ಬ್ರೇಕಿಂಗ್ ನ್ಯೂಸ್
25-05-24 05:07 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 25: ಒಂದು ಕೈಯಲ್ಲಿ ಕೊಡೆ, ಇನ್ನೊಂದು ಕೈಯಲ್ಲಿ ಸ್ಟೇರಿಂಗ್ ಹಿಡಿದು ಕೆಎಸ್ಸಾರ್ಟಿಸಿ ಬಸ್ ಚಾಲನೆ ಮಾಡುತ್ತಿದ್ದ ವಿಡಿಯೋ ವೈರಲ್ ಆಗಿತ್ತು. ಆ ವಿಡಿಯೋವನ್ನ ಕರ್ನಾಟಕ ಬಿಜೆಪಿ ಜಾಲತಾಣದಲ್ಲಿ ಷೇರ್ ಮಾಡಿ ಅಣಕಿಸಿದ್ದರು. ಈ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟನೆ ಮತ್ತು ಬಿಜೆಪಿಗೆ ತಿರುಗೇಟು ನೀಡಿದ್ದಾರೆ.
ಮಳೆ ಬರುತ್ತಿರುವಾಗ ಸಂಸ್ಥೆಯ ವಾಹನದ ಚಾಲಕರು ಕೊಡೆ ಹಿಡಿದುಕೊಂಡು ಚಾಲನೆ ಮಾಡುವ ವಿಡಿಯೋ (ಮನರಂಜನೆಗಾಗಿ ಮಾಡಿದ ವಿಡಿಯೋ ಕುರಿತು) @BJP4Karnataka ದವರು ಟ್ವೀಟ್ ಮಾಡಿ ಉತ್ತರಕುಮಾರನ ಪೌರುಷವನ್ನು ತೋರಿಸುತ್ತಿರುವುದಕ್ಕೆ ಹಾಗೂ ಅವರ ಈ ಸಂತೋಷಕ್ಕೆ ಕಡಿವಾಣ ಹಾಕಬೇಕಾಗಿದೆಯಲ್ಲ ಎಂಬ ನೋವಿನೊಂದಿಗೆ ಈ ವಿವರಣೆ ನೀಡಲಾಗುತ್ತಿದೆ.
ಕೆಲವರಿಗೆ ಕಣ್ಣಿರುತ್ತದೆ. ಆದರೆ ನೋಡಲು ಸಾಧ್ಯವಾಗದ ಸ್ಥಿತಿ, ತಲೆ ಇರುತ್ತದೆ, ಬುದ್ದಿಯನ್ನು ಸರಿಯಾಗಿ ಉಪಯೋಗಿಸಲಾಗದ ಪರಿಸ್ಥಿತಿ, ಇವೆಲ್ಲವೂ ಅನ್ವಯಿಸುವುದು @BasanagoudaBJP ,@RAshokaBJP
, @drashwathcn ಹಾಗೂ ಬಿ.ಜೆ.ಪಿ ಕಣ್ಣು, ತಲೆ ಯಾವುದೂ ಸರಿಯಾಗಿ ಕನೆಕ್ಟ್ ಆಗದೆ ಇರೋ ಪಂಡಿತ ಪುತ್ರರು ಎಂಬುದನ್ನು ಬಿಡಿಸಿ ಹೇಳಬೇಕಿಲ್ಲ.
ಈ ವಿಡಿಯೋ ನೋಡಿದರೆ ಚಾಲಕ ಹಿಡಿದಿರುವ ಕೊಡೆ ಮೇಲೆ ಒಂದೇ ಒಂದು ಹನಿ ನೀರು ಕಾಣುತ್ತಿಲ್ಲ ಅದನ್ನು ನೋಡುವ, ಯೋಚಿಸುವ ವ್ಯವಧಾನ, ಬುದ್ದಿಯಾದರೂ ಬೇಡವೇ ಇವರಿಗೆ ? ಬಿ.ಜೆ.ಪಿ ಅವಧಿಯಲ್ಲಿ ರಾಜ್ಯದ ಸಾರಿಗೆ ಸಂಸ್ಥೆಗಳನ್ನು ರೂ.5900 ಕೋಟಿ ಸಾಲದ ಸುಳಿಯಲ್ಲಿ ಮುಳುಗಿಸಿ ಹೋಗಿರುವ ಕೀರ್ತಿವಂತರು ಇವರು. ಅವರ ಅವಧಿಯಲ್ಲಿ ಹೊಸ ಬಸ್ಸುಗಳ ಸೇರ್ಪಡೆಯಾಗಿಲ್ಲ. ಡಕೋಟ ಬಸ್ಸುಗಳನ್ನು ಕಲ್ಪಿಸಿರುವ ಸಾಧನೆ ಅವರದ್ದೇ..
ನೇಮಕಾತಿಯಂತೂ ಮರೀಚಿಕೆಯೇ ಸರಿ.. ನಮ್ಮ ಅವಧಿಯಲ್ಲಿ ಹೊರಡಿಸಿದ್ದ ನೇಮಕಾತಿ ಪ್ರಕಟಣೆಗೂ ತಡೆ ನೀಡಿದ್ದ ಕೀರ್ತಿ ಬಿ.ಜೆ.ಪಿ ಅವರಿಗೆ ಸಲ್ಲಬೇಕು. ನಮ್ಮ ಸರ್ಕಾರ ಬಂದೊಡನೆ 5800 ಹೊಸ ಬಸ್ಸುಗಳ ಸೇರ್ಪಡೆಗೆ ಚಾಲನೆ ನೀಡಿದೆ. ಬಿ.ಜೆ.ಪಿ ಅವಧಿಯಲ್ಲಿ ತಡೆ ಹಿಡಿಯಲಾಗಿದ್ದ ನೇಮಕಾತಿಗೆ ಚಾಲನೆ ನೀಡಲಾಗಿದೆ. 13999 ಹುದ್ದೆಗಳು ಖಾಲಿಯಿದ್ದು, ತಾಂತ್ರಿಕ ಸಿಬ್ಬಂದಿ ಹಾಗೂ ಚಾಲಕ ನಿರ್ವಾಹಕರಿಗೆ ನೇಮಕಾತಿ ಪತ್ರವನ್ನು ವಿತರಿಸಲಾಗಿದೆ. ಇತರೆ ನೇಮಕಾತಿ ಪ್ರಕ್ರಿಯೆಗಳು ಜಾರಿಯಲ್ಲಿವೆ.
ಬಿ ಜೆ ಪಿಯವರು ಸಾರಿಗೆ ಸಂಸ್ಥೆಗಳಿಗೆ ದಯಪಾಲಿಸಿದ ದುರಂತ ಕಥೆಗಳನ್ನು ಮತ್ತೊಮ್ಮೆ ಮಗದೊಮ್ಮೆ ನೆನಪಿಸಲು ನಮಗೆ ಅವರೇ ಅವಕಾಶ ಮಾಡಿಕೊಡುವುದರ ಹಿಂದಿನ ಉದ್ದೇಶ, ನಮ್ಮ ಸರ್ಕಾರದ ಅಭಿವೃದ್ಧಿ ಕಾರ್ಯಗಳಿಗ ಪ್ರಚಾರ ನೀಡುವುದು ಎಂದಾದರೆ ನಮಗೇನು ಅಭ್ಯಂತರವಿಲ್ಲ.
ಸದ್ರಿ ಪ್ರಕರಣದಲ್ಲಿ ಚಾಲಕ ಕೊಡೆ ಹಿಡಿದು ಬಸ್ ಚಾಲನೆ ಮಾಡಿದ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆಯಲಾಗಿದೆ. ಅದರನ್ವಯ, 23-05-2024 ರಂದು ಧಾರವಾಡ ಘಟಕದ ವಾಹನ ಸಂಖ್ಯೆ ಕೆಎ-25 ಎಫ್-1336 ಬೇಟಗೇರಿ- ಧಾರವಾಡ ಮಾರ್ಗದಲ್ಲಿ ಕಾರ್ಯಾಚರಿಸುತ್ತಿರುವಾಗ ವಾಹನದಲ್ಲಿ ಚಾಲಕರಾಗಿ ಹನುಮಂತಪ್ಪ ಕಿಲ್ಲೇದಾರ, (ಬಿ.ಸಂ-1203 D) ಹಾಗೂ ನಿರ್ವಾಹಕರಾಗಿ ಶ್ರೀಮತಿ ಅನಿತಾ (ಎಚ್. ಬಿ ಸಂ-396) ಕರ್ತವ್ಯ ನಿರ್ವಹಿಸುತ್ತಿದ್ದರು. ಮಳೆ ಬರುತ್ತಿದ್ದ ಆ ಸಮಯದಲ್ಲಿ ಅಂದರೆ ಸುಮಾರು 16:30 ಕ್ಕೆ ಬಸ್ಸಿನಲ್ಲಿ ಪ್ರಯಾಣಿಕರು ಇಲ್ಲದೇ ಖಾಲಿ ಇದ್ದುದರಿಂದ ಚಾಲಕರು ಮನೋರಂಜನೆಗಾಗಿ ನಿರ್ವಾಹಕರ ಬಳಿ ಇದ್ದ ಕೊಡೆಯನ್ನು ಪಡೆದು, ಹಿಡಿದುಕೊಂಡು ವಾಹನ ಚಾಲನೆ ಮಾಡಿರುತ್ತಾರೆ. ಇದನ್ನು ಸದರಿ ನಿರ್ವಾಹಕಿಯು ವಿಡಿಯೋ ಚಿತ್ರೀಕರಣ ಮಾಡಿರುತ್ತಾರೆ.
ಆ ಸಮಯದಲ್ಲಿ ಚಾಲಕರ ಮೇಲಿನ ಛಾವಣಿಯಾಗಲಿ ಪ್ರಯಾಣಿಕರು ಕುಳಿತುಕೊಳ್ಳುವ ಸ್ಥಳದ ಛಾವಣಿಯಾಗಲಿ ಸೋರಿಕೆ ಇರಲಿಲ್ಲ. ವಾಹನದ ಛಾವಣಿ ಸೋರಿಕೆ ಬಗ್ಗೆ ಚಾಲಕ, ನಿರ್ವಾಹಕರ, ಪ್ರಯಾಣಿಕರ ಯಾವುದೇ ದೂರು ಸಹ ದಾಖಲು ಆಗಿರುವುದಿಲ್ಲ. ಸದರಿ ವಾಹನವನ್ನು ವಿಭಾಗದ ತಾಂತ್ರಿಕ ತಜ್ಞರಿಂದ ಪರಿಶೀಲನೆ ಮಾಡಲಾಗಿದ್ದು ಮೇಲ್ಚಾವಣಿ ಸೋರದೆ ಇರುವುದನ್ನು ಖಚಿತಪಡಿಸಿಕೊಂಡಿರುತ್ತಾರೆ. ಈ ರೀತಿ ಬೇಜಾವಬ್ದಾರಿತನದಿಂದ ವರ್ತಿಸಿ, ಸಂಸ್ಥೆಯ ಘನತೆಗೆ ಧಕ್ಕೆ ತಂದ ಚಾಲನಾ ಸಿಬ್ಬಂದಿಗಳನ್ನು ಸೇವೆಯಿಂದ ಅಮಾನತು ಮಾಡಲಾಗಿದೆ ಎಂದು ಸಾರಿಗೆ ಸಚಿವರು ಟ್ವೀಟ್ ಮೂಲಕ ತಿಳಿಸಿದ್ದಾರೆ.
Transport minister Ramalinga Reddy has clarified the viral video showing a bus driver using an umbrella while driving, stating that it was a prank orchestrated by the woman conductor of the bus. He also expressed anger towards the BJP for allegedly spreading the fake video and posting comments against the government.
25-02-25 10:30 pm
Bangalore Correspondent
Belagavi Accident, Kumbh Mela: ಬಸ್ ಗೆ ಡಿಕ್ಕಿ...
24-02-25 01:36 pm
Kumar Bangarappa, BJP President: ಬಿಜೆಪಿ ರಾಜ್ಯ...
23-02-25 06:38 pm
Telangana Model, Pramod Muthalik, CM Siddaram...
21-02-25 10:47 pm
Rohini Sindhuri, Roopa moudgil, latest news:...
21-02-25 10:12 pm
24-02-25 10:14 pm
HK News Desk
India Pak Match 2025 Live: ಪಾಕ್ ತಂಡವನ್ನು ಚಾಂಪ...
23-02-25 11:22 pm
ಗಂಗಾ ನದಿಗಿದೆ ಸ್ವಯಂ ಶುದ್ಧೀಕರಣದ ಶಕ್ತಿ ; ಕೋಟ್ಯಂತ...
23-02-25 09:52 pm
ದುಬೈನಲ್ಲಿ ಕ್ರಿಮಿನಲ್ ಇನ್ವೆಸ್ಟಿಗೇಶನ್ ಅಧಿಕಾರಿಗಳ...
22-02-25 09:48 pm
ದುಬೈ ಉದ್ಯಮಿ ಬಿ.ಆರ್ ಶೆಟ್ಟಿಗೆ ದುಬೈ ಕೋರ್ಟಿನಿಂದ ಮ...
22-02-25 07:51 pm
25-02-25 10:58 pm
Mangalore Correspondent
C-Band Doppler Weather Radar, Mangalore: ಮಂಗಳ...
25-02-25 09:34 pm
Bantwal accident, Mangalore: ಚಾಲಕಿಯ ಧಾವಂತಕ್ಕೆ...
25-02-25 02:34 pm
Puttur doctor, C Section, Mangalore: ಸಿಸೇರಿಯನ...
25-02-25 12:24 pm
Puttur News, Dr Anil Baipadithaya, hospital:...
24-02-25 02:50 pm
25-02-25 08:10 pm
Mangalore Correspondent
Mangalore, Kotekar bank robbery, Bhaskar Belc...
25-02-25 05:18 pm
Kerala Murder, Crime, Affan: ತಿರುವನಂತಪುರ ; ಒಂ...
25-02-25 01:37 pm
Delhi crime, Wife Murder: ತ್ರಿವೇಣಿ ಸಂಗಮದಲ್ಲಿ...
24-02-25 10:51 pm
Illegal drug supply, Mangalore: ಮಂಗಳೂರು ಜೈಲಿಗ...
24-02-25 09:43 pm