ಬ್ರೇಕಿಂಗ್ ನ್ಯೂಸ್
19-05-24 10:42 am HK News Desk ಕರ್ನಾಟಕ
ಹುಬ್ಬಳ್ಳಿ , ಮೇ 19: ಯುವತಿ ಅಂಜಲಿ ಅಂಬಿಗೇರ ಕೊಲೆ ಪ್ರಕರಣ ಸಂಬಂಧ ಮತ್ತೊಬ್ಬ ಹಿರಿಯ ಪೊಲೀಸ್ ಅಧಿಕಾರಿಯ ತಲೆದಂಡವಾಗಿದೆ. ಅಂಜಲಿ ಕೊಲೆ ಹಿನ್ನೆಲೆಯಲ್ಲಿ ನಿರ್ಲಕ್ಷ್ಯ ವಹಿಸಿದ್ದ ಆರೋಪದ ಮೇಲೆ ಈ ಹಿಂದೆ ಪೊಲೀಸ್ ಇನ್ಸ್ಪೆಕ್ಟರ್ ಹಾಗೂ ಮಹಿಳಾ ಹೆಡ್ಕಾನ್ಸ್ಟೆಬಲ್ ಇಬ್ಬರನ್ನ ಅಮಾನತು ಮಾಡಲಾಗಿತ್ತು. ಈಗ ಶನಿವಾರ ಹುಬ್ಬಳ್ಳಿ-ಧಾರವಾಡ ಕಾನೂನು ಸುವ್ಯವಸ್ಥೆ ಡಿಸಿಪಿ ಯನ್ನ ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕಾನೂನು ಸುವ್ಯವಸ್ಥೆ ಡಿಸಿಪಿ ರಾಜೀವ್ ಅಮಾನತಾದ ಅಧಿಕಾರಿ. ಈ ಹತ್ಯೆ ಪ್ರಕರಣದಲ್ಲಿ ಮೂವರು ಪೊಲೀಸರ ಅಮಾನತಾದಂತಾಗಿದೆ.
ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣೆಗೆ ಅಂಜಲಿ ಕುಟುಂಬದವರು ಹೋಗಿ ಮಾಹಿತಿ ನೀಡಿದ ಬಳಿಕವೂ ಪೊಲೀಸರು ಕ್ರಮ ಜರುಗಿಸಿಲ್ಲ ಎಂಬ ಆರೋಪ ಕೇಳಿ ಬಂದಿತ್ತು. ಇದರ ಬೆನ್ನಲ್ಲೇ ಹುಬ್ಬಳ್ಳಿ - ಧಾರವಾಡ ಪೊಲೀಸ್ ಕಮೀಷನರ್ ರೇಣುಕಾ ಇನ್ಸ್ಪೆಕ್ಟರ್ ಚಂದ್ರಶೇಖರ ಚಿಕ್ಕೋಡಿ ಹಾಗೂ ರೇಖಾ ಹಾವರಡ್ಡಿ ಯನ್ನ ಅಮಾನತು ಮಾಡಿದ್ದರು. ಇನ್ನೂ ಕೆಲ ಅಧಿಕಾರಿಗಳ ಮೇಲೆ ನಿರ್ಲಕ್ಷ್ಯ ಆರೋಪ ಮಾಡಲಾಗಿದ್ದು ಅವರಿಗೂ ಕ್ರಮದ ಭಯ ಕಾಡುತ್ತಿದೆ.
ಪ್ರೀತಿ ನಿರಾಕರಿಸಿದ್ದಕ್ಕೆ ಕಳೆದ ಮೇ 15 ರಂದು ಮುಂಜಾನೆ ಹುಬ್ಬಳ್ಳಿಯ ವೀರಾಪುರ ಓಣಿಯ ನಿವಾಸಿ ಅಂಜಲಿ (20) ಮನೆಗೆ ನುಗ್ಗಿದ ಯುವಕ ಚಾಕುವಿನಿಂದ ಎದೆ, ಹೊಟ್ಟೆ ಹಾಗೂ ಕುತ್ತಿಗೆ ಇರಿದು ಪರಾರಿಯಾಗಿದ್ದ. ಏಕಾಏಕಿ ಚಾಕುವಿನಿಂದ ಹಲ್ಲೆ ಮಾಡಿದ್ದರಿಂದ ಮನೆಯವರ ಎದುರಲ್ಲೇ ಯುವತಿ ಅಂಜಲಿ ಕೊನೆಯುಸಿರೆಳೆದಿದ್ದಳು. ಬಳಿಕ ತಲೆಮರೆಸಿಕೊಂಡಿದ್ದ ಆರೋಪಿ ವಿಶ್ವ ಅಲಿಯಾಸ್ ಗಿರೀಶ್ (21) ಎಂಬಾತನನ್ನು ದಾವಣಗೆರೆಯಲ್ಲಿ ರೈಲ್ವೆ ಪೊಲೀಸರ ನೆರವಿನೊಂದಿಗೆ ಬಂಧಿಸಿ ಹುಬ್ಬಳ್ಳಿಗೆ ಕರೆತರಲಾಗಿದೆ.
Karnataka Police Suspends DCP P Rajeev For Alleged Negligence In Anjali murder case in Hubballi. It is said that Rajeev has shown negligence in the case and therefore state government has issued for suspension.
22-12-25 06:29 pm
HK News Desk
ಸ್ಥಳೀಯ ಮಟ್ಟದಲ್ಲೇ ಗೊಂದಲ ಬಗೆಹರಿಸಿಕೊಳ್ಳಿ, ಎಲ್ಲದಕ...
21-12-25 05:33 pm
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
22-12-25 06:32 pm
HK News Desk
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
22-12-25 06:36 pm
Mangalore Correspondent
ಕೋಳಿ ಅಂಕದಲ್ಲಿ ಪೆಟ್ಟು ಕೊಡಲು ಇವರ ಅಪ್ಪನ ಜಾಗವಾ?...
22-12-25 12:26 pm
ಕೇಪು ಜಾತ್ರೆ ಕೋಳಿ ಅಂಕಕ್ಕೆ ಎರಡನೇ ದಿನವೂ ಪೊಲೀಸ್ ದ...
21-12-25 11:04 pm
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
22-12-25 04:00 pm
Mangalore Correspondent
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm