ಬ್ರೇಕಿಂಗ್ ನ್ಯೂಸ್
08-05-24 04:37 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 8: ನಾಳೆ, ಗುರುವಾರ SSLC ಪರೀಕ್ಷೆ-1ರ ಫಲಿತಾಂಶ ಪ್ರಕಟಗೊಳ್ಳುತ್ತಿದ್ದು, ಬೆಳಗ್ಗೆ 10.30 ರಿಂದ ವೆಬ್ಸೈಟ್ ನಲ್ಲಿ ವಿದ್ಯಾರ್ಥಿಗಳು ಫಲಿತಾಂಶ ವೀಕ್ಷಿಸಬಹುದಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.
ಮಾರ್ಚ್/ಏಪ್ರಿಲ್ 2024ರ ಎಸ್ಎಸ್ಎಲ್ಸಿ ಪರೀಕ್ಷೆ-1ನ್ನು 25.03.2024 ರಿಂದ 06.04.2024ರ ವರೆಗೆ ನಡೆಸಲಾಯಿತು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿದೆ. ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಿಸುವ ಸಂಬಂಧ ನಾಳೆ (09.05.2024) ಬೆಳಗ್ಗೆ 10.30 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಕಚೇರಿಯಲ್ಲಿ ಮಾಧ್ಯಮಗೋಷ್ಟಿ ನಡೆಸಿ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಾಹಿತಿ ನೀಡಿದೆ.
ವಿದ್ಯಾರ್ಥಿಗಳು ಪರೀಕ್ಷಾ ಪ್ರವೇಶ ಪತ್ರದಲ್ಲಿ ನೀಡಿರುವ ರಿಜಿಸ್ಟರ್ ನಂಬರ್ (ನೋಂದಣಿ ಸಂಖ್ಯೆ) ಮೂಲಕ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ https://karresults.nic.in ಜಾಲತಾಣದಲ್ಲಿ ಗುರುವಾರ ಬೆಳಗ್ಗೆ 10.30 ಗಂಟೆಯ ನಂತರ ತಮ್ಮ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ.
ಇದೇ ಸಂದರ್ಭದಲ್ಲಿ ಪರೀಕ್ಷೆ-2ರ ವಿವರ ಇತ್ಯಾದಿಗಳ ಮಾಹಿತಿಯನ್ನು ಕೂಡ ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಮಂಜುಶ್ರೀ ತಿಳಿಸಿದ್ದಾರೆ.
ಇನ್ನು, ಈ ಬಾರಿ ಎಸ್ಎಸ್ಎಲ್ಸಿ ಪರೀಕ್ಷೆಗೆ 8.69 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು. ಇದರಲ್ಲಿ 4,41,910 ವಿದ್ಯಾರ್ಥಿಗಳು ಮತ್ತು 4,28,058 ವಿದ್ಯಾರ್ಥಿನಿಯರು ಪರೀಕ್ಷೆ ಬರೆದಿದ್ದರು.
The Karnataka School Examinations and Assessments Board (KSEAB) will declare the Karnataka SSLC Result 2024 on May 9. Students can check the KSEAB Class 10 results on the official website of Karnataka Results at karresults.nic.in or kseab.karnataka.gov.in. As many as 8 lakh candidates appeared for Class 10 board examination across the state this year.
03-09-25 09:00 pm
HK News Desk
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
ಪ್ರೀಮಿಯಂ ಬ್ರಾಂಡ್ ಮದ್ಯಗಳ ಬೆಲೆ ಇಳಿಕೆಗೆ ಚಿಂತನೆ ;...
03-09-25 02:30 pm
Mangalore, Moodbidri Police, Constable Shanta...
03-09-25 01:36 pm
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
04-09-25 08:47 pm
HK News Desk
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
04-09-25 11:07 pm
Mangalore Correspondent
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
Brijesh Chowta, Mangalore: ಜಿಎಸ್ಟಿ ಹೊರೆ ಇಳಿಸಿ...
04-09-25 07:57 pm
Mangalore, Loudspeaker Ban: ರಾತ್ರಿ ವೇಳೆ ಧ್ವನಿ...
04-09-25 07:39 pm
KMC Attavar Performs Rare, Life-Saving Surger...
03-09-25 11:03 pm
04-09-25 01:10 pm
Udupi Correspondent
Udupi Crime, Baby Sale Racket: ಮಂಗಳೂರಿನ ಪ್ರತಿ...
04-09-25 12:25 pm
Bagalur Police, Drugs, Crime: ಬ್ಯುಸಿನೆಸ್ ವೀಸಾ...
03-09-25 05:40 pm
Gold Theft, Mangalore, Airport: ವಿಮಾನ ಪ್ರಯಾಣಿ...
02-09-25 07:09 pm
Valachil, Rape, College, Mangalore Crime: ಇನ್...
02-09-25 04:31 pm