ಬ್ರೇಕಿಂಗ್ ನ್ಯೂಸ್
08-05-24 01:03 pm HK News Desk ಕರ್ನಾಟಕ
ಚಿಕ್ಕಮಗಳೂರು, ಮೇ 8: ಕುಮಾರಣ್ಣ ಕಿಂಗ್ ಆಫ್ ಬ್ಲಾಕ್ ಮೇಲರ್. ಕಥಾನಾಯಕ, ಪ್ರೊಡ್ಯೂಸರ್ ಎಲ್ಲ ಅವರೇ.. ಆದರೆ ನನ್ನ ಮೇಲೆ ಆರೋಪ ಮಾಡದಿದ್ರೆ ಮಾರ್ಕೆಟ್ ಓಡಲ್ಲ. ನನ್ನ ಹೆಸರು ಇರದಿದ್ರೆ ನೀವು ತೋರ್ಸಲ್ಲ. ನನ್ನ ಹೆಸರು ಇಲ್ಲದಿದ್ರೆ ಪಾಪ ನಿದ್ದೆಯೇ ಬರಲ್ಲ... ಹೀಗೆಂದು ಡಿಸಿಎಂ ಡಿಕೆ ಶಿವಕುಮಾರ್ ಡಿಚ್ಚಿ ಡೈಲಾಗ್ ಹೊಡೆದಿದ್ದಾರೆ.
ಚಿಕ್ಕಮಗಳೂರಿನ ರೆಸಾರ್ಟ್ ನಲ್ಲಿ ವಿಶ್ರಾಂತಿ ಪಡೆಯುತ್ತಿರುವ ಡಿಸಿಎಂ ಡಿಕೆಶಿ, ಎಚ್.ಡಿ. ಕುಮಾರಸ್ವಾಮಿ ಆರೋಪದ ಬಗ್ಗೆ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದಾರೆ. ಚುನಾವಣೆ ಮುಗೀತು ಸಿದ್ದಾರ್ಥ್ ಮನೆಗೆ ರೆಸ್ಟ್ ಗೆ ಬಂದಿದ್ದೇನೆ. ಪೆನ್ ಡ್ರೈವ್ ವಿಚಾರ ಎಲ್ಲ ಕುಮಾರಸ್ವಾಮಿಗೆ ಗೊತ್ತು. ಕುಮಾರಣ್ಣನಿಗೆ ಈಗ ನನ್ನ ರಾಜೀನಾಮೆ ಬೇಕಂತೆ. ಒಕ್ಕಲಿಗ ನಾಯಕರ ಪೈಪೋಟಿಯಂತೆ, ರಾಜೀನಾಮೆ ಬೇಕಂತೆ, ಕೊಡೋಣ ರಾಜೀನಾಮೆ.. ಮುಗಿಸೋದೇ ಅಲ್ವಾ ಅವರ ಕೆಲಸ, ಕಿಂಗ್ ಆಫ್ ಬ್ಲಾಕ್ ಮೇಲ್. ಇವರು ಆಫೀಸರ್ಸು, ಪೊಲಿಟಿಷಿಯನ್ಸ್ ಗಳಿಗೆ ಹೆದರಿಸುತ್ತಿದ್ದಾರೆ, ಅವರದು ಇದೇ ಕೆಲಸ. ಚರ್ಚೆ ಮಾಡಲು ಇನ್ನೂ ಟೈಮ್ ಇದೆ, ಅಸೆಂಬ್ಲಿ ಇದೆ, ಎಲ್ಲಾ ತಗೊಂಡ್ ಬರ್ಲಿ ಚರ್ಚೆ ಮಾಡೋಣ ಎಂದರು.
ಕೇಸಿನಲ್ಲಿ ಮೊದಲು ಅವರ ಹೆಸರು ಸ್ಟ್ಯಾಂಡ್ ಆಗಲಿ, ದೇವೇಗೌಡರು ನನ್ನ ಹೆಸರು ತೆಗೆದುಕೊಳ್ಳುವುದು ಬೇಡ ಅಂದರು. ಆದರೆ ಕುಮಾರಸ್ವಾಮಿ ರೇವಣ್ಣರದ್ದು ಬೇರೆ ಫ್ಯಾಮಿಲಿ, ನಮ್ಮದೇ ಬೇರೆ ಫ್ಯಾಮಿಲಿ ಎಂದಿದ್ದಾರೆ. ಉಪ್ಪು ತಿಂದವನು ನೀರು ಕುಡಿಬೇಕು ಎಂದವರು ಈಗ ಯಾಕೆ ಉರಿ ಮಾಡಿಕೊಳ್ಳುತ್ತಿದ್ದಾರೆ. ಇವರೇನು ಲಾಯರ್ರಾ, ಜಡ್ಜಾ... ಹೋಗಿ ಕೋರ್ಟಿನಲ್ಲಿ ವಾದ ಮಾಡಲಿ.
ಶಿವಕುಮಾರ್, ಸಿದ್ದರಾಮಯ್ಯ, ಸುರ್ಜೆವಾಲ ಇನ್ವೆಸ್ಟಿಗೇಷನ್ ಟೀಮ್ ನಲ್ಲಿದ್ದಾರೆ. ಕಥಾನಾಯಕ, ಡೈರೆಕ್ಟರ್, ಪ್ರೋಡ್ಯೂಸರ್ ಎಲ್ಲಾ ಕುಮಾರಸ್ವಾಮಿ ಅವರೇ ಇದ್ದಾರೆ, ಎಲ್ಲಾ ಗೊತ್ತಿದೆ. ಅವರ ಕಾರ್ಯಕರ್ತರು ಏನೋ ಇದ್ದಾರೆ ಅಂತೆ, ಮರ್ಯಾದೆ ಇದ್ರೆ ಹೋಗಿ ಜೈಲು ಸೇರಿದವರಿಗೆ ಧೈರ್ಯ ತುಂಬಲಿ. ಇವರೆಲ್ಲರಿಗು ನನ್ನ ಹೆಸರು ಬರಬೇಕು ಅಷ್ಟೇ. ನನ್ನ ಮೇಲೆ ಆರೋಪ ಮಾಡದಿದ್ರೆ ಮಾರ್ಕೆಟ್ ಓಡಲ್ಲ. ನನ್ನ ಹೆಸರು ಇರದಿದ್ರೆ ನೀವು ತೋರ್ಸಲ್ಲ ತಾನೇ.. ನನ್ನ ಹೆಸರು ಇಲ್ಲದಿದ್ರೆ ಪಾಪ ನಿದ್ದೆಯೇ ಬರಲ್ಲ ಎಂದು ವ್ಯಂಗ್ಯವಾಡಿದರು.
DK Shivakumar slams HD Kumaraswamy says he can't sleep without telling my name after kumarswami alleged that current Deputy Chief Minister DK Shivakumar's resignation or sacking, blaming him for the releasing the sex tapes allegedly involving Prajwal.
03-09-25 09:00 pm
HK News Desk
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
ಪ್ರೀಮಿಯಂ ಬ್ರಾಂಡ್ ಮದ್ಯಗಳ ಬೆಲೆ ಇಳಿಕೆಗೆ ಚಿಂತನೆ ;...
03-09-25 02:30 pm
Mangalore, Moodbidri Police, Constable Shanta...
03-09-25 01:36 pm
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
04-09-25 08:47 pm
HK News Desk
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
04-09-25 11:07 pm
Mangalore Correspondent
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
Brijesh Chowta, Mangalore: ಜಿಎಸ್ಟಿ ಹೊರೆ ಇಳಿಸಿ...
04-09-25 07:57 pm
Mangalore, Loudspeaker Ban: ರಾತ್ರಿ ವೇಳೆ ಧ್ವನಿ...
04-09-25 07:39 pm
KMC Attavar Performs Rare, Life-Saving Surger...
03-09-25 11:03 pm
04-09-25 01:10 pm
Udupi Correspondent
Udupi Crime, Baby Sale Racket: ಮಂಗಳೂರಿನ ಪ್ರತಿ...
04-09-25 12:25 pm
Bagalur Police, Drugs, Crime: ಬ್ಯುಸಿನೆಸ್ ವೀಸಾ...
03-09-25 05:40 pm
Gold Theft, Mangalore, Airport: ವಿಮಾನ ಪ್ರಯಾಣಿ...
02-09-25 07:09 pm
Valachil, Rape, College, Mangalore Crime: ಇನ್...
02-09-25 04:31 pm