ಬ್ರೇಕಿಂಗ್ ನ್ಯೂಸ್
23-05-24 10:58 pm Bengaluru Correspondent ಕರ್ನಾಟಕ
Photo credits : News First Kannada
ಬೆಂಗಳೂರು, ಮೇ 23: ವೈದ್ಯರ ನಿರ್ಲಕ್ಷ್ಯ ಮತ್ತು ಖಾಸಗಿ ಆಸ್ಪತ್ರೆಯ ಹಣದಾಹಕ್ಕೆ ಬಾಣಂತಿ ಪ್ರಾಣ ಕಳೆದುಕೊಂಡಿರುವ ಆರೋಪ ಕೇಳಿ ಬಂದಿದೆ. ಓಲ್ಡ್ ಏರ್‌ಪೋರ್ಟ್ ರಸ್ತೆಯಲ್ಲಿರುವ ಕ್ಲೌಡ್ ನೈನ್ ಆಸ್ಪತ್ರೆ ವಿರುದ್ಧ ಮಹಿಳೆಯ ಕುಟುಂಬಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಜೀವನ್ ಭೀಮಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಕ್ಲೌಡ್ ನೈನ್ ಆಸ್ಪತ್ರೆಯ ವೈದ್ಯರು ಜನನಿ ಎಂಬ ಮಹಿಳೆಗೆ ಅವಧಿಗೆ ಮುಂಚೆ ಅಂದ್ರೆ 65 ದಿನಗಳ ಮುನ್ನವೇ ಆಪರೇಷನ್ ಮಾಡಿಸಿದ್ದಾರಂತೆ. ಗರ್ಭಿಣಿಯಾಗಿದ್ದ ಜನನಿ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ಇದಾದ ಮೇಲೆ ನಡೆದಿದ್ದು ನಿಜಕ್ಕೂ ಘನಘೋರ ದುರಂತ. ಕ್ಲೌಡ್ ನೈನ್ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯದಿಂದ 20 ದಿನ ಸಾವು ಬದುಕಿನ ಮಧ್ಯೆ ಹೋರಾಟ ನಡೆಸಿದ ಜನನಿ ಸಾವನ್ನಪ್ಪಿದ್ದಾರೆ. ಇದೀಗ ಬಾಣಂತಿಯ ಮೃತದೇಹ ಕೊಡಲು ಮತ್ತೆ 10 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದಾರೆಂದು ಆರೋಪಿಸಲಾಗಿದೆ.
ಗರ್ಭಿಣಿಯಾಗಿದ್ದ ಜನನಿಗೆ ಜುಲೈ-5ಕ್ಕೆ ಡೆಲಿವರಿ ಡೇಟ್ ನೀಡಲಾಗಿತ್ತು. ಆದರೆ ಮೇ 2ಕ್ಕೆ ಕ್ಲೌವ್ಡ್ ನೈನ್ ಆಸ್ಪತ್ರೆಯಲ್ಲಿ ಅವಧಿಗೂ ಮುನ್ನವೇ ಅಂದ್ರೆ ಎರಡು ತಿಂಗಳ ಮೊದಲೇ ವೈದ್ಯರು ಡೆಲಿವರಿ ಮಾಡಿದ್ರಂತೆ. ಈ ವೇಳೆ ಇಂಟರ್ನೆಲ್ ಬ್ಲೀಡಿಂಗ್ ಆಗಿ ತಾಯಿ ಸ್ಥಿತಿ ಚಿಂತಾಜನಕವಾಗಿದೆ. ಈ ಬಗ್ಗೆ ಜನನಿ ಗಂಡನಿಗೂ ವೈದ್ಯರು ಯಾವುದೇ ಮಾಹಿತಿ ನೀಡಿಲ್ಲವಂತೆ.
ತಾಯಿ ಚಿಂತಾಜನಕ ಸ್ಥಿತಿಯಲ್ಲಿದ್ದಾಗ ಕ್ಲೌವ್ಡ್ ನೈನ್ ಆಸ್ಪತ್ರೆ ವೈದ್ಯರು ಮತ್ತೊಂದು ಯಡವಟ್ಟು ಮಾಡಿದ್ದಾರೆ. ಹೆಚ್ಚಿನ ಚಿಕಿತ್ಸೆಗೆ ಬಾಣಂತಿಯನ್ನು ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್ ಮಾಡಿದ್ದಾರೆ ಎನ್ನಲಾಗಿದೆ. ಮಣಿಪಾಲ್ ಆಸ್ಪತ್ರೆಗೆ ದಾಖಲಾದ ಜನನಿ 20 ದಿನ ಹೋರಾಡಿ ಕೊನೆಯುಸಿರೆಳೆದಿದ್ದಾರೆ.
ಗಂಭೀರ ಸ್ಥಿತಿಯಲ್ಲಿದ್ದ ಜನನಿ ಮಣಿಪಾಲ್ ಆಸ್ಪತ್ರೆಯಲ್ಲಿ ನಿನ್ನೆ ಕೊನೆಯುಸಿರೆಳೆದಿದ್ದಾರೆ. ಬಾಣಂತಿಯ ಮೃತದೇಹ ಕೊಡಲು ಮಣಿಪಾಲ್ ಆಸ್ಪತ್ರೆಯವರು ಹಿಂದೇಟು ಹಾಕಿದ್ದರಂತೆ. 10 ಲಕ್ಷ ರೂಪಾಯಿ ಕೊಟ್ಟು ಮೃತದೇಹ ತಗೆದುಕೊಂಡು ಹೋಗಿ ಅಂತ ಮಣಿಪಾಲ್ ಆಸ್ಪತ್ರೆಯವರು ಹೇಳಿದ್ದಾರಂತೆ
ಓಲ್ಡ್ ಏರ್‌ಪೋರ್ಟ್ ರಸ್ತೆಯಲ್ಲಿರುವ ಕ್ಲೌಡ್ ನೈನ್ ಆಸ್ಪತ್ರೆ ವಿರುದ್ಧ ಮಹಿಳೆಯ ಕುಟುಂಬಸ್ಥರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಈ ಸುದ್ದಿ ತಿಳಿಯುತ್ತಿದ್ದಂತೆ ಆರೋಗ್ಯ ಅಧಿಕಾರಿಗಳು ಮಣಿಪಾಲ್ ಆಸ್ಪತ್ರೆಯ ಆಡಳಿತ ಮಂಡಳಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಹಣದ ಕಾರಣಕ್ಕೆ ಮೃತದೇಹವನ್ನು ಪೆಂಡಿಂಗ್ ಇಡುವಂತಿಲ್ಲ. ಮೊದಲು ಕುಟುಂಬಸ್ಥರಿಗೆ ಮೃತದೇಹವನ್ನು ಹಸ್ತಾಂತರ ಮಾಡಿ. ಆಮೇಲೆ ಹಣದ ವ್ಯವಹಾರ ಮಾಡಿ ಎಂದು ಸೂಚನೆ ನೀಡಲಾಗಿದೆ. ಆರೋಗ್ಯ ಅಧಿಕಾರಿಗಳು ಆಸ್ಪತ್ರೆ ಮಂಡಳಿಗೆ ತರಾಟೆ ತೆಗೆದುಕೊಂಡ ಬಳಿಕ ಕುಟುಂಬಸ್ಥರಿಗೆ ಮೃತದೇಹವನ್ನು ಹಸ್ತಾಂತರ ಮಾಡಲಾಗಿದೆ.
ಜನನಿ ಸಾವಿಗೆ ವೈದ್ಯರ ನಿರ್ಲಕ್ಷ್ಯ ಕಾರಣ ಹಾಗೂ ಕ್ಲೌಲ್ಡ್ ನೈನ್ ಆಸ್ಪತ್ರೆ ನಿರ್ಲಕ್ಷ್ಯದ ಬಗ್ಗೆ ಕುಟುಂಬಸ್ಥರು ದೂರು ನೀಡಿದ್ದಾರೆ. ಈ ಬಗ್ಗೆ ಇಬ್ಬರು ವೈದ್ಯರೊನ್ನೊಳಗೊಂಡ ತಜ್ಞರ ಸಮಿತಿ ರಚನೆ ಮಾಡಲಾಗಿದೆ. ಈ ಸಮಿತಿ ನೀಡುವ ವರದಿ ಆಧಾರದ ಮೇಲೆ ಆಸ್ಪತ್ರೆ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ.
Pregnant Woman Die in hospital, 10 lakhs demanded for body, case against Cloudnine Hospital, and KMC have been registered in Bangalore. Deceased Janani has given birth to twin kids and has breathed her last due to Doctors negligence, alleges the family of the deceased.
08-09-25 05:21 pm
HK News Desk
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
Fine, Violation, Home Minister: ಮುಖ್ಯಸ್ಥರಿಗೂ...
07-09-25 10:17 am
Mandya Suicide, Marriage: ಮದುವೆ ಕ್ಯಾನ್ಸಲ್ ಆಗಿ...
07-09-25 10:11 am
08-09-25 02:02 pm
HK News Desk
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
UPI Transaction Limit: ಯುಪಿಐ ಪಾವತಿ ಮಿತಿ ಹೆಚ್ಚ...
06-09-25 10:34 am
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
07-09-25 03:34 pm
Mangalore Correspondent
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm