ಬ್ರೇಕಿಂಗ್ ನ್ಯೂಸ್
24-05-24 06:35 pm HK News Desk ಕರ್ನಾಟಕ
ಬಾಗಲಕೋಟೆ, ಮೇ.24: ಸತ್ತು ಹೋಗಿದೆ ಎಂದು ತಿಳಿದು ಹಸುಗೂಸು ಮಗುವನ್ನು ಇನ್ನೇನು ಅಂತ್ಯಸಂಸ್ಕಾರ ಮಾಡಬೇಕು ಎಂದು ತಯಾರಿ ನಡೆಸುತ್ತಿದ್ದಾಗಲೇ ಪವಾಡವೆಂಬಂತೆ ಮಗು ಕೆಮ್ಮಿದ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.
ಬಾಗಲಕೋಟೆ ಜಿಲ್ಲೆಯ ಇಳಕಲ್ನಲ್ಲಿ ಗುರುವಾರ ಈ ಘಟನೆ ನಡೆದಿದೆ. ಮಗು ಪ್ರಜ್ಞೆ ತಪ್ಪಿದ್ದನ್ನು ಸತ್ತಿದೆಯೆಂದು ಭಾವಿಸಿದ ಕುಟುಂಬ ಅಂತ್ಯಸಂಸ್ಕಾರಕ್ಕೆ ಮುಂದಾಗಿದ್ದು ಅಷ್ಟರಲ್ಲೇ ಮಗು ಕೆಮ್ಮಿದೆ. ಇದರಿಂದ ಕುಟುಂಬ ಎದೆ ಬಡಿದುಕೊಂಡು ಗೋಳಾಡಿ ಮಗು ಜೀವಂತ ಇರುವುದನ್ನು ತಿಳಿದು ಕಣ್ಣೀರು ಹಾಕಿದೆ.
ಬಸವರಾಜ ಭಜಂತ್ರಿ ಹಾಗೂ ನೀಲಮ್ಮ ಎಂಬ ದಂಪತಿಯ ದ್ಯಾಮಣ್ಣ ಭಜಂತ್ರಿ ಎಂಬ 13 ತಿಂಗಳ ಹಸುಗೂಸು ಹೃದಯ ಸಂಬಂಧಿ ಕಾಯಿಲೆಯಿಂದ ಉಸಿರಾಟದ ಸಮಸ್ಯೆಯನ್ನು ಎದುರಿಸುತ್ತಿತ್ತು. ಇದರಿಂದಾಗಿ ಮಗುವಿಗೆ ಅಂಗಾಗ ವೈಫಲ್ಯವೂ ಇತ್ತು. ಹೀಗಾಗಿ ಕೆಲ ದಿನಗಳ ಹಿಂದೆ ಮಗುವನ್ನು ಬಾಗಲಕೋಟೆಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ಮಗು ಬದುಕುವುದು ಕಷ್ಟ ಎಂದು ಹೇಳಿದಾಗ ಪೋಷಕರು ಮಗುವನ್ನು ಆಸ್ಪತ್ರೆಯಿಂದ ಮನೆಗೆ ಕರೆದೊಯ್ದಿದ್ದರು. ಅಷ್ಟರಲ್ಲಿ ಮಗು ಪ್ರಜ್ಞೆ ತಪ್ಪಿತ್ತು. ಇದರಿಂದ ಮಗು ಸಾವನ್ನಪ್ಪಿದೆ ಎಂದು ಭಾವಿಸಿದ ಕುಟುಂಬಸ್ಥರು ಅಂತ್ಯಸಂಸ್ಕಾರಕ್ಕೆ ಸಿದ್ಧತೆ ಮಾಡಿಕೊಂಡಿದ್ದಾರೆ. ಅಷ್ಟರಲ್ಲಿ ಮಗು ಕೆಮ್ಮಿದ್ದು ತಾನಿನ್ನೂ ಸತ್ತಿಲ್ಲ ಎಂದು ತೋರಿಸಿಕೊಟ್ಟಿದೆ. ಇದರಿಂದ ಕುಟುಂಬಸ್ಥರು ಬೆಚ್ಚಿಬಿದ್ದಿದ್ದಾರೆ.
ಇದನ್ನು ದೇವರ ಪವಾಡ ಎಂದು ಭಾವಿಸಿ ಮಗುವನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಇದು ಮುರ್ತುಜಾ ಖಾದ್ರಿ ಪವಾಡ ಎಂದು ಭಾವಿಸಿ ಪೋಷಕರು ಮಗುವನ್ನು ದರ್ಗಾಕ್ಕೆ ಕರೆದೊಯ್ದು ನಂತರ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಸದ್ಯ ಇಳಕಲ್ ಖಾಸಗಿ ಆಸ್ಪತ್ರೆಯಲ್ಲಿ ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಆಸ್ಪತ್ರೆ ವೈದ್ಯರು, 'ಮಗು ಬದುಕುವುದು ಕಷ್ಟ ಎಂದು ಮಾತ್ರ ಬಾಗಲಕೋಟೆ ಖಾಸಗಿ ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ. ಆದರೆ ಅದು ಮೃತಪಟ್ಟಿದೆ ಎಂದು ಯಾವ ವೈದ್ಯರೂ ಘೋಷಣೆ ಮಾಡಿಲ್ಲ. ಆದರೆ ಕುಟುಂಬಸ್ಥರು ಮಗು ಪ್ರಜ್ಞೆ ತಪ್ಪಿಧ್ದನ್ನೇ ತಪ್ಪಾಗಿ ಭಾವಿಸಿ ಅದು ಮೃತಪಟ್ಟಿದೆ ಎಂದು ಅರ್ಥೈಸಿಕೊಂಡಿದ್ದಾರೆ. ಸದ್ಯ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿದೆ. ನಾವು ಮಗುವಿಗೆ ಚಿಕಿತ್ಸೆ ನೀಡುತ್ತಿದ್ದೇವೆ' ಎಂದಿದ್ದಾರೆ.
Dead' 13 Months Baby Comes Alive Seconds Before Cremation In Bagalkot. The baby suffering from multiorgan failure was admitted to a private hospital. The baby went unconscious while the parents were returning home. The video of this has gone viral on social media.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm