ಎಚ್.ಡಿ ರೇವಣ್ಣಗೆ ಕೊನೆಗೂ ಜಾಮೀನು ಮಂಜೂರು ; ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಷರತ್ತಿನ ರಿಲೀಫ್ 

13-05-24 09:17 pm       Bangalore Correspondent   ಕರ್ನಾಟಕ

ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣದಲ್ಲಿ ಸಂತ್ರಸ್ತ ಮಹಿಳೆಗೆ ಬೆದರಿಕೆ ಹಾಕಿ ಅಪಹರಿಸಲು ಪ್ರಚೋದಿಸಿದ ಆರೋಪದಲ್ಲಿ ಬಂಧನಕ್ಕೀಡಾಗಿದ್ದ ಜೆಡಿಎಸ್ ಶಾಸಕ ಎಚ್‌.ಡಿ ರೇವಣ್ಣ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತು ಬದ್ಧ ಜಾಮೀನು ನೀಡಿದೆ. 

ಬೆಂಗಳೂರು, ಮೇ 13: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣದಲ್ಲಿ ಸಂತ್ರಸ್ತ ಮಹಿಳೆಗೆ ಬೆದರಿಕೆ ಹಾಕಿ ಅಪಹರಿಸಲು ಪ್ರಚೋದಿಸಿದ ಆರೋಪದಲ್ಲಿ ಬಂಧನಕ್ಕೀಡಾಗಿದ್ದ ಜೆಡಿಎಸ್ ಶಾಸಕ ಎಚ್‌.ಡಿ ರೇವಣ್ಣ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತು ಬದ್ಧ ಜಾಮೀನು ನೀಡಿದೆ. 

ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಲ್ಲಿ ಪ್ರಕರಣದ ಕುರಿತು ವಾದ ಆಲಿಸಿದ ನ್ಯಾಯಾಧೀಶರು, ರೇವಣ್ಣಗೆ 5 ಲಕ್ಷ ರೂಪಾಯಿ ಬಾಂಡ್ ನೀಡುವಂತೆ ಸೂಚಿಸಿ ಜಾಮೀನು ಮಂಜೂರು ಮಾಡಿದರು. 

ಇಬ್ಬರ ಶ್ಯೂರಿಟಿ, 5 ಲಕ್ಷ ರೂಪಾಯಿ ಬಾಂಡ್ ನೀಡುವಂತೆ ರೇವಣ್ಣಗೆ ಸೂಚಿಸಿರುವ ಕೋರ್ಟ್ ಸಾಕ್ಷಿ ನಾಶಕ್ಕೆ ಮುಂದಾಗಬಾರದು, ಮಂಡ್ಯ ಜಿಲ್ಲೆಯ ಕೆಆರ್ ನಗರ ತಾಲೂಕಿಗೆ ಹೋಗಬಾರದು, ಸಂತ್ರಸ್ತೆಯರಿಗೆ ಬೆದರಿಕೆ ಹಾಕಬಾರದು. ಎಸ್ಐಟಿ ತನಿಖೆಗೆ ಸಹಕರಿಸಬೇಕು ಇತ್ಯಾದಿ ಷರತ್ತುಗಳ ಮೇಲೆ ಜಾಮೀನು ನೀಡಿದೆ. ಎಚ್.ಡಿ ರೇವಣ್ಣ ಮಂಗಳವಾರ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ.

A special court for people's representatives on Monday granted conditional bail to JD(S) MLA H.D. Revanna, who was arrested on charges of threatening and abetting the abduction of the victim in the pen drive case of Hassan MP Prajwal Revanna.