Adgp Alok Kumar, Hassan Accident: ಹಾಸನ ಅಪಘಾತದ ಬಗ್ಗೆ ಎಡಿಜಿಪಿ ಅಲೋಕ್ ಕುಮಾರ್ ಟ್ವೀಟ್ ; 24 ಗಂಟೆಯಲ್ಲಿ ರಸ್ತೆ ಅಪಘಾತಕ್ಕೆ 51 ಜೀವ ಬಲಿ, ನಿರ್ಲಕ್ಷ್ಯದ ಚಾಲನೆಯೇ ಅವಘಡ ಎಂದ ಅಧಿಕಾರಿ ! 

26-05-24 02:42 pm       Bangalore Correspondent   ಕರ್ನಾಟಕ

ಹಾಸನದಲ್ಲಿ ಭೀಕರ ಅಪಘಾತ ಆಗಿರುವ ಬಗ್ಗೆ ರಾಜ್ಯ ಸಂಚಾರ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಆಘಾತ ವ್ಯಕ್ತಪಡಿಸಿದ್ದು ನಿರ್ಲಕ್ಷ್ಯ ಮತ್ತು ಅತಿ ವೇಗದ ಚಾಲನೆಯೇ ಇಂತಹ ಘಟನೆಗಳಿಗೆ ಕಾರಣ ಎಂದು ಅಭಿಪ್ರಾಯ ಪಟ್ಟಿದ್ದಾರೆ. 

ಬೆಂಗಳೂರು, ಮೇ.26: ಹಾಸನದಲ್ಲಿ ಭೀಕರ ಅಪಘಾತ ಆಗಿರುವ ಬಗ್ಗೆ ರಾಜ್ಯ ಸಂಚಾರ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಆಘಾತ ವ್ಯಕ್ತಪಡಿಸಿದ್ದು ನಿರ್ಲಕ್ಷ್ಯ ಮತ್ತು ಅತಿ ವೇಗದ ಚಾಲನೆಯೇ ಇಂತಹ ಘಟನೆಗಳಿಗೆ ಕಾರಣ ಎಂದು ಅಭಿಪ್ರಾಯ ಪಟ್ಟಿದ್ದಾರೆ. 

ಈ ಬಗ್ಗೆ ಅಲೋಕ್ ಕುಮಾರ್ ಟ್ವೀಟ್ ಮಾಡಿದ್ದು ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯದ ಬೇರೆ ಬೇರೆ ಕಡೆ ಆಗಿರುವ ರಸ್ತೆ ಅಪಘಾತಗಳಲ್ಲಿ ಒಟ್ಟು 51 ಜನ ಪ್ರಾಣ ಕಳಕೊಂಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಅಪಘಾತದಲ್ಲಿ ದಾಖಲಾದ ಅತಿ ಹೆಚ್ಚು ಸಾವಿನ ಘಟನೆಯ ನಿದರ್ಶನ ಇದೆಂದು ತಿಳಿಸಿದ್ದಾರೆ. ಈ ಪೈಕಿ ಹೆಚ್ಚಿನ ಅಪಘಾತಗಳಿಗೆ ಚಾಲಕರ ನಿರ್ಲಕ್ಷ್ಯ ಮತ್ತು ಅತಿ ವೇಗದ ಚಾಲನೆಯೇ ಕಾರಣ ಎಂದವರು ಹೇಳಿದ್ದಾರೆ. 

ವಾಹನ ಸವಾರರು ರಸ್ತೆ ನಿಯಮಗಳನ್ನು ಪಾಲಿಸಿದರೆ ಇಂತಹ ಘಟನೆಗಳನ್ನು ಆದಷ್ಟು ತಪ್ಪಿಸಬಹುದು. ಅಮೂಲ್ಯ ಜೀವಗಳನ್ನು ಉಳಿಸಬಹುದು ಎಂದು ಹಿರಿಯ ಪೊಲೀಸ್ ಅಧಿಕಾರಿ ಅಲೋಕ್ ಕುಮಾರ್ ತಿಳಿಸಿದ್ದಾರೆ. ಹಾಸನದಲ್ಲಿ ಅತಿ ವೇಗ ಮತ್ತು ನಿರ್ಲಕ್ಷ್ಯದ ಕಾರು ಚಾಲನೆಯೇ ಅಪಘಾತಕ್ಕೆ ಕಾರಣವಾಗಿದ್ದು ಆರು ಜೀವಗಳನ್ನು ಬಲಿ ಪಡೆದಿದೆ.

Hassan Accident, ADGP Alok Kumar tweets about accident, says 51 killed in the last 24 hours due to rash driving and negligence he stated.