Bangalore KSRTC Bus accident, Bridge: ಡ್ರೈವರ್ ನಿಯಂತ್ರಣ ತಪ್ಪಿ ಫ್ಲೈ ಓವರ್ ಡಿವೈಡರ್ ಮೇಲೆ ಹತ್ತಿ ನಿಂತ KSRTC ಬಸ್ ; ಭೀಕರ ಅಪಘಾತಕ್ಕೆ 6 ಮಂದಿಗೆ ಗಾಯ, ಜಸ್ಟ್ ಮಿಸ್ ಆದ ಪ್ರಯಾಣಿಕರ ಜೀವ

18-05-24 04:18 pm       Bangalore Correspondent   ಕರ್ನಾಟಕ

ನೆಲಮಂಗಲ ಸಮೀಪದ ಅಡಕಮಾರನಹಳ್ಳಿಯ ತುಮಕೂರು ರಸ್ತೆ ಮಾದಾವರ ಫ್ಲೈಓವರ್ ಬಳಿ ಭಾರೀ ದುರಂತವೊಂದು ತಪ್ಪಿದೆ.

ಬೆಂಗಳೂರು, ಮೇ.18: ನೆಲಮಂಗಲ ಸಮೀಪದ ಅಡಕಮಾರನಹಳ್ಳಿಯ ತುಮಕೂರು ರಸ್ತೆ ಮಾದಾವರ ಫ್ಲೈಓವರ್ ಬಳಿ ಭಾರೀ ದುರಂತವೊಂದು ತಪ್ಪಿದೆ.

ಚಾಲಕನ ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್‌ ಡಿವೈಡರ್‌ಗೆ ಡಿಕ್ಕಿ ಹೊಡೆದು ಹೆದ್ದಾರಿಯ ಪಕ್ಕದ ರಸ್ತೆಗೆ ಹಾರಿದ ಘಟನೆ ನಡೆದಿದೆ.

ಪ್ರಯಾಣಿಕರನ್ನು ಹೊತ್ತು ಸೋಮವಾರಪೇಟೆಯಿಂದ ಬೆಂಗಳೂರಿಗೆ ಬರುತ್ತಿತ್ತು. ನೆಲಮಂಗಲ  ಸಮೀಪ ಬಂದಾಗ ಚಾಲಕನ ನಿಯಂತ್ರಣ ತಪ್ಪಿದ ಬಸ್‌ ಡಿವೈಡರ್‌ಗೆ ಡಿಕ್ಕಿ ಹೊಡೆದು, ಹೆದ್ದಾರಿಯ ತಡೆಗೋಡೆಯನ್ನು ಹಾರಿ ಪಕ್ಕದ ರಸ್ತೆಗೆ ಬಂದು ನಿಂತಿತ್ತು. ಇದು 40 ಅಡಿ ಎತ್ತರದ ಫ್ಲೈಓವರ್‌ನಲ್ಲಿ ಘಟನೆ ನಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಒಂದು ವೇಳೆ ಬಸ್‌ ಏನಾದರೂ 40 ಅಡಿ ಎತ್ತರದಿಂದ ಕೆಳಗೆ ಬಿದ್ದಿದ್ದರೆ, ಪ್ರಯಾಣಿಕರ ಜೀವಕ್ಕೆ ಕುತ್ತು ಬರುತ್ತಿತ್ತು. ಮಾತ್ರವಲ್ಲದೇ ರಸ್ತೆಯಲ್ಲಿ ಸಂಚರಿಸುತ್ತಿದ್ದ ಇತರೆ ವಾಹನ ಸವಾರರು ಪ್ರಾಣವನ್ನೇ ಕಳೆದುಕೊಳ್ಳಬೇಕಿತ್ತು.

ಅಪಘಾತದಲ್ಲಿ ನಾಲ್ವರಿಗೆ ಗಂಭೀರ ಗಾಯವಾಗಿದ್ದು, ಓರ್ವನ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗುತ್ತಿದೆ. ಚಾಲಕ ನಿರ್ವಾಹಕ ಸೇರಿದಂತೆ ಆರು ಮಂದಿಗೆ ಗಾಯವಾಗಿದ್ದು, ಅವರನ್ನೆಲ್ಲ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನೂ ಅಪಘಾತದಿಂದಾಗಿ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತವಾಗಿತ್ತು. ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪಕ್ಕದ ರಸ್ತೆಗೆ ಹಾರಿದ್ದ ಬಸ್‌ ಅನ್ನು ತೆರವುಗೊಳಿಸುತ್ತಿದ್ದಾರೆ.

Ksrtc bus accident in Bangalore, bus climbs over  bridge after driver looses control. Photos and videos of this has gone viral on social media. Six including driver and conducter have been injured.