ಬ್ರೇಕಿಂಗ್ ನ್ಯೂಸ್
12-05-24 07:08 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 12: ವಿಧಾನ ಪರಿಷತ್ ಟಿಕೆಟ್ ಕೈ ತಪ್ಪಿದ್ದಕ್ಕೆ ಮಾಜಿ ಶಾಸಕ ರಘುಪತಿ ಭಟ್ ಅಸಮಾಧಾನ ಹೊರಹಾಕಿದ್ದಾರೆ. ಶಿಕ್ಷಕರ ಕ್ಷೇತ್ರದ ಟಿಕೆಟ್ ಜೆಡಿಎಸ್‌ನ ಚಿಕ್ಕಮಗಳೂರು ಅಭ್ಯರ್ಥಿಗೆ ನೀಡಲಾಗಿದ್ದು, ಪದವೀಧರ ಕ್ಷೇತ್ರದ ಟಿಕೆಟ್ ಶಿವಮೊಗ್ಗದ ಅಭ್ಯರ್ಥಿಗೆ ನೀಡಲಾಗಿದೆ. ಈ ಮೂಲಕ ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು ಭಾಗದ ವಿದ್ಯಾವಂತ ಮತದಾರರಿಗೆ ಅನ್ಯಾಯ ಮಾಡಲಾಗಿದೆ. ಬಿಜೆಪಿಯ ಈ ನಿಲುವಿನಿಂದ ವಿಚಲಿತನಾಗಿದ್ದೇನೆ ಪೋಸ್ಟ್ ಮಾಡಿದ್ದಾರೆ.
ಪದವೀಧರ ಕ್ಷೇತ್ರದಿಂದ ಟಿಕೆಟ್ ಆಕಾಂಕ್ಷಿಯಾಗಿದ್ದ ರಘುಪತಿ ಭಟ್, ಅವಕಾಶ ತಪ್ಪಿದ ಬೆನ್ನಲ್ಲೇ ಅಸಮಾಧಾನ ವ್ಯಕ್ತಪಡಿಸಿದ ಫೇಸ್ಬುಕ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ನಾಲ್ಕು ದಶಕಗಳಿಂದ ಬಿಜೆಪಿ ಸಂಪ್ರದಾಯ ಮುರಿದು, ಕರಾವಳಿ ಭಾಗಕ್ಕೆ ನೀಡುತ್ತಿದ್ದ ಶಿಕ್ಷಕರ ಕ್ಷೇತ್ರದ ಟಿಕೆಟ್ ನೀಡದೆ ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು ಭಾಗದ ವಿದ್ಯಾವಂತ ಮತದಾರರಿಗೆ ಅನ್ಯಾಯ ಮಾಡಿದೆ ಎಂದು ರಘುಪತಿ ಭಟ್ ಹೇಳಿದ್ದಾರೆ.
ಪದವೀಧರ ಕ್ಷೇತ್ರದಿಂದ ಟಿಕೆಟ್ ಸಿಗುವ ಭರವಸೆಯಿಂದ ಸದಸ್ಯತ್ವ ಅಭಿಯಾನದಲ್ಲಿ ತೊಡಗಿಸಿಕೊಂಡು ಅತಿ ಹೆಚ್ಚು ಸದಸ್ಯರನ್ನು ನೋಂದಾಯಿಸಿದ್ದೇನೆ. ಅಲ್ಲದೆ ಪಕ್ಷ ನೀಡಿದ ಶಿವಮೊಗ್ಗ ಲೋಕಸಭಾ ಚುನಾವಣಾ ಪ್ರಭಾರಿ ಜವಾಬ್ದಾರಿಯನ್ನು 40 ದಿನಗಳ ಕಾಲ ಶಿವಮೊಗ್ಗದಲ್ಲಿ ಉಳಿದು ಪಕ್ಷದ ಪರವಾಗಿ ಕೆಲಸ ಮಾಡಿದ್ದೇನೆ ಎಂದು ಬರೆದಿದ್ದಾರೆ.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ನನಗೆ ಮಾಹಿತಿ ನೀಡದೇ, ನನ್ನನ್ನು ಬದಲಾವಣೆ ಮಾಡಿದ್ದರು. ಆದರೂ ವಿಚಲಿತನಾಗದೇ ಪಕ್ಷದ ಪರವಾಗಿ ಕೆಲಸ ಮಾಡಿದ್ದೇನೆ. ಆ ಸಂದರ್ಭದಲ್ಲಿ ಪದವೀಧರ ಕ್ಷೇತ್ರದ ಟಿಕೆಟ್ ನೀಡೋದಾಗಿ ಹಿರಿಯರು ಭರವಸೆ ನೀಡಿದ್ದರು. ಈಗ ಕರಾವಳಿ ಭಾಗಕ್ಕೆ ನೀಡುತ್ತಿದ್ದ ಶಿಕ್ಷಕರ ಕ್ಷೇತ್ರ ನೀಡದೇ ಅನ್ಯಾಯಕ್ಕೆ ನ್ಯಾಯ ಕೊಡುವರು ಯಾರು? ಇದು ಪಕ್ಷದ ಪ್ರತಿಯೊಬ್ಬ ಸಾಮಾನ್ಯ ಕಾರ್ಯಕರ್ತ ಮತ್ತು ಪಕ್ಷದ ಅಭಿಮಾನಿಗಳು ಚಿಂತಿಸುವ ಕಾಲ. ಚರ್ಚಿಸೋಣ ನಿಮ್ಮ ಸಲಹೆ ನಿರೀಕ್ಷೆಯಲ್ಲಿ ಎಂದು ತಮ್ಮ ಅಭಿಮಾನಿಗಳಿಗೆ ಕರೆ ಕೊಟ್ಟು ಮಾಜಿ ಶಾಸಕ ಬೇಸರ ಹೊರ ಹಾಕಿದ್ದಾರೆ.
Former MLA and BJP leader Raghupathi Bhat has expressed his disappointment over being denied the party ticket to contest the Legislative Council polls from Karnataka South-West Graduates’ Constituency. The party has decided to field Dr. Dhananjaya Sarji, a paediatrician and chairman of the Sarji Group of Hospitals in Shivamogga. Mr. Raghupathi Bhat, a three-time MLA from Udupi, was an aspirant for the party ticket.
25-02-25 10:30 pm
Bangalore Correspondent
Belagavi Accident, Kumbh Mela: ಬಸ್ ಗೆ ಡಿಕ್ಕಿ...
24-02-25 01:36 pm
Kumar Bangarappa, BJP President: ಬಿಜೆಪಿ ರಾಜ್ಯ...
23-02-25 06:38 pm
Telangana Model, Pramod Muthalik, CM Siddaram...
21-02-25 10:47 pm
Rohini Sindhuri, Roopa moudgil, latest news:...
21-02-25 10:12 pm
24-02-25 10:14 pm
HK News Desk
India Pak Match 2025 Live: ಪಾಕ್ ತಂಡವನ್ನು ಚಾಂಪ...
23-02-25 11:22 pm
ಗಂಗಾ ನದಿಗಿದೆ ಸ್ವಯಂ ಶುದ್ಧೀಕರಣದ ಶಕ್ತಿ ; ಕೋಟ್ಯಂತ...
23-02-25 09:52 pm
ದುಬೈನಲ್ಲಿ ಕ್ರಿಮಿನಲ್ ಇನ್ವೆಸ್ಟಿಗೇಶನ್ ಅಧಿಕಾರಿಗಳ...
22-02-25 09:48 pm
ದುಬೈ ಉದ್ಯಮಿ ಬಿ.ಆರ್ ಶೆಟ್ಟಿಗೆ ದುಬೈ ಕೋರ್ಟಿನಿಂದ ಮ...
22-02-25 07:51 pm
25-02-25 10:58 pm
Mangalore Correspondent
C-Band Doppler Weather Radar, Mangalore: ಮಂಗಳ...
25-02-25 09:34 pm
Bantwal accident, Mangalore: ಚಾಲಕಿಯ ಧಾವಂತಕ್ಕೆ...
25-02-25 02:34 pm
Puttur doctor, C Section, Mangalore: ಸಿಸೇರಿಯನ...
25-02-25 12:24 pm
Puttur News, Dr Anil Baipadithaya, hospital:...
24-02-25 02:50 pm
25-02-25 08:10 pm
Mangalore Correspondent
Mangalore, Kotekar bank robbery, Bhaskar Belc...
25-02-25 05:18 pm
Kerala Murder, Crime, Affan: ತಿರುವನಂತಪುರ ; ಒಂ...
25-02-25 01:37 pm
Delhi crime, Wife Murder: ತ್ರಿವೇಣಿ ಸಂಗಮದಲ್ಲಿ...
24-02-25 10:51 pm
Illegal drug supply, Mangalore: ಮಂಗಳೂರು ಜೈಲಿಗ...
24-02-25 09:43 pm