ಬ್ರೇಕಿಂಗ್ ನ್ಯೂಸ್
30-05-24 07:55 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.30: ರಾಜ್ಯ ಸರ್ಕಾರಿ ಸ್ವಾಮ್ಯದ ಸಾರಿಗೆ ಸಂಸ್ಥೆ ಕೆಎಸ್ಸಾರ್ಟಿಸಿ ಕಾಂಗ್ರೆಸ್ ಪಕ್ಷದ 'ಶಕ್ತಿ' ಗ್ಯಾರಂಟಿ ಯೋಜನೆಯಿಂದಾಗಿ ಆರ್ಥಿಕವಾಗಿ ದುರ್ಬಲವಾಗಿದೆಯೇ ಎನ್ನುವ ಅನುಮಾನ ಬರ್ತಾ ಇದೆ. ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರಂತೂ ಸಾರಿಗೆ ನಿಗಮ ಲಾಭದಲ್ಲಿದೆ ಎಂದೇ ಹೇಳುತ್ತ ಬಂದಿದ್ದರೂ, ಸಿಬಂದಿಯ ಕಾರ್ಯವೈಖರಿ ಗಮನಿಸಿದರೆ ನಿಗಮವು ನಷ್ಟದಲ್ಲಿದೆಯೇ ಎಂಬ ಪ್ರಶ್ನೆ ಕಾಡುತ್ತಿದೆ.
ಪ್ರಯಾಣಿಕರಿಗೆ ಸುಗಮ ಸಾರಿಗೆ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ರಾಜ್ಯ ಸರ್ಕಾರವು ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (KSRTC)ಯನ್ನು ಸ್ಥಾಪಿಸಿದೆ. ಆದರೆ ಈ ನಿಗಮವು ಪ್ರಯಾಣಿಕರಿಗೆ ಸುಲಭ ಪ್ರಯಾಣದ ಅವಕಾಶ ಕಲ್ಪಿಸುವ ಬದಲು ಜನವಿರೋಧಿ ನಡೆ ಮೂಲಕ ಸಾರ್ವಜನಿಕರ ಹಿಡಿಶಾಪಕ್ಕೆ ಗುರಿಯಾಗುತ್ತಿದೆ. ಪ್ರಯಾಣಿಕರ ಆಹಾರದ ಹಕ್ಕನ್ನು ಕಸಿದುಕೊಳ್ಳುವುದಷ್ಟೇ ಅಲ್ಲ, ಪ್ರಯಾಣಿಕರನ್ನು ಅನಾರೋಗ್ಯಕ್ಕೂ ತಳ್ಳುತ್ತಿದೆ. ದೂರದ ಊರುಗಳಿಗೆ ತೆರಳುವ ಬಸ್ಸುಗಳನ್ನು ದುಬಾರಿ ದರದಲ್ಲಿ ಊಟ, ತಿಂಡಿ ಸಿಗುವ ಹೊಟೇಲ್ ಬಳಿಯಷ್ಟೇ ನಿಲ್ಲಿಸಲಾಗುತ್ತದೆ. ಆ ಹೊಟೇಲ್‌ಗಳು ಕುಗ್ರಾಮಗಳಲ್ಲಿದ್ದರೂ ಊಟ, ತಿಂಡಿಗೆ ಬೆಂಗಳೂರಿನ ಸ್ಟಾರ್ ಹೊಟೇಲ್‌ಗಿಂತಲೂ ದುಬಾರಿ ದರ ವಸೂಲಿ ಮಾಡುತ್ತಿವೆ.
ಈ ಬಗ್ಗೆ ಪ್ರಜ್ಞಾವಂತರೊಬ್ಬರು ಟ್ವೀಟ್ ಮಾಡಿ ಕೆಎಸ್ಸಾರ್ಟಿಸಿ ಕರ್ಮಕಾಂಡವನ್ನು ಬಯಲು ಮಾಡಿದ್ದಾರೆ. ಗುರುವಾರ ಮಧ್ಯಾಹ್ನ ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಐರಾವತ ಬಸ್ಸನ್ನು ಬೆಳ್ಳೂರು ಕ್ರಾಸ್ ಸಮೀಪ ಗ್ರ್ಯಾಂಡ್ ಹರ್ಷ ಎಂಬ ಹೊಟೇಲ್ ಬಳಿ ಊಟ-ತಿಂಡಿಗೆಂದು ನಿಲ್ಲಿಸಿದ್ದಾರೆ. ಮಧ್ಯಾಹ್ನ 1 ಗಂಟೆಯಿಂದ 2 ಗಂಟೆ ನಡುವೆ ಊಟಕ್ಕೆ ವ್ಯವಸ್ಥೆ ಮಾಡಿದ್ದರೆ ಪರವಾಗಿಲ್ಲ ಎನ್ನಬಹುದಿತ್ತು. ಆದರೆ ಹೊತ್ತಲ್ಲದ ಹೊತ್ತಿಗೆ ಅಂದರೆ 2.30ರ ಸುಮಾರಿಗೆ ಈ ಹೊಟೇಲ್ ಮುಂದೆ ಊಟಕ್ಕೆಂದು ಬಸ್ ನಿಲ್ಲಿಸಿದ್ದಾರೆ. ಅಷ್ಟೇ ಅಲ್ಲ, ಈ ಹೊಟೇಲ್‌ನಲ್ಲಿ ಊಟ, ಇಡ್ಲಿ ಹೊರತುಪಡಿಸಿ ಬೇರೆ ತಿಂಡಿ ಇಲ್ವಂತೆ. ದೋಸೆ ಮತ್ತಿತರ ತಿಂಡಿ ಸಂಜೆ ನಂತರವಷ್ಟೇ ಎಂದಿದ್ದಾರೆ ಹೊಟೇಲ್ ಸಿಬ್ಬಂದಿ. ಊಟಕ್ಕೆ ಬರೋಬ್ಬರಿ 200 ರೂಪಾಯಿ ದರ. ಒಂದು ಇಡ್ಲಿ ಪ್ಲೇಟಿಗೆ 63 ರೂಪಾಯಿ.
ಪ್ರಯಾಣಿಕರ ಜೇಬಿಗೆ ಕತ್ತರಿ ಹಾಕಿಸಿದ ಬಸ್ ನಿರ್ವಾಹಕರಲ್ಲಿ ಈ ಬಗ್ಗೆ ಕೇಳಿದರೆ, ಈ ಹೊಟೇಲ್‌ನಿಂದ KSRTC ನಿಗಮಕ್ಕೆ ಹಣ ಸಂದಾಯವಾಗುತ್ತೆ. ಹಾಗಾಗಿ ಇಲ್ಲೇ ಬಸ್ ನಿಲ್ಲಿಸಬೇಕೆಂದು ಅಧಿಕಾರಿಗಳ ಆದೇಶವಿದೆ ಎಂದಿದ್ದಾರಂತೆ.
ಈ ಕುರಿತಂತೆ ಹೊಟೇಲ್ ಬಿಲ್ ಜೊತೆ ಟ್ವೀಟ್ ಮಾಡಿರುವ ಕೆಎಸ್ಸಾರ್ಟಿಸಿ ಪ್ರಯಾಣಿಕರೊಬ್ಬರು, ಗ್ಯಾರೆಂಟಿ ಯೋಜನೆಯಿಂದಾಗಿ ನಿಗಮವು ಭಿಕ್ಷಾಟನೆ ಹಂತ ತಲುಪಿದೆಯೇ ಎಂದು ಪ್ರಶ್ನಿಸಿದ್ದಾರೆ. 'ಶಕ್ತಿ' ಯೋಜನೆಯನ್ನು ಸಮರ್ಥಿಸುತ್ತಿರುವ ಸಾರಿಗೆ ಮಂತ್ರಿ ರಾಮಲಿಂಗ ರೆಡ್ಡಿಯವರನ್ನು ಕೆಣಕಿರುವ ನೆಟ್ಟಿಗರು, 'ರಾಮಲಿಂಗಾ ರೆಡ್ಡಿಯವರೇ ನಿಮ್ಮ ಕೆಎಸ್ಸಾರ್ಟಿಸಿಯು ಗ್ಯಾರೆಂಟಿ ಯೋಜನೆಯಿಂದಾಗಿ ಬಲಗೊಂಡಿದೆಯೇ? ಅಥವಾ ಬರ್ಬಾದ್ ಆಗಿದೆಯೇ? ಹಾಗಾಗಿ ಈ ಭಿಕ್ಷಾಟನೆಯೇ? ಭ್ರಷ್ಟಾಚಾರವೇ?' ಎಂದು ಪ್ರಶ್ನಿಸಿದ್ದಾರೆ.
Due to Shathi Yojan's free bus ticket for women, KSRTC appears to be losing money; Alvin Views' tweet gets viral. According to a tweet, KSRTC buses stop at hotels for lunch or dinner, where the food is more expensive than at a star hotel.
08-09-25 05:21 pm
HK News Desk
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
Fine, Violation, Home Minister: ಮುಖ್ಯಸ್ಥರಿಗೂ...
07-09-25 10:17 am
Mandya Suicide, Marriage: ಮದುವೆ ಕ್ಯಾನ್ಸಲ್ ಆಗಿ...
07-09-25 10:11 am
08-09-25 02:02 pm
HK News Desk
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
UPI Transaction Limit: ಯುಪಿಐ ಪಾವತಿ ಮಿತಿ ಹೆಚ್ಚ...
06-09-25 10:34 am
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
07-09-25 03:34 pm
Mangalore Correspondent
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm