ಬ್ರೇಕಿಂಗ್ ನ್ಯೂಸ್
18-05-24 07:24 pm HK News Desk ಕರ್ನಾಟಕ
ಶಿವಮೊಗ್ಗ, ಮೇ.18: ನಗರದ ಪಿಇಎಸ್ ಕಾಲೇಜು ಸಭಾಂಗಣದಲ್ಲಿ ಶನಿವಾರ ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆ ಹಿನ್ನೆಲೆ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಮತ ಯಾಚಿಸಿದರು.
ಈ ಸಂದರ್ಭದಲ್ಲಿ ಪಿಎಸ್ ಕಾಲೇಜಿನ ಆಡಳಿತ ಸಂಯೋಜಕ ಡಾ.ನಾಗರಾಜ್ ಮಾತನಾಡಿ, ಧನಂಜಯ ಸರ್ಜಿ ಅವರು ರಾಜ್ಯದ ಹೆಸರಾಂತ ಮಕ್ಕಳ ತಜ್ಞರು, ವಿದ್ಯಾವಂತರು ರಾಜಕೀಯಕ್ಕೆ ಬರಬೇಕು ಎಂದು ಪ್ರಧಾನಿ ನರೇಂದ್ರ ಮೋದಿಯವರು ಪ್ರತಿ ಬಾರಿ ಹೇಳುತ್ತಲೇ ಇರುತ್ತಾರೆ , ಅಂತೆಯೇ ಡಾ. ಧನಂಜಯ ಸರ್ಜಿ ಇಂದು ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಮ್ಮ ಮುಂದಿದ್ದಾರೆ. ಕೃಷಿ ಮತ್ತು ವ್ಯಾಪಾರ ಕುಟುಂಬದ ಹಿನ್ನೆಲೆಯಲ್ಲಿ ಬಂದ ಸರ್ಜಿ, ಉತ್ತಮ ಸೇವೆ ಸಲ್ಲಿಸುವ ಮೂಲಕ ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಿ ಇದೀಗ ನೈರುತ್ಯ ಪದವೀಧರ ಕ್ಷೇತ್ರದ ಮೂಲಕ ರಾಜಕೀಯಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಸರ್ಜಿ ಅವರಿಗೆ ಮತ ಹಾಕುವುದರ ಮೂಲಕ ಈ ಬಾರಿ ಅವರನ್ನು ವಿಧಾನ ಪರಿಷತ್ ಗೆ ಆಯ್ಕೆ ಮಾಡಿ ಕಳುಹಿಸಬೇಕು ಎಂದು ಮನವಿ ಮಾಡಿದರು.
ರಾಜ್ಯ ಪ್ರಕೋಷ್ಟಗಳ ಸಂಯೋಜಕ ಎಸ್. ದತ್ತಾತ್ರಿ ಮಾತನಾಡಿ, ಕಳೆದ ಮೂವತ್ತು ವರ್ಷಗಳಿಂದ ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಗೆದ್ದಿದೆ. ಈ ಹಿಂದೆ ನೈರುತ್ಯ ಪದವೀಧರ ಕ್ಷೇತ್ರವನ್ನು ಡಿ.ಎಚ್. ಶಂಕರಮೂರ್ತಿ ಪ್ರತಿನಿಧಿಸುತ್ತಿದ್ದರು ಈ ಬಾರಿ ಡಾ. ಧನಂಜಯ ಸರ್ಜಿ ಅವರಿಗೆ ಗುರುತಿಸಿ ಪಕ್ಷ ಟಿಕೆಟ್ ನೀಡಿದೆ. ನಾವೆಲ್ಲರೂ ಸರ್ಜಿ ಅವರ ರಾಯಭಾರಿಗಳಾಗಿ ಕೆಲಸ ಮಾಡಬೇಕು ಎಂದರು.
ಈ ಚುನಾವಣೆಯಲ್ಲಿ ಇವಿಎಂ ಇರುವುದಿಲ್ಲ, ಬದಲಾಗಿ ಬ್ಯಾಲೆಟ್ ಪೇಪರ್ ಇರುತ್ತದೆ, ತಾವೆಲ್ಲರೂ ಡಾ.ಧನಂಜಯ ಸರ್ಜಿ ಹೆಸರಿನ ಮುಂದೆ ಒಂದು ಗೆರೆ ಎಳೆಯುವ ಮೂಲಕ ಮೊದಲ ಪ್ರಾಶಸ್ತ್ಯದ ಮತವನ್ನು ಹಾಕಬೇಕು. ಮಧ್ಯ ಕರ್ನಾಟಕ ಭಾಗದಲ್ಲಿ ಹೆಚ್ಚು ಪ್ರಖ್ಯಾತಿ ಹೊಂದಿರುವ ಡಾ.ಸರ್ಜಿ ವಿಧಾನ ಪರಿಷತ್ ಗೆ ಆಯ್ಕೆಯಾಗಿ ಹೋದರೆ ಪದವೀಧರರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಸಫಲರಾಗುತ್ತಾರೆ ಎಂದು ಹೇಳಿದರು.
ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಮಾತನಾಡಿ, ಹುಟ್ಟಿದಾಗ ಹೆಸರು ಇರುವುದಿಲ್ಲ, ಉಸಿರು ಇರುತ್ತದೆ, ಮರಣ ಹೊಂದಿದ ಮೇಲೆ ಉಸಿರು ಇರುವುದಿಲ್ಲ, ಹೆಸರು ಇರುತ್ತದೆ, ಹುಟ್ಟು ಮತ್ತು ಸಾವುಗಳ ನಡುವೆ ನಾವು ಸಾಧನೆಗಳನ್ನು ಮಾಡಿ ಹೆಸರನ್ನ ಸಂಪಾದಿಸಬೇಕು. ರೈತರು, ಯೋಧರಂತೆ ದೇಶದ ಬೆನ್ನೆಲುಬು ಪದವೀಧರರು. ದೇಶದ ಭವ್ಯ ಭವಿಷ್ಯದ ನಿರ್ಮಾಣದಲ್ಲಿ ಪದವೀಧರರ ಪಾತ್ರ ಬಹಳ ಮುಖ್ಯ. ಪದವೀಧರರ ಸಮಸ್ಯೆಗಳನ್ನು ಅತಿ ಹತ್ತಿರದಿಂದ ಬಲ್ಲವನಾಗಿದ್ದು, ಪದವೀಧರರ ಸಮಸ್ಯೆಗಳಿಗೆ ಸ್ಪಂದಿಸುತ್ತೇನೆ ಎಂದು ಭರವಸೆ ನೀಡಿದರು.
ಶಿವಮೊಗ್ಗ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿ. ಎಚ್. ಮಾಲತೇಶ್ ಹಾಜರಿದ್ದರು. ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿ, ಪದವೀಧರರು ಹಾಜರಿದ್ದರು.
Vote for Dr Dhananjaya Sarji in Vidhan Parishad elections says Dr Nagraj in Shivamogga. P s college adminstration Nagraj has stood has support to make Dr Dhananjaya Sarji win the coming Vidhan Parishad elections.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm