ಬ್ರೇಕಿಂಗ್ ನ್ಯೂಸ್
20-05-24 01:44 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.20 : ಉದ್ಯಾನ ನಗರಿಯ ಎಲೆಕ್ಟ್ರಾನಿಕ್ ಸಿಟಿ ಬಳಿಯ ಫಾರ್ಮ್ ಹೌಸ್ ಒಂದರಲ್ಲಿ ನಸುಕಿನ ವರೆಗೂ ನಡೆದಿದ್ದ ರೇವ್ ಪಾರ್ಟಿ ಮೇಲೆ ಬೆಂಗಳೂರಿನ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದು ತೆಲುಗು ನಟ, ನಟಿಯರು, ಮಾಡೆಲ್ಗಳು ಸಿಕ್ಕಿಬಿದ್ದಿದ್ದಾರೆ.
ಪಾರ್ಟಿಯಲ್ಲಿ ಎಂಡಿಎಂಎ ಡ್ರಗ್ಸ್ ಮಾತ್ರೆಗಳು, ಕೊಕೇನ್ ರೀತಿಯ ಡ್ರಗ್ಸ್ ಪತ್ತೆಯಾಗಿದೆ. ಪಾರ್ಟಿ ಆಯೋಜಕ ಹಾಗೂ ಮೂವರು ಡ್ರಗ್ ಪೆಡ್ಲರ್ ಸೇರಿ ಐವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ತೆಲುಗು ಹೀರೋಯಿನ್ ಒಬ್ಬರ ಹುಟ್ಟುಹಬ್ಬದ ಹೆಸರಿನಲ್ಲಿ ಪಾರ್ಟಿ ನಡೆಸಲಾಗಿತ್ತು. ಸಂಜೆ 5 ಗಂಟೆ ವೇಳೆಗೆ ಪಾರ್ಟಿ ಶುರುವಾಗಿದ್ದು ನೂರಕ್ಕೂ ಹೆಚ್ಚು ಮಂದಿ ಪಾಲ್ಗೊಂಡಿದ್ದರು. ನಸುಕಿನಲ್ಲಿ ಮಾದಕ ವಸ್ತು ನಿಗ್ರಹ ದಳದ ಪೊಲೀಸರು ರೈಡ್ ಮಾಡಿದ್ದಾರೆ. ಪಾರ್ಟಿಯಲ್ಲಿ ಕರ್ನಾಟಕದಲ್ಲಿರುವ ಆಂಧ್ರಪ್ರದೇಶ ಮೂಲದ ವ್ಯಕ್ತಿಗಳು ಹಾಗೂ ತೆಲುಗು ನಟ - ನಟಿಯರು, ಮಾಡೆಲ್ ಗಳು ಪಾಲ್ಗೊಂಡಿದ್ದರು. ಫಾರ್ಮ್ ಹೌಸ್ ಗೋಪಾಲ್ ಎಂಬುವರಿಗೆ ಸೇರಿದ್ದಾಗಿದ್ದು ಹೈದರಾಬಾದ್ ಮೂಲದ ವಾಸು ಎಂಬಾತ ಪಾರ್ಟಿ ಆಯೋಜನೆ ಮಾಡಿದ್ದ. ಪಾರ್ಟಿಗೆ ಬರುವ ಅತಿಥಿಗಳನ್ನು ಹೈದರಾಬಾದ್ ನಿಂದ ಬೆಂಗಳೂರಿಗೆ ಕರೆತರಲು ವಿಶೇಷ ವಿಮಾನಗಳನ್ನು ಬುಕ್ ಮಾಡಿದ್ದರು ಎನ್ನಲಾಗುತ್ತಿದೆ. ಬೆಂಗಳೂರಿಗೆ ಬಂದಿಳಿದ ನಂತರ ಅವರನ್ನು ಪಾರ್ಟಿ ಸ್ಥಳಕ್ಕೆ ಕರೆದೊಯ್ಯಲು ಆಡಿ, ಮರ್ಸಿಡಿಸ್ ಬೆಂಜ್, ಜಾಗ್ವಾರ್ ಸೇರಿದಂತೆ 15ಕ್ಕೂ ಹೆಚ್ಚು ಐಶಾರಾಮಿ ಕಾರುಗಳನ್ನು ಬಳಸಲಾಗಿತ್ತೆಂದು ಹೇಳಲಾಗಿದೆ.
Ccb police raid rave party in Bengalore farmhouse, seize cocaine, drug pills, telugu actor, actress found including heme. The farmhouse was allegedly owned by Gopala Reddy, the owner of Con Card, and the party was organized by a Hyderabad-based man Vasu. The police seized 17 MDMA tablets and cocaine from the scene. According to police sources, more than 100 participants, including techies, Telugu film actors, models, and young men and women from Bengaluru and Andhra Pradesh, were at the rave party.
11-01-25 10:53 pm
HK News Desk
ಕೊಪ್ಪದ ಮೇಗೂರು ಅರಣ್ಯದಲ್ಲಿ ಶರಣಾಗಿದ್ದ ನಕ್ಸಲರ ಶಸ...
11-01-25 10:27 pm
BBMP Raid, Lokayukta; ಬಿಬಿಎಂಪಿ 50 ಕಡೆಗಳಲ್ಲಿ ಲ...
11-01-25 09:14 pm
CT Ravi,Threat, Lakshmi Hebbalkar; ಬೆಳಗಾವಿ ಅಭ...
11-01-25 02:11 pm
Asha Strick, CM Siddaramaiah ಆಶಾ ಕಾರ್ಯಕರ್ತೆಯರ...
10-01-25 11:01 pm
09-01-25 12:11 pm
HK News Desk
ತಿರುಪತಿಯಲ್ಲಿ ಕಾಲ್ತುಳಿತಕ್ಕೆ ಏಳು ಸಾವು ; ವೈಕುಂಠ...
09-01-25 11:22 am
StalinCM, Lipi: ಸಿಂಧೂ ನಾಗರಿಕತೆಯ ಲಿಪಿಗಳನ್ನು ಅರ...
08-01-25 11:07 pm
Crime News, Nagpur Couple: ಮಧ್ಯರಾತ್ರಿವರೆಗೆ 26...
08-01-25 10:53 pm
ಹೊಸವರ್ಷದ ಆರಂಭದಲ್ಲೇ ಟಿಬೆಟ್ ಮಂದಿಗೆ ಭಾರಿ ಆಘಾತ ;...
07-01-25 06:32 pm
11-01-25 10:34 pm
Mangalore Correspondent
Mangalore Lit Fest 2025, Hardeep Singh Puri;...
11-01-25 07:19 pm
DYFI, CM Siddaramaiah, IPS Anupam Agrawal; ಪೊ...
11-01-25 04:57 pm
Lava Kusha Jodukare Kambala, Mangalore; ತೃತೀಯ...
11-01-25 02:25 pm
Mangalore Annamalai, Naxals: ನಕ್ಸಲ್ ಶರಣಾಗತಿ ಬ...
11-01-25 12:44 pm
11-01-25 10:21 pm
Mangalore Correspondent
Mumbai Crime, Fruad, Torres Ponzi: ಚೈನ್ ಸ್ಕೀಮ...
10-01-25 11:05 pm
Bangladeshi national illegal, Mangalore: ಮುಕ್...
10-01-25 09:51 pm
Mangalore Robbery, Crime, Singari Beedi: ಸಿಂಗ...
10-01-25 10:11 am
Share Market Scam, Mangalore: ಷೇರು ಮಾರುಕಟ್ಟೆ...
09-01-25 10:43 pm