ಬ್ರೇಕಿಂಗ್ ನ್ಯೂಸ್
11-05-24 09:46 pm HK News Desk ಕರ್ನಾಟಕ
ಶಿವಮೊಗ್ಗ, ಮೇ.11: ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಎಸ್.ಪಿ ದಿನೇಶ್ ಪಕ್ಷೇತರ ಸ್ಪರ್ಧಿಸಲು ಮುಂದಾಗಿದ್ದಾರೆ. ಕಾಂಗ್ರೆಸ್ ಟಿಕೆಟನ್ನು ಬಿಜೆಪಿ ಬಿಟ್ಟು ಬಂದಿರುವ ಆಯನೂರು ಮಂಜುನಾಥ್ ಪಡೆಯುವುದು ಖಾತ್ರಿಯಾಗಿದ್ದು ಈ ಹಿಂದೆ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಎಸ್.ಪಿ. ದಿನೇಶ್, ಬಂಡಾಯ ಸಾರಿದ್ದಾರೆ.
ನಾನು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲು ನಿರ್ಧರಿಸಿದ್ದೇನೆ. 2006 ರಿಂದ ನಾನು ತಯಾರಿ ಮಾಡಿಕೊಂಡು ಬಂದಿದ್ದೇನೆ. ಮಾಜಿ ಸಭಾಪತಿ ಡಿ.ಎಚ್ ಶಂಕರಮೂರ್ತಿ ವಿರುದ್ಧ ಅಲ್ಪ ಮತಗಳ ಅಂತರದಲ್ಲಿ ಸೋತಿದ್ದೆ. ಈ ಬಾರಿ ಸ್ಪರ್ಧೆಗಾಗಿ ಈಗಾಗಲೇ ಎಲ್ಲ ತಯಾರಿ ಮಾಡಿಕೊಂಡಿದ್ದೇನೆ.
ಡಿ.ಕೆ ಶಿವಕುಮಾರ್ ಈ ಬಾರಿಯೂ ಟಿಕೆಟ್ ಕೊಡುತ್ತೇನೆ ಎಂದು ಆಶ್ವಾಸನೆ ನೀಡಿದ್ದರು. ಡಿಕೆಶಿ ಭರವಸೆ ಮಾತಿನಂತೆ ಎಲ್ಲಾ ಕಡೆ ಪ್ರವಾಸ ಮಾಡಿದ್ದೇನೆ. ಆದರೆ ಈಗ ಕಾಂಗ್ರೆಸ್ ಪಕ್ಷ ಬೇರೆ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ಈಗಾಗಲೇ ನಾನು ಒಂದು ಹೆಜ್ಜೆ ಮುಂದಿಟ್ಟಿದ್ದೇನೆ. ಸ್ಪರ್ಧೆಯಿಂದ ಹಿಂದೆ ಸರಿಯುವ ಮಾತೇ ಇಲ್ಲ ಎಂದರು.
ಕಾಂಗ್ರೆಸ್ ಪಕ್ಷದ ನಾಯಕರಿಗೆ ಮನವಿ ಮಾಡುತ್ತೇನೆ. ಪಕ್ಷ ನಿಷ್ಠೆ ಇರುವ ವ್ಯಕ್ತಿಗೆ ಟಿಕೆಟ್ ನೀಡಬೇಕು. ಪಕ್ಷದಿಂದ ಪಕ್ಷಕ್ಕೆ ಹಾರುವ ವ್ಯಕ್ತಿಗೆ ಕಾಂಗ್ರೆಸ್ ಟಿಕೆಟ್ ನೀಡಿದ್ದು ಸರಿಯಲ್ಲ. ಪಕ್ಷ ನಿಷ್ಠೆಯ ವ್ಯಕ್ತಿಗೆ ಟಿಕೆಟ್ ನೀಡಿದರೆ ಸ್ಪರ್ಧೆಯಿಂದ ಹಿಂದೆ ಸರಿಯುತ್ತೇನೆ. ಮೇ 15ರಂದು ನಾನು ನಾಮಪತ್ರ ಸಲ್ಲಿಸುತ್ತೇನೆ ಎಂದು ಎಸ್.ಪಿ. ದಿನೇಶ್ ಹೇಳಿದರು.
ಅಭ್ಯರ್ಥಿ ಬದಲಾವಣೆ ಮಾಡಲು ಇನ್ನೂ ಅವಕಾಶ ಇದೆ. ಪಕ್ಷದಲ್ಲಿ ಮೂಲ ಕಾಂಗ್ರೆಸ್ಸಿಗರನ್ನು ತುಳಿಯುವ ಪ್ರಯತ್ನ ನಡೆಯುತ್ತಿದೆ ಎಂದು ಹೇಳಿದ ಅವರು, ಅತಿಥಿ ಉಪನ್ಯಾಸಕರ ಬೆಂಬಲ ನನಗಿದೆ. ಯಾವುದೇ ಪಕ್ಷದ ಮುಖಂಡರೂ ನನಗೆ ಸಂಪರ್ಕಿಸಿಲ್ಲ ಎಂದಿದ್ದಾರೆ.
ನೈರುತ್ಯ ಪದವೀಧರ ಕ್ಷೇತ್ರದಲ್ಲಿ ರಘುಪತಿ ಭಟ್ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದು ಕಾಂಗ್ರೆಸ್ ಒಳಗಿನ ಬಂಡಾಯ ಬಿಜೆಪಿಗೆ ಪ್ಲಸ್ ಆಗಲಿದೆ. ಕಳೆದ ಬಾರಿ ಈ ಕ್ಷೇತ್ರವನ್ನು ಬಿಜೆಪಿಯಿಂದ ಆಯನೂರು ಮಂಜುನಾಥ್ ಗೆದ್ದುಕೊಂಡಿದ್ದರು.
SP Dinesh, who was seeking a Congress ticket from south-west graduate constituency, is contesting as an independent candidate. Ayanur Manjunath, who has quit the BJP, is likely to get the Congress ticket. Dinesh has rebelled.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm