Davangere, Lockup death, Adil: ಚನ್ನಗಿರಿ ಲಾಕಪ್‌ ಡೆತ್‌ ಪ್ರಕರಣ ಸಿಐಡಿಗೆ ; 25 ಮಂದಿಯ ಬಂಧನ, ಡಿವೈಎಸ್​​ಪಿ ಸೇರಿ ಮೂವರು ಪೊಲೀಸ್​ ಅಧಿಕಾರಿಗಳು ಅಮಾನತು

27-05-24 06:08 pm       HK News Desk   ಕರ್ನಾಟಕ

ಮಟ್ಕಾ ಆಡಿಸುತ್ತಿದ್ದ ಆರೋಪದಲ್ಲಿ ಬಂಧಿತನಾಗಿದ್ದ ಆದಿಲ್ ಎಂಬ ಆರೋಪಿ ಚನ್ನಗಿರಿ ಪೊಲೀಸರ ವಶದಲ್ಲಿದ್ದಾಗ ಮೃತಪಟ್ಟಿದ್ದ. ಇದು ಲಾಕಪ್ ಡೆತ್ ಎಂದು ಸಂಬಂಧಿಕರು ಆರೋಪ ಮಾಡಿದ್ದು, ಚನ್ನಗಿರಿ ಪೊಲೀಸ್ ಠಾಣೆ ಮೇಲೆ ದಾಳಿ ನಡೆಸಲಾಗಿತ್ತು. ರಾಜ್ಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ಹಸ್ತಾಂತರ ಮಾಡಲಾಗಿದೆ. 

ದಾವಣಗೆರೆ, ಮೇ 26: ಮಟ್ಕಾ ಆಡಿಸುತ್ತಿದ್ದ ಆರೋಪದಲ್ಲಿ ಬಂಧಿತನಾಗಿದ್ದ ಆದಿಲ್ ಎಂಬ ಆರೋಪಿ ಚನ್ನಗಿರಿ ಪೊಲೀಸರ ವಶದಲ್ಲಿದ್ದಾಗ ಮೃತಪಟ್ಟಿದ್ದ. ಇದು ಲಾಕಪ್ ಡೆತ್ ಎಂದು ಸಂಬಂಧಿಕರು ಆರೋಪ ಮಾಡಿದ್ದು, ಚನ್ನಗಿರಿ ಪೊಲೀಸ್ ಠಾಣೆ ಮೇಲೆ ದಾಳಿ ನಡೆಸಲಾಗಿತ್ತು. ರಾಜ್ಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ಹಸ್ತಾಂತರ ಮಾಡಲಾಗಿದೆ. 

25 ಜನರು ಬಂಧನ: 

ಚನ್ನಗಿರಿ ಪೊಲೀಸ್ ಠಾಣೆ ಮೇಲೆ ದಾಳಿ ನಡೆಸಿದ ಪ್ರಕರಣದ ಸಂಬಂಧ ಇದುವರೆಗೂ 25 ಜನರನ್ನು ಬಂಧಿಸಿ ಜೈಲಿಗೆ ಕಳಿಸಲಾಗಿದೆ. ಈ ಕುರಿತು 6 ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.

ಪೊಲೀಸ್ ಠಾಣೆ ಮೇಲೆ ದಾಳಿ ನಡೆದಾಗ ಸಿಕ್ಕಿರುವ ಸಿಸಿಟಿವಿ ದೃಶ್ಯಾವಳಿ, ವಿಡಿಯೋ, ಸಾರ್ವಜನಿಕರು ಚಿತ್ರೀಕರಣ ಮಾಡಿದ ವಿಡಿಯೋ, ಮೊಬೈಲ್ ಕ್ಲಿಪ್‌ಗಳ ಆಧಾರದ ಮೇಲೆ 25 ಜನರನ್ನು ಬಂಧಿಸಲಾಗಿದೆ.

ಬಂಧಿತ ಆರೋಪಿಗಳು ಚನ್ನಗಿರಿ, ಹೊನ್ನೆಬಾಗಿ, ನಲ್ಲೂರು ಗ್ರಾಮದ ನಿವಾಸಿಗಳು. ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 353, 307ರ ಅಡಿ ಕೇಸು ದಾಖಲು ಮಾಡಲಾಗಿದೆ. ಘಟನೆ ಹಿನ್ನಲೆಯಲ್ಲಿ ಸ್ಥಳದಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಆದಿಲ್ ಮರಣೋತ್ತರ ಪರೀಕ್ಷೆಯನ್ನು ಜಡ್ಜ್ ಸಮ್ಮುಖದಲ್ಲಿ ನಡೆಸಲಾಗಿದೆ. ಮೂರು ದಿನದಲ್ಲಿ ಮರಣೋತ್ತರ ಪರೀಕ್ಷೆ ವರದಿ ಬರಲಿದ್ದು, ಬಳಿಕ ಸತ್ಯಾಂಶ ತಿಳಿಯಲಿದೆ. ಠಾಣೆಯ ಮೇಲೆ ಕಲ್ಲು ತೂರಾಟ ನಡೆಸಿದಾಗ ಗಾಯಗೊಂಡ ಪೊಲೀಸ್ ಸಿಬ್ಬಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನು ಪ್ರಕರಣ ಸಂಬಂಧ ಚನ್ನಗಿರಿ ಡಿವೈಎಸ್​​ಪಿ ಪ್ರಶಾಂತ ಮುನ್ನೊಳ್ಳಿ, ವೃತ್ತನಿರೀಕ್ಷಕ ನಿರಂಜನ ಬಿ ಹಾಗೂ ಎಸ್​ಐ ಅಖ್ತರ್ ಅವರನ್ನು ಅಮಾನತುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. 

ಯಾರೇ ತಪ್ಪು ಮಾಡಿದ್ದರೂ ಕಾನೂನು ಪ್ರಕಾರ ಕ್ರಮ ; ಡಿಕೆಶಿ

ಯಾರೇ ತಪ್ಪು ಮಾಡಿದ್ದರೂ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಕಾಂಗ್ರೆಸ್ ಪಕ್ಷ ಸಂವಿಧಾನದ ಆಶಯದಂತೆ ಎಲ್ಲ ಸಮುದಾಯಗಳನ್ನು ಸಮಾನವಾಗಿ ಕಾಣುತ್ತದೆ. ಚನ್ನಗಿರಿ ಪ್ರಕರಣದ ಬಗ್ಗೆ ಮುಖ್ಯಮಂತ್ರಿಗಳು ಪ್ರತ್ಯೇಕ ತನಿಖೆಗೆ ಆದೇಶ ನೀಡಿದ್ದಾರೆ. ತನಿಖೆ ನಡೆಯುತ್ತಿದ್ದು ಸೂಕ್ತ ಕ್ರಮ ಕೈಗೊಳ್ಳಲಾಗುವುದು. ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ. ಯಾರೂ ಕೂಡ ಕಾನೂನು ಕೈಗೆತ್ತಿಕೊಳ್ಳುವಂತಿಲ್ಲ. ಈ ವಿಚಾರದಲ್ಲಿ ಸರ್ಕಾರ ನಿಲುವು ಅಚಲವಾಗಿದೆ. ಗೃಹಸಚಿವರು ಈಗಾಗಲೇ ನಿರ್ದೇಶನ ನೀಡಿದ್ದಾರೆ ಎಂದರು.

Davanagere Adil lcokup death case handed over to CBI, Three police officers including DYSP Suspended. Almost 29 people have been arrested over attack on police station in Chennagiri.