ಬ್ರೇಕಿಂಗ್ ನ್ಯೂಸ್
23-05-24 02:07 pm HK NEWS ಕರ್ನಾಟಕ
ಬೆಂಗಳೂರು, ಮೇ 23: ಬೆಂಗಳೂರಿನ ಪ್ರಮುಖ ಪ್ರದೇಶಗಳಲ್ಲಿರುವ ಮೂರು ಹೋಟೆಲ್‌ಗಳಿಗೆ ಹುಸಿ ಬಾಂಬ್ ಬೆದರಿಕೆ ಇ-ಮೇಲ್ ಬಂದಿದ್ದು, ಮಧ್ಯರಾತ್ರಿ 2 ಗಂಟೆಗೆ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಲಾಗಿದೆ.
ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಪ್ರಮುಖ ಒಟೆರಾ ಹೋಟೆಲ್ ಸೇರಿದಂತೆ ನಗರದ ಮೂರು ಹೋಟೆಲ್‌ಗಳಿಗೆ ಬಾಂಬ್ ಬೆದರಿಕೆ ಇಮೇಲ್‌ಗಳು ಬಂದಿವೆ. ಗುರುವಾರ ಬೆಳಗ್ಗೆ ಹೋಟೆಲ್ ಸಿಬ್ಬಂದಿ ಮೇಲ್ ಪರಿಶೀಲಿಸಿದಾಗ ಬೆದರಿಕೆ ಸಂದೇಶ ಬಂದಿರುವುದು ಬೆಳಕಿಗೆ ಬಂದಿದೆ.
ಇ-ಮೇಲ್ ನೋಡುತ್ತಿದ್ದಂತೆ ಸ್ಥಳೀಯ ಪೊಲೀಸ್ ಇನ್ನಿತರ ಸರ್ಕಾರಿ ಅಧಿಕಾರಿಗಳಿಗೆ ಮಾಹಿತಿ ರವಾನಿಸಿದ್ದಾರೆ. ಇದರಂತೆ ಸ್ಥಳಕ್ಕೆ ಬಂದ ಪೊಲೀಸರು ಒಟೆರಾ ಹೋಟೆಲ್‌ನಲ್ಲಿ ಅತ್ಯಧಿಕ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಿದರು.

ಬಳಿಕ ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ಆರಂಂಭಿಸಿದೆ. ಅಧಿಕಾರಿಗಳು ಸಹ ಸ್ಥಳದಲ್ಲಿದ್ದು, ಕೂಲಂಕುಷವಾಗಿ ಪರಿಶೀಲನೆ ನಡೆಸಿದ್ದಾರೆ.
ಬಾಂಬ್ ಬೆದರಿಕೆ ಕುರಿತು ಮಾಹಿತಿ ಪಸರುತ್ತಿದ್ದಂತೆ ಹೋಟೆಲ್‌ಗಳ ಮುಂದೆ, ಕೆಲವು ಗಂಟೆಗಳ ಅನಿಶ್ಚಿತ ಮತ್ತು ಆತಂಕದ ವಾತಾವರಣ ಏರ್ಪಟ್ಟಿತ್ತು. ಬಳಿಕ ಪೊಲೀಸರು ಬಾಂಬ್ ಬೆದರಿಕೆಯನ್ನು ಸುಳ್ಳು ಎಂದು ಘೋಷಿಸಿದರು.
ಹೋಟೆಲ್ ಸಿಬ್ಬಂದಿ ಮತ್ತು ಅತಿಥಿಗಳಿಗೆ ಅಗತ್ಯವಾದ ರಕ್ಷಣೆ, ಘಟನೆ ಬಗ್ಗೆ ಸೂಕ್ತ ಮಾಹಿತಿ ನೀಡಿದರು. ಜೊತೆಗೆ ಈ ಹೋಟೆಲ್‌ಗಳಲ್ಲಿ ಯಾವುದೇ ಸ್ಪೋಟಕ, ಬಾಂಬ್ ನಂತಹ ವಸ್ತುಗಳು ಪತ್ತೆ ಆಗಿಲ್ಲ ಎಂದು ಅಭಯ ನೀಡಿದರು.ನಂತರ ಹೋಟೆಲ್‌ನಲ್ಲಿ ತಂಗಿದ್ದವರು, ಹೋಟೆಲ್ ಸಿಬ್ಬಂದಿ ಮತ್ತು ಮಾಲೀಕರು ನಿಟ್ಟುಸಿರು ಬಿಟ್ಟರು.
ಈ ಸಂಬಂಧ ಆಗ್ನೇಯ ವಿಭಾಗದ ಪೊಲೀಸರು ಪ್ರಕರಣಗಳನ್ನು ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಈ ಹಿಂದೆ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇಟ್ಟು ಸ್ಪೋಟಿಸಲಾಗಿತ್ತು. ಅದಾದ ಬಳಿಕ ಇಂತಹ ಹುಸಿ ಬಾಂಬ್ ಬೆದರಿಕೆಗಳು ಹೆಚ್ಚಾಗಿದ್ದು, ಜನರಲ್ಲಿ ಆತಂಕ ಹುಟ್ಟಿಸುವ ಪ್ರಯತ್ನಗಳನ್ನು ಮಾಡಲಾಗುತ್ತಿದೆ.
The Bengaluru police on Thursday said three well-known hotels in Bengaluru received emails threatening a bomb blast. These hotels include The Oterra, said DCP South East Bengaluru.
22-12-25 06:29 pm
HK News Desk
ಸ್ಥಳೀಯ ಮಟ್ಟದಲ್ಲೇ ಗೊಂದಲ ಬಗೆಹರಿಸಿಕೊಳ್ಳಿ, ಎಲ್ಲದಕ...
21-12-25 05:33 pm
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
22-12-25 06:32 pm
HK News Desk
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
22-12-25 06:36 pm
Mangalore Correspondent
ಕೋಳಿ ಅಂಕದಲ್ಲಿ ಪೆಟ್ಟು ಕೊಡಲು ಇವರ ಅಪ್ಪನ ಜಾಗವಾ?...
22-12-25 12:26 pm
ಕೇಪು ಜಾತ್ರೆ ಕೋಳಿ ಅಂಕಕ್ಕೆ ಎರಡನೇ ದಿನವೂ ಪೊಲೀಸ್ ದ...
21-12-25 11:04 pm
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
22-12-25 04:00 pm
Mangalore Correspondent
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm