ಬ್ರೇಕಿಂಗ್ ನ್ಯೂಸ್
27-05-24 04:23 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 27: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ವಿದೇಶಕ್ಕೆ ಪರಾರಿಯಾಗಿರುವ ಪ್ರಜ್ವಲ್ ರೇವಣ್ಣ ಕೂಡಲೇ ಕರ್ನಾಟಕಕ್ಕೆ ಬಂದು, ನೆಲದ ಕಾನೂನು ಗೌರವಿಸಬೇಕು ಎಂದು ಸಂಸದನ ಅಜ್ಜ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಬಹಿರಂಗ ಪತ್ರ ಬರೆದಿದ್ದಾರೆ. ಇದರ ಬೆನ್ನಲ್ಲೇ ಪ್ರಜ್ವಲ್ ರೇವಣ್ಣ ಭಾರತಕ್ಕೆ ಬರುವುದಾಗಿ ಘೋಷಣೆ ಮಾಡಿದ್ದಾರೆ.
ಈ ಕುರಿತು ಪ್ರಜ್ವಲ್ ಹೊಸ ವಿಡಿಯೊ ಬಿಡುಗಡೆ ಮಾಡಿದ್ದು, “ಮೇ 31ರಂದು ಭಾರತಕ್ಕೆ ಬಂದು SIT ವಿಚಾರಣೆಗೆ ಹಾಜರಾಗುವುದಾಗಿ ಘೋಷಣೆ ಮಾಡಿದ್ದಾರೆ.
ನನ್ನ ರಾಜಕೀಯ ಬೆಳವಣಿಗೆ ಸಹಿಸಲಾಗದೆ ಷಡ್ಯಂತ್ರ ರೂಪಿಸಲಾಗಿದೆ. ನನ್ನ ವಿರುದ್ಧ ಪಿತೂರಿ ಮಾಡಲಾಗಿದೆ. ಕೆಲವು ಶಕ್ತಿಗಳು ಒಟ್ಟಾಗಿ ನನ್ನ ವಿರುದ್ಧ ಪಿತೂರಿ ನಡೆಸಿವೆ. ಇಷ್ಟಾದರೂ ನಾನು ನನ್ನ ತಾತ, ಜೆಡಿಎಸ್ ಕಾರ್ಯಕರ್ತರಿಗೆ ಕ್ಷಮೆಯಾಚಿಸುತ್ತೇನೆ. ನಾನು ಮೇ 31ರಂದು ಬೆಳಗ್ಗೆ 10 ಗಂಟೆಗೆ ಭಾರತಕ್ಕೆ ಬಂದು ಎಸ್‌ಐಟಿ ಎದುರು ವಿಚಾರಣೆಗೆ ಹಾಜರಾಗುತ್ತೇನೆ. ವಿದೇಶ ಪ್ರವಾಸವು ಮೊದಲೇ ನಿಗದಿಯಾಗಿತ್ತು. ಆದರೂ, ನಾನು ಭಾರತಕ್ಕೆ ಬಂದು ವಿಚಾರಣೆ ಎದುರಿಸುತ್ತೇನೆ” ಎಂಬುದಾಗಿ ಪ್ರಜ್ವಲ್ ರೇವಣ್ಣ ವಿಡಿಯೊದಲ್ಲಿ ತಿಳಿಸಿದ್ದಾರೆ.
ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ಪ್ರಮುಖ ಆರೋಪಿಯಾಗಿರುವ ಪ್ರಜ್ವಲ್ ರೇವಣ್ಣ ಅವರ ಡಿಪ್ಲೊಮ್ಯಾಟಿಕ್ ಪಾಸ್‌ಪೋರ್ಟ್‌ಅನ್ನು ರದ್ದುಗೊಳಿಸಬೇಕು ಎಂದು ಸಿದ್ದರಾಮಯ್ಯ ಅವರು ಎರಡು ಬಾರಿ ಪತ್ರ ಬರೆದಿದ್ದಾರೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಡಿಪ್ಲೊಮ್ಯಾಟಿಕ್ ಪಾಸ್‌ಪೋರ್ಟ್ ರದ್ದುಗೊಳಿಸುವ ಪ್ರಕ್ರಿಯೆ ಆರಂಭಿಸಿದೆ. ಇನ್ನು, ಇದರ ಭಾಗವಾಗಿಯೇ ಕೇಂದ್ರ ಸರ್ಕಾರವು ಪ್ರತಿಕ್ರಿಯೆ ಕೋರಿ ಪ್ರಜ್ವಲ್ ರೇವಣ್ಣಗೆ ಶೋಕಾಸ್ ನೋಟಿಸ್ ಜಾರಿಗೊಳಿಸಿದೆ. ಶೋಕಾಸ್ ನೋಟಿಸ್‌ಗೂ ಉತ್ತರ ನೀಡದಿದ್ದರೆ, ಕೇಂದ್ರ ಸರ್ಕಾರವು ಪಾಸ್‌ಪೋರ್ಟ್ ರದ್ದುಗೊಳಿಸಲಿದೆ ಎಂದು ಹೇಳಲಾಗುತ್ತಿತ್ತು. ಇದರ ಬೆನ್ನಲ್ಲೇ ಪ್ರಜ್ವಲ್ ರೇವಣ್ಣ ಅವರು ವಿಡಿಯೊ ಮೂಲಕ ಸ್ಪಷ್ಟನೆ ನೀಡಿದ್ದಾರೆ.
ನಾನು ಫಾರಿನ್‌ನಲ್ಲಿ ಎಲ್ಲಿದ್ದೇನೆ ಎಂದು ಮಾಹಿತಿ ಕೊಡದಿರುವುದಕ್ಕೆ ಖಂಡಿತವಾಗಿಯೂ ಕ್ಷಮೆ ಕೇಳುತ್ತೇನೆ. ನಾನು ಮತದಾನ ಮಾಡಿ ವಿದೇಶಕ್ಕೆ ಹೋಗುವ ದಿನ ನನ್ನ ಮೇಲೆ ಯಾವುದೇ ಪ್ರಕರಣವೂ ದಾಖಲಾಗಿರಲಿಲ್ಲ. ಎಸ್‌ಐಟಿ ಕೂಡ ರಚನೆ ಆಗಿರಲಿಲ್ಲ. ಏ.26ರಂದು ನಾನು ವಿದೇಶಕ್ಕೆ ಹೋಗುವುದು ಕೂಡ ಪೂರ್ವ ನಿರ್ಧರಿತವಾಗಿರುತ್ತದೆ. ವಿದೇಶದಲ್ಲಿ ಉಳಿದುಕೊಂಡು ಮೂರ್ನಾಲ್ಕು ದಿನದ ಬಳಿಕ ಯೂಟ್ಯೂಬ್‌ನಲ್ಲಿ ನ್ಯೂಸ್ ಚಾನೆಲ್ ನೋಡುವ ವೇಳೆ ಈ ಮಾಹಿತಿ ನನಗೆ ತಿಳಿದುಬಂದಿತು. ಇದಾದ ನಂತರ ಎಸ್ಐಟಿ ಕೂಡ ನನಗೆ ನೋಟಿಸ್ ಕೊಡುವ ಕೆಲಸ ಮಾಡಿತು. ಎಸ್‌ಯಟಿ ನೋಟಿಸ್‌ಗೆ ಎಕ್ಸ್ ಖಾತೆ ಮತ್ತು ನಮ್ಮ ಲಾಯರ್ ಮೂಲಕ ವಿಚಾರಣೆಗೆ ಹಾಜರಾಜಲು 7 ದಿನಗಳ ಕಾಲಾವಕಾಶ ಕೇಳಿದ್ದೆನು.
ಈ ಏಳು ದಿನ ಸಮಯಾವಕಾಶ ಕೇಳಿದ ನಂತರ ಕಾಂಗ್ರೆಸ್ ಹಿರಿಯ ನಾಯಕರಾದ ರಾಹುಲ್ ಗಾಂಧಿ ಸೇರಿದಂತೆ ಅನೇಕರು ನನ್ನ ಹೆಸರನ್ನು ದುರ್ಬಳಕೆ ಮಾಡಿಕೊಂಡು ಮಾತನಾಡುವುದನ್ನು ನಾನು ನೋಡಿದೆ. ಇದೆಲ್ಲವನ್ನು ನೋಡಿ ನಾನು ಡಿಪ್ರೆಶನ್‌ಗೆ ಒಳಗಾಗಿ, ಒಂದೆಡೆ ಐಸೋಲೇಷನ್‌ಗೆ ಒಳಗಾಗಿದ್ದೆನು. ಇದರಿಂದಾಗಿ ನಿಮ್ಮೆಲ್ಲರ ಮುಂದೆ ನಾನು ಕ್ಷಮೆ ಕೇಳುತ್ತೇನೆ.
ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ, ಲೈಂಗಿಕ ದೌರ್ಜನ್ಯ ಸಂತ್ರಸ್ತೆಯ ಅಪಹರಣ ಸೇರಿ ಹಲವು ಪ್ರಕರಣಗಳಲ್ಲಿ ಪ್ರಜ್ವಲ್ ರೇವಣ್ಣ ಪ್ರಮುಖ ಆರೋಪಿಯಾಗಿದ್ದಾರೆ. ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಅವರ ತಂದೆ ಎಚ್.ಡಿ.ರೇವಣ್ಣ ಅವರು ಕೂಡ ಜೈಲುವಾಸ ಅನುಭವಿಸಿ, ಜಾಮೀನಿನ ಮೇಲೆ ಹೊರಬಂದಿದ್ದಾರೆ. ಇಷ್ಟಾದರೂ, ಪ್ರಜ್ವಲ್ ರೇವಣ್ಣ ಭಾರತಕ್ಕೆ ಬರದ ಕಾರಣ ಅವರ ತಾತ ಎಚ್.ಡಿ.ದೇವೇಗೌಡ ಅವರು ಬಹಿರಂಗ ಪತ್ರ ಬರೆದಿದ್ದರು. ನನ್ನ ಮೇಲೆ ಗೌರವ ಇದ್ದರೆ ವಾಪಸ್ ಬಾ ಎಂದಿದ್ದರು.
Finally prajwal Revanna releases videos from abroad, says will come to India on May 31st. Speaking on the video he said I was in depression seeing all the videos on YouTube. This is a political conspiracy made by many leaders against me. Will attend the SIT probe on May 31st coming to India he added.
25-02-25 10:30 pm
Bangalore Correspondent
Belagavi Accident, Kumbh Mela: ಬಸ್ ಗೆ ಡಿಕ್ಕಿ...
24-02-25 01:36 pm
Kumar Bangarappa, BJP President: ಬಿಜೆಪಿ ರಾಜ್ಯ...
23-02-25 06:38 pm
Telangana Model, Pramod Muthalik, CM Siddaram...
21-02-25 10:47 pm
Rohini Sindhuri, Roopa moudgil, latest news:...
21-02-25 10:12 pm
24-02-25 10:14 pm
HK News Desk
India Pak Match 2025 Live: ಪಾಕ್ ತಂಡವನ್ನು ಚಾಂಪ...
23-02-25 11:22 pm
ಗಂಗಾ ನದಿಗಿದೆ ಸ್ವಯಂ ಶುದ್ಧೀಕರಣದ ಶಕ್ತಿ ; ಕೋಟ್ಯಂತ...
23-02-25 09:52 pm
ದುಬೈನಲ್ಲಿ ಕ್ರಿಮಿನಲ್ ಇನ್ವೆಸ್ಟಿಗೇಶನ್ ಅಧಿಕಾರಿಗಳ...
22-02-25 09:48 pm
ದುಬೈ ಉದ್ಯಮಿ ಬಿ.ಆರ್ ಶೆಟ್ಟಿಗೆ ದುಬೈ ಕೋರ್ಟಿನಿಂದ ಮ...
22-02-25 07:51 pm
25-02-25 10:58 pm
Mangalore Correspondent
C-Band Doppler Weather Radar, Mangalore: ಮಂಗಳ...
25-02-25 09:34 pm
Bantwal accident, Mangalore: ಚಾಲಕಿಯ ಧಾವಂತಕ್ಕೆ...
25-02-25 02:34 pm
Puttur doctor, C Section, Mangalore: ಸಿಸೇರಿಯನ...
25-02-25 12:24 pm
Puttur News, Dr Anil Baipadithaya, hospital:...
24-02-25 02:50 pm
25-02-25 08:10 pm
Mangalore Correspondent
Mangalore, Kotekar bank robbery, Bhaskar Belc...
25-02-25 05:18 pm
Kerala Murder, Crime, Affan: ತಿರುವನಂತಪುರ ; ಒಂ...
25-02-25 01:37 pm
Delhi crime, Wife Murder: ತ್ರಿವೇಣಿ ಸಂಗಮದಲ್ಲಿ...
24-02-25 10:51 pm
Illegal drug supply, Mangalore: ಮಂಗಳೂರು ಜೈಲಿಗ...
24-02-25 09:43 pm