ಬ್ರೇಕಿಂಗ್ ನ್ಯೂಸ್
19-05-24 11:54 am Bangalore Correspondent ಕರ್ನಾಟಕ
ಬೆಂಗಳೂರು, ಮೇ 19: ಬೆಂಗಳೂರಿನಿಂದ ಕೊಚ್ಚಿಗೆ ಪ್ರಯಾಣಿಸುತ್ತಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನದ ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ಹಿನ್ನೆಲೆ ವಿಮಾನವನ್ನ ತುರ್ತು ಲ್ಯಾಂಡಿಂಗ್ ಮಾಡಿ ಅನಾಹುತ ತಪ್ಪಿದೆ. ವಿಮಾನದಲ್ಲಿದ್ದ 179 ಪ್ರಯಾಣಿಕರು ಸೇಫ್ ಆಗಿದ್ದಾರೆ. 25 ಜನಕ್ಕೆ ಸಣ್ಣಪುಟ್ಟ ಗಾಯಗಳಾಗಿವೆ.
ರಾತ್ರಿ 11.20ಕ್ಕೆ ಕೊಚ್ಚಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೂಡಲೇ ಎಚ್ಚೆತ್ತುಕೊಂಡ ಪೈಲಟ್ ತಕ್ಷಣವೇ ತುರ್ತು ಭೂ ಸ್ಪರ್ಶ ಮಾಡಿದ್ದಾರೆ. ಬಳಿಕ ವಿಮಾನದಲ್ಲಿದ್ದ 179 ಪ್ರಯಾಣಿಕರನ್ನು ಸೇಫ್ ಆಗಿ ಕೆಳಗೆ ಇಳಿಸಿದ್ದಾರೆ. ಲ್ಯಾಂಡಿಂಗ್ ಮಾಡಿ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಘಟನೆಯಲ್ಲಿ 25ಕ್ಕೂ ಹೆಚ್ಚು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಘಟನೆ ಬಗ್ಗೆ ಮಾಹಿತಿ ನೀಡಿರುವ ಬೆಂಗಳೂರು ವಿಮಾನ ನಿಲ್ದಾಣ ಅಧಿಕಾರಿ, ಲ್ಯಾಂಡಿಂಗ್ ನಂತರ ಎಲ್ಲಾ 179 ಪ್ರಯಾಣಿಕರು ಮತ್ತು ಆರು ಸಿಬ್ಬಂದಿಯನ್ನು ವಿಮಾನದಿಂದ ಯಶಸ್ವಿಯಾಗಿ ಸ್ಥಳಾಂತರಿಸಲಾಯಿತು. ಬೆಂಕಿ ಕಾಣಿಸಿಕೊಂಡ ಸಂದರ್ಭದಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಯಿತು ಮತ್ತು ವಿಮಾನ ಲ್ಯಾಂಡ್ ಆದ ತಕ್ಷಣ ಬೆಂಕಿಯನ್ನು ನಂದಿಸಲಾಯಿತು ಎಂದು ಎಂದು ಸ್ಪಷ್ಟಪಡಿಸಿದ್ದಾರೆ.
ಏರ್ಲೈನ್ ಘಟನೆ ಬಗ್ಗೆ ಸ್ಪಷ್ಟನೆ ನೀಡಿದ್ದು, ಟೇಕಾಫ್ ಆದ ನಂತರ ಬಲ ಇಂಜಿನ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಬಗ್ಗೆ ಶಂಕೆ ವ್ಯಕ್ತವಾಗಿತ್ತು. ಪರಿಣಾಮ ಬೆಂಗಳೂರು-ಕೊಚ್ಚಿ ವಿಮಾನವನ್ನು ವಾಪಸ್ ಲ್ಯಾಂಡಿಗ್ ಮಾಡಲಾಯಿತು. ಲ್ಯಾಂಡ್ ಆಗುತ್ತಿದ್ದಂತೆ ಬೆಂಕಿ ನಂದಿಸುವ ಕಾರ್ಯ ಮಾಡಲಾಗಿದೆ.
Bengaluru: An Air India Express flight from Bengaluru to Kochi had an emergency landing at the Kempegowda International Airport minutes after take-off, late on Saturday night, after one of the aircraft engines caught fire.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
12-01-26 01:54 pm
Mangaluru Staffer
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm