ಬ್ರೇಕಿಂಗ್ ನ್ಯೂಸ್
25-05-24 04:33 pm HK News Desk ಕರ್ನಾಟಕ
ದಾವಣಗೆರೆ ಮೇ.25: ಮಟ್ಕಾ ಆಡಿಸುತ್ತಿದ್ದ ಎನ್ನುವ ಆರೋಪದಲ್ಲಿ ಬಂಧಿತನಾದ ಆರೋಪಿ ಬಂಧಿಸಿದ ಕೆಲವೇ ಗಂಟೆಗಳಲ್ಲಿ ಸಾವನಪ್ಪಿದ್ದಾನೆ . ಇದನ್ನು ಲಾಕಪ್ ಡೆತ್ ಎಂದು ಆರೋಪಿಸಿ ಪೊಲೀಸ್ ಠಾಣೆಯ ಮೇಲೆ ಉದ್ರಿಕ್ತರ ಗುಂಪು ದಾಳಿ ಮಾಡಿದ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿಯಲ್ಲಿ ನಡೆದಿದೆ.
ಶುಕ್ರವಾರ ಮೇ 24 ಸಂಜೆ ಚನ್ನಗಿರಿ ಠಾಣೆಯ ಪೊಲೀಸರು ಟಿಪ್ಪು ನಗರ ನಿವಾಸಿ ಆದಿಲ್ (30) ಎಂಬಾತನನ್ನು ಬಂಧಿಸಿದ್ದರು. ಬಂಧಿಸಿ ಠಾಣೆಗೆ ಕರೆ ತಂದ ತಕ್ಷಣ ಆತ ಮೂರ್ಛೆ ಹೋಗಿದ್ದಾನೆ. ತಕ್ಷಣ ಆತನನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆದರೆ ಆರೋಪಿ ಬದುಕುಳಿದಿಲ್ಲ ಎನ್ನುವುದು ಗೊತ್ತಾಗಿದೆ. ಇದರಿಂದಾಗಿ ಕೋಪಗೊಂಡ ಸುಮಾರು ನೂರು ಜನರಿದ್ದ ಉದ್ರಿಕ್ತ ಗುಂಪು ಪೊಲೀಸ್ ಠಾಣೆಗೆ ನುಗ್ಗಿ ದಾಂದಲೆ ಮಾಡಿದ್ದಾರೆ.
ಆದಿಲ್ ನನ್ನು ಠಾಣೆಯಲ್ಲಿ ಕೊಲ್ಲಲಾಗಿದೆ. ಇದು ಲಾಕಪ್ ಡೆತ್. ಆದಿಲ್ ಸಾವಿಗೆ ಪೊಲೀಸರೇ ಕಾರಣ. ಆದಿಲ್ ಸಾವು ಸಹಜವಾಗಿದ್ದಲ್ಲ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಠಾಣಿಗೆ ಕರೆದುಕೊಂಡು ಹೋಗುವ ಮುನ್ನ ಆರೋಪಿ ಆದಿಲ್ ಆರೋಗ್ಯವಾಗಿದ್ದ ಎಂದು ಕುಟುಂಬ ವಾದಿಸಿದೆ.
ಅನಿರೀಕ್ಷಿತ ದಾಳಿಯಿಂದಾಗಿ ಏಳು ಪೊಲೀಸ್ ವಾಹನಗಳು ಹಾನಿಯಾಗಿವೆ. ಠಾಣೆಯ ಮುಂದಿದ್ದ ಧ್ವಜದ ಕಟ್ಟೆ ಸೇರಿದಂತೆ ಠಾಣೆಯ ಪೀಠೋಪಕರಣಗಳನ್ನು ದ್ವಂಸಗೊಳಿಸಲಾಗಿದೆ. ಉದ್ರಿಕ್ತರು ಮನಬಂದಂತೆ ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದಾಗಿ 11 ಮಂದಿ ಪೊಲೀಸರಿಗೆ ಗಾಯಗಳಾಗಿವೆ. ಕಳೆದ ದಿನ ರಾತ್ರಿ ನಡೆದ ಘಟನೆಯ ದೃಶ್ಯಗಳು ಠಾಣೆಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಈ ಬಗ್ಗೆ ಮಾತನಾಡಿದ ದಾವಣಗೆರೆ ಎಸ್ಪಿ ಉಮಾ ಪ್ರಶಾಂತ್, ಆರೋಪಿ ಆದಿಲ್ ಕುಸಿದು ಬಿದ್ದ ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆರೇಳು ನಿಮಿಷ ಕೂಡ ಹಾದಿಯಲ್ಲಿ ಕಳೆದಿಲ್ಲ. ನಮ್ಮಲ್ಲೂ ಸಿಸಿಕ್ಯಾಮರಾ ಇದೆ. ಇದರ ಬಗ್ಗೆ ಪರಿಶೀಲನೆ ಮಾಡುತ್ತೇವೆ. ತನಿಖೆ ನಡೆಸುತ್ತಿದ್ದೇವೆ. ಮರಣೋತ್ತರ ಪರೀಕ್ಷೆ ಕೂಡ ನಡೆಸಲಾಗುತ್ತಿದೆ. ನಂತರವಷ್ಟೇ ಸತ್ಯಾಸತ್ಯತೆಯ ಬಗ್ಗೆ ಹೇಳಲು ಸಾಧ್ಯ' ಎಂದರು.
ಆದಿಲ್ ತಂದೆ ಖಲೀಮ್ ಉಲ್ಲಾ ಇದು ಲಾಕಪ್ ಡೆತ್ ಎಂದು ಆರೋಪಿಸಿದ್ದಾರೆ. ಜೊತೆಗೆ ದೂರನ್ನೂ ನೀಡಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ನಾವು ಮುಂದಿನ ಕ್ರಮ ಕೈಗೊಳ್ಳುತ್ತೇವೆ. ಆರೋಪಿಗೆ ಲೋ ಬಿಪಿ ಆಗಿತ್ತು ಎಂದು ಹೇಳಲಾಗುತ್ತದೆ. ಉದ್ರಿಕ್ತರ ಗುಂಪು ಪೊಲೀಸ್ ಠಾಣೆಗೆ ನುಗ್ಗಿ ಸಿಕ್ಕ ಸಿಕ್ಕ ವಸ್ತುಗಳನ್ನು ನಾಶ ಮಾಡಿದ್ದಾರೆ. ಪೊಲೀಸರಿಗೆ ಗಾಯಗಳಾಗಿವೆ. ಎಲ್ಲದರ ತನಿಖೆ ಬಳಿಕ ನಾವು ನಿಸ್ಪಕ್ಷಪಾತವಾಗಿ ಕ್ರಮ ಕೈಗೊಳ್ಳುತ್ತೇವೆ ಎಂದು ಎಸ್‌ಪಿ ಉಮಾ ಅವರು ಹೇಳಿದರು.
ಯುವಕನ ಸಾವು ಲಾಕಪ್ ಡೆತ್ ಅಲ್ಲ ಎಂದ ಸಿಎಂ;
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಮೃತ ಯುವಕನಿಗೆ ಮೂರ್ಛೆ ರೋಗ ಇತ್ತು. ಅದರಿಂದ ಆತ ಮೃತ ಪಟ್ಟಿದ್ದಾನೆ. ಆದರೆ, ಎಫ್ಐಆರ್ ಇಲ್ಲದೆ ಪೊಲೀಸರು ಠಾಣೆಗೆ ಕರೆ ತಂದಿದ್ದು ತಪ್ಪು. ಈ ತಪ್ಪಿಗಾಗಿ ಪೊಲೀಸ್ ಅಧಿಕಾರಿಗಳ ಅಮಾನತಿಗೆ ಸೂಚಿಸಿದ್ದೇನೆ ಎಂದು ಹೇಳಿದರು.
ಆರೋಪಿಗೆ ಮೂರ್ಛೆ ರೋಗ ಬಂದಿತ್ತು, ತಕ್ಷಣ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೂ ಕೂಡ ಪ್ರಕರಣದ ಬಗ್ಗೆ ತನಿಖೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
Channagiri Davanagere tense after violence over custodial death, police officers have been for bringing the accused without registering FIR by CM Siddaramaiah. Davanagere Superintendent of Police Uma Prashanth said on Saturday, “Adil was brought to the police station on Friday. He collapsed in the police station and was rushed to the hospital, and the police then learned that he had died. Adil was not in the police station for more than six to seven minutes. However, his relatives are claiming that it is a case of lockup death.”
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm