಾವೇ ಒಕ್ಕಲಿಗ ನಾಯಕರು, ಒಕ್ಕಲಿಗರನ್ನು ನಮ್ಮ ಜೇಬಿನಲ್ಲಿ ಇಟ್ಟುಕೊಂಡಿದ್ದೇವೆ ಎಂದು ಅಂದುಕೊಂಡಿದ್ರಲ್ಲಾ ಅವರಿಗೆ ಪೆಟ್ಟಾಯ್ತು. ಚುನಾವಣೆಯ ಫಲಿತಾಂಶ ಏನೆಂದು ಗೊತ್ತಾಗಿದೆ. ತಮ್ಮ ಭವಿಷ್ಯದ ಬಗ್ಗೆ ತಳಮಳಗೊಂಡು ಈ ರೀತಿ ವರ್ತಿಸುತ್ತಿದ್ದಾರೆ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.
DK Shivakumar is the one behind prajwal Revanna sex video leak, HD Kumarasway demands CBI investigation. Says should even probe Rahul Gandhi in this case. He also said we don't trust in SIT, we demand that the case should be transferred to CBI for further investigation.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 07:56 pm
Mangalore Correspondent
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm