Water death, Mysuru News: ಮೈಸೂರಿನಲ್ಲಿ ಕಲುಷಿತ ನೀರು ಸೇವಿಸಿ 48ಕ್ಕೂ ಹೆಚ್ಚು ಜನರ ನರಕಯಾತನೆ ; ನಾಲ್ವರ ಸ್ಥಿತಿ ಚಿಂತಾಜನಕ, 24 ವರ್ಷದ ಯುವಕನ ಜೀವತೆಗೆದ ಜಲ !

21-05-24 05:02 pm       HK News Desk   ಕರ್ನಾಟಕ

ಕಲುಷಿತ ನೀರು ಸೇವನೆ ಮಾಡಿ ಅಸ್ವಸ್ಥಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ಮೈಸೂರು ತಾಲ್ಲೂಕಿನ ಕೆ.ಸಾಲುಂಡಿ ಗ್ರಾಮದಲ್ಲಿ ನಡೆದಿದೆ. 

ಮೈಸೂರು, ಮೇ 21: ಕಲುಷಿತ ನೀರು ಸೇವನೆ ಮಾಡಿ ಅಸ್ವಸ್ಥಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ಮೈಸೂರು ತಾಲ್ಲೂಕಿನ ಕೆ.ಸಾಲುಂಡಿ ಗ್ರಾಮದಲ್ಲಿ ನಡೆದಿದೆ. 

ಉಳಿದಂತೆ 48ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಲುಷಿತ ನೀರು ಸೇವಿಸಿ ಕನಕರಾಜು (24) ಎಂಬ ಯುವಕ ತೀವ್ರವಾಗಿ ಅಸ್ವಸ್ಥಗೊಂಡು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ. ಆದರೆ ಇಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಮುಂಜಾಗ್ರತಾ ಕ್ರಮವಾಗಿ ಕೆ.ಸಾಲುಂಡಿ ಗ್ರಾಮಕ್ಕೆ ವೈದ್ಯಾಧಿಕಾರಿಗಳ ತಂಡದೊಂದಿಗೆ ಆಂಬ್ಯುಲೆನ್ಸ್​ಗಳನ್ನು ಕಳುಹಿಸಿಕೊಡಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಕುಮಾರಸ್ವಾಮಿ ಮಾಹಿತಿ ತಿಳಿಸಿದ್ದಾರೆ.

ಸೂಕ್ತ ಕ್ರಮಕ್ಕೆ ಸಿಎಂ ಸೂಚನೆ:

ಕಲುಷಿತ ನೀರು ಸೇವಿಸಿ ಸಾವು ಸಂಭವಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿ ಜೊತೆ ದೂರವಾಣಿ ಮೂಲಕ ಮಾತನಾಡಿ ಮಾಹಿತಿ ಪಡೆದುಕೊಂಡರು.

ನೀರು ಕಲುಷಿತಗೊಳ್ಳಲು ಕಾರಣವೇನು ಎಂಬುದನ್ನು ಪತ್ತೆ ಹಚ್ಚಿ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕಲುಷಿತ ನೀರು ಸೇವನೆಯಿಂದ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವವರ ಚಿಕಿತ್ಸೆಗೆ ಸೂಕ್ತ ವ್ಯವಸ್ಥೆ ಮಾಡುವಂತೆ ಆದೇಶಿಸಿದ್ದಾರೆ.

ಆಸ್ಪತ್ರೆಗೆ ಶಾಸಕ ಜಿ.ಟಿ. ದೇವೇಗೌಡ ಭೇಟಿ: 

ಕಲುಷಿತ ನೀರು ಸೇವನೆ ಮಾಡಿ ಅಸ್ವಸ್ಥಗೊಂಡು ಚಿಕಿತ್ಸೆ ಪಡೆಯುತ್ತಿರುವವರನ್ನು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಇದೇ ವೇಳೆ ಮೃತ ಯುವಕನ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ ನೀಡುವಂತೆ ಆಗ್ರಹಿಸಿದರು.

ಈ ಬಗ್ಗೆ ಮೈಸೂರು ಜಿಲ್ಲಾ ಆರೋಗ್ಯಾಧಿಕಾರಿಗಳು ಪ್ರತಿಕ್ರಿಯಿಸಿದ್ದು, ಕಲುಷಿತ ನೀರಿನಿಂದಲೇ ಈ ಪ್ರಕರಣ ಆಗಿದೆ ಎಂಬುದು ಖಚಿತವಾಗಿಲ್ಲ. ನೀರನ್ನು ಪ್ರಯೋಗಾಲಕ್ಕೆ ಕಳುಹಿಸಲಾಗಿದೆ. ವರದಿ ಬರಬೇಕಿದೆ. ಸದ್ಯಕ್ಕೆ ಗ್ರಾಮದಲ್ಲೇ ತುರ್ತು ವೈದ್ಯಕೀಯ ಚಿಕಿತ್ಸೆಗೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಹೇಳಿದ್ದಾರೆ.

Mysuru 23 old youth dies after drinking contaminated water, 48 people fall sick. The diseased has been identified as kanakaraju. CM Siddaramaiah spoken to the health department to conduct Probe over the water contamination.