ಬ್ರೇಕಿಂಗ್ ನ್ಯೂಸ್
03-06-24 09:04 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 3 : ರಾಜ್ಯದ ನವಸಾಕ್ಷರ ಆಂದೋಲನದಲ್ಲಿ ಸಕ್ರಿಯ ಪಾತ್ರ ವಹಿಸಿರುವ, ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತ ಬಡಿಲ ಹುಸೈನ್ 2024ನೇ ಸಾಲಿನ "ವರ್ಷದ ಬ್ಯಾರಿ" ಹಾಗೂ ಒಬ್ಬಂಟಿಯಾದರೂ ಮಗಳ ಜೊತೆಗೂಡಿ 75ಕ್ಕೂ ಹೆಚ್ಚು ಹಸು, ಕರುಗಳನ್ನು ಸಾಕಿ ಯಶಸ್ವಿ ಹೈನೋದ್ಯಮಿಯಾಗಿರುವ ಹರೇಕಳದ ಮೈಮುನಾ- ಮರ್ಜೀನಾ ಅವರು "ವರ್ಷದ ಬ್ಯಾರ್ದಿ" ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ಎಂದು ಬೆಂಗಳೂರಿನ ಬ್ಯಾರೀಸ್ ವೆಲ್ಫೇರ್ ಅಸೋಸಿಯೇಶನ್ (ರಿ) ಅಧ್ಯಕ್ಷ, ವಿಧಾನ ಪರಿಷತ್ ಮಾಜಿ ಸದಸ್ಯ ಬಿ.ಎಂ.ಫಾರೂಕ್ ತಿಳಿಸಿದ್ದಾರೆ.
ಸಂಸ್ಥೆಯು ಶಿಕ್ಷಣ ಮತ್ತು ಸಾಮಾಜಿಕ ಕ್ಷೇತ್ರದ ಯಶಸ್ವಿ ಸಾಧಕ ಬ್ಯಾರಿಗಳಿಗೆ ಪ್ರತಿವರ್ಷ ನೀಡುವ ಈ ಪ್ರತಿಷ್ಠಿತ ಪ್ರಶಸ್ತಿಯು ಫಲಕ, ಸನ್ಮಾನ ಪತ್ರ ಮತ್ತು ತಲಾ 50,000 ರೂ. ನಗದನ್ನು ಒಳಗೊಂಡಿದೆ. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳ ಬ್ಯಾರಿ ಸಮುದಾಯದ 12ಕ್ಕೂ ಹೆಚ್ಚು ಸಾಧಕರ ಸಾಧನೆಗಳನ್ನು ಪರಿಶೀಲಿಸಿದ ಬಳಿಕ ಸಂಸ್ಥೆಯು ಈ ಆಯ್ಕೆಯನ್ನು ಮಾಡಿದೆ ಎಂದು ಫಾರೂಕ್ ತಿಳಿಸಿದ್ದಾರೆ.
ಜೂನ್ ತಿಂಗಳ 9 ರಂದು ಬೆಂಗಳೂರಿನ ಎಚ್ ಬಿ ಆರ್ ಲೇಔಟಿನಲ್ಲಿರುವ ಬ್ಯಾರೀಸ್ ಸೌಹಾರ್ದ ಭವನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್, ಸಚಿವರಾದ ಕೆ.ಜೆ.ಜಾರ್ಜ್, ಡಾ.ಎಂ.ಸಿ.ಸುಧಾಕರ್, ಬಿಡಿಎ ಅಧ್ಯಕ್ಷ, ಶಾಸಕ ಎನ್.ಎ.ಹ್ಯಾರಿಸ್ ಮತ್ತಿತರ ಗಣ್ಯರ ಸಮ್ಮುಖದಲ್ಲಿ ಎಸ್ಸೆಸೆಲ್ಸಿ, ಪಿಯುಸಿಯಲ್ಲಿ ಶೇ. 90 ಕ್ಕೂ ಹೆಚ್ಚು ಅಂಕ ಗಳಿಸಿದ ನೂರಕ್ಕೂ ಹೆಚ್ಚು ಬ್ಯಾರಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಸಹ ಸಂಘ ಸಂಸ್ಥೆಗಳ ಸಮ್ಮಿಲನ ಕಾರ್ಯಕ್ರಮ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.
Right to Information and social activist Badila Hussain, who has played an active role in the neo-literacy movement in the state, has been selected for the "Bardi of the Year" award for the year 2024 and Maimuna-Marjina of Harekala, who has reared more than 75 cows and calves along with her daughter alone, has been selected for the "Bardi of the Year" award, said B.M. Farooq, former Member of Legislative Council and President of Baris Welfare Association (Re), Bengaluru.
25-02-25 10:30 pm
Bangalore Correspondent
Belagavi Accident, Kumbh Mela: ಬಸ್ ಗೆ ಡಿಕ್ಕಿ...
24-02-25 01:36 pm
Kumar Bangarappa, BJP President: ಬಿಜೆಪಿ ರಾಜ್ಯ...
23-02-25 06:38 pm
Telangana Model, Pramod Muthalik, CM Siddaram...
21-02-25 10:47 pm
Rohini Sindhuri, Roopa moudgil, latest news:...
21-02-25 10:12 pm
24-02-25 10:14 pm
HK News Desk
India Pak Match 2025 Live: ಪಾಕ್ ತಂಡವನ್ನು ಚಾಂಪ...
23-02-25 11:22 pm
ಗಂಗಾ ನದಿಗಿದೆ ಸ್ವಯಂ ಶುದ್ಧೀಕರಣದ ಶಕ್ತಿ ; ಕೋಟ್ಯಂತ...
23-02-25 09:52 pm
ದುಬೈನಲ್ಲಿ ಕ್ರಿಮಿನಲ್ ಇನ್ವೆಸ್ಟಿಗೇಶನ್ ಅಧಿಕಾರಿಗಳ...
22-02-25 09:48 pm
ದುಬೈ ಉದ್ಯಮಿ ಬಿ.ಆರ್ ಶೆಟ್ಟಿಗೆ ದುಬೈ ಕೋರ್ಟಿನಿಂದ ಮ...
22-02-25 07:51 pm
25-02-25 10:58 pm
Mangalore Correspondent
C-Band Doppler Weather Radar, Mangalore: ಮಂಗಳ...
25-02-25 09:34 pm
Bantwal accident, Mangalore: ಚಾಲಕಿಯ ಧಾವಂತಕ್ಕೆ...
25-02-25 02:34 pm
Puttur doctor, C Section, Mangalore: ಸಿಸೇರಿಯನ...
25-02-25 12:24 pm
Puttur News, Dr Anil Baipadithaya, hospital:...
24-02-25 02:50 pm
25-02-25 08:10 pm
Mangalore Correspondent
Mangalore, Kotekar bank robbery, Bhaskar Belc...
25-02-25 05:18 pm
Kerala Murder, Crime, Affan: ತಿರುವನಂತಪುರ ; ಒಂ...
25-02-25 01:37 pm
Delhi crime, Wife Murder: ತ್ರಿವೇಣಿ ಸಂಗಮದಲ್ಲಿ...
24-02-25 10:51 pm
Illegal drug supply, Mangalore: ಮಂಗಳೂರು ಜೈಲಿಗ...
24-02-25 09:43 pm