ಹಾಸನ ಜೆಡಿಎಸ್ - ಬಿಜೆಪಿ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಲೀಡಿಂಗ್ ; ರಿಸಲ್ಟ್‌ ನೋಡಲಾಗದೇ ಸೆಲ್‌‌ನಲ್ಲಿ ಪರದಾಟ

04-06-24 10:54 am       HK News Desk   ಕರ್ನಾಟಕ

ಹಾಸನ ಲೋಕಸಭೆ ಕ್ಷೇತ್ರದ 2024ರ ಚುನಾವಣೆ ಮತ ಎಣಿಕೆ ಪ್ರಗತಿಯಲ್ಲಿದೆ. ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ  ಮುನ್ನಡೆ ಸಾಧಿಸಿದ್ದಾರೆ. ಪ್ರಜ್ವಲ್ ರೇವಣ್ಣ ಸದ್ಯ ಎಸ್‌ಐಟಿ ವಶದಲ್ಲಿದ್ದಾರೆ

ಹಾಸನ, ಜೂ 04: ಹಾಸನ ಲೋಕಸಭೆ ಕ್ಷೇತ್ರದ 2024ರ ಚುನಾವಣೆ ಮತ ಎಣಿಕೆ ಪ್ರಗತಿಯಲ್ಲಿದೆ. ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ  ಮುನ್ನಡೆ ಸಾಧಿಸಿದ್ದಾರೆ. ಪ್ರಜ್ವಲ್ ರೇವಣ್ಣ ಸದ್ಯ ಎಸ್‌ಐಟಿ ವಶದಲ್ಲಿದ್ದಾರೆ

ಮಂಗಳವಾರ ಬೆಳಗ್ಗೆ ಹಾಸನ ನಗರದ ಡೈರಿ ವೃತ್ತದಲ್ಲಿರುವ ಇಂಜಿನಿಯರಿಂಗ್ ಕಾಲೇಜಿನಲ್ಲಿ ಲೋಕಸಭೆ ಚುನಾವಣೆ ಮತ ಎಣಿಕೆ ನಡೆಯುತ್ತಿದೆ. ಚುನಾವಣೆಗೆ ಬಿಜೆಪಿ-ಜೆಡಿಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ. ಕಾಂಗ್ರೆಸ್ ಅಭ್ಯರ್ಥಿ ಎಂ. ಶ್ರೇಯಸ್ ಪಟೇಲ್.

ಕಾಂಗ್ರೆಸ್ ಅಭ್ಯರ್ಥಿ ಎಂ. ಶ್ರೇಯಸ್ ಪಟೇಲ್ ಪ್ರಜ್ವಲ್ ರೇವಣ್ಣಗೆ ಎದುರಾಳಿ. ಮೈತ್ರಿ ಅಭ್ಯರ್ಥಿಯಾದ ಪ್ರಜ್ವಲ್‌ರೇವಣ್ಣ 104544 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್‌ ಪಟೇಲ್ 102430 ಮತಗಳನ್ನು ಪಡೆದಿದ್ದಾರೆ.

ಇನ್ನೂ ಇತ್ತ ತನ್ನ ರಿಸಲ್ಟ್‌ ನೋಡಲಾಗದೇ ಪ್ರಜ್ವಲ್‌ ರೇವಣ್ಣ ಸೈಲೆಂಟಾಗಿ ಎಸ್‌ಐಟಿ ಸೆಲ್‌‌ನಲ್ಲಿ ಕುಳಿತಿದ್ದಾರೆ. ಹಾಸನದಲ್ಲಿ ಪ್ರಜ್ವಲ್‌ ರೇವಣ್ಣ ಸದ್ಯಕ್ಕೆ ಮುನ್ನಡೆ ಕಾಯ್ದುಕೊಂಡಿದ್ದಾರೆ

ಫಲಿತಾಂಶ ವೀಕ್ಷಿಸಲು ಟಿವಿ ವ್ಯವಸ್ಥೆ ಮಾಡಿ ಎಂದು ಎಸ್ಐಟಿ ಮುಂದೆ ಪ್ರಜ್ಬಲ್ ಬೇಡಿಕೆ ಇಟ್ಟಿದ್ದಾರೆ. ಆದರೆ, ಟಿವಿ ವ್ಯವಸ್ಥೆಗೆ ಕೋರ್ಟ್ ಅನುಮತಿ ಬೇಕೆಂದು ಎಸ್ಐಟಿ ತನಿಖಾಧಿಕಾರಿ ಹೇಳಿದ್ದಾರೆ. ಹೀಗಾಗಿ ಎಸ್ಐಟಿ ಸೆಲ್‌ನಲ್ಲಿ ಪ್ರಜ್ವಲ್ ಡಲ್ಲಾಗಿ ಅತ್ತಿಂದಿತ್ತ ಓಡಾಡಿಕೊಂಡಿದ್ದಾರೆ.

JDS Hassan Prajwa revanna leaidng now against Shreyas Patel. Prajwal gets 104544 votes and shreyas 102430 votes as of 10:48am