ಬ್ರೇಕಿಂಗ್ ನ್ಯೂಸ್
04-06-24 05:31 pm Bangalore Correspondent ಕರ್ನಾಟಕ
ಬೆಂಗಳೂರು, ಜೂ.04: ಒಂದು ಕಾಲದಲ್ಲಿ ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಮತ್ತೊಮ್ಮೆ ಕಮಲ ಅರಳಿದ್ದು, ಕಾಂಗ್ರೆಸ್ ಅಭ್ಯರ್ಥಿ ಪ್ರೋ ರಾಜೀವ್ ಗೌಡ ಅವರ ವಿರುದ್ಧ ಶ್ಲೋಭಾ ಕರಂದ್ಲಾಜೆ ಗೆಲುವಿನ ನಗೆ ಬೀರಿದ್ದಾರೆ. ಸತತ ನಾಲ್ಕು ಬಾರಿ ಇಲ್ಲಿ ಬಿಜೆಪಿ ಜಯ ಸಾಧಿಸಿದ್ದು, 5ನೇ ಬಾರಿಗೂ ಇಲ್ಲಿ ಮತದಾರರು ಬಿಜೆಪಿ ಅಭ್ಯರ್ಥಿಗೆ ಜೈ ಎಂದಿದ್ದಾರೆ. ಪಂಚ ಗ್ಯಾರಂಟಿಗಳನ್ನು ಮುಂದಿಟ್ಟುಕೊಂಡು ಅಬ್ಬರ ಪ್ರಚಾರ ಮಾಡಿದ್ದ ಕಾಂಗ್ರೆಸ್‌ಗೆ ನಿರಾಸೆಯಾಗಿದೆ.
2004 ರಿಂದ ಉತ್ತರ ಲೋಕಸಭಾ ಕ್ಷೇತ್ರ ಬಿಜೆಪಿಯ ಹಿಡಿತದಲ್ಲಿದ್ದು, ಹಿಂದಿನ ಎರಡು ಚುನಾವಣೆಯಲ್ಲಿ ಸತತವಾಗಿ ಗೆಲುವು ಬಾರಿಸಿದ್ದ ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡ ಅವರಿಗೆ ಈ ಬಾರಿ ಟಿಕೆಟ್ ನೀಡಿರಲಿಲ್ಲ. ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿನ ಆಂತರಿಕ ಸಮಸ್ಯೆ ಹಾಗೂ ಗೊಂದಲಗಳ ಹಿನ್ನೆಲೆಯಲ್ಲಿ ಶೋಭಾ ಕರಂದ್ಲಾಜೆ ಅವರನ್ನು ಇಲ್ಲಿ ಕಣಕ್ಕಿಳಿಸಲಾಗಿತ್ತು. ಕರಂದ್ಲಾಜೆ ಅವರು ಕಾಂಗ್ರೆಸ್‌ನ ಪ್ರೋ ರಾಜೀವ್ ಗೌಡ ಅವರನ್ನು ಮಣಿಸಿ ಗೆಲುವಿನ ಮಾಲೆ ಧರಿಸಿದ್ದಾರೆ.
ಸೌಮ್ಯ ರೆಡ್ಡಿ ವಿರುದ್ಧ ಭರ್ಜರಿ ಗೆಲುವು!
ಇನ್ನು ಬೆಂಗಳೂರು ದಕ್ಷಿಣ ಬಿಜೆಪಿಗೆ ಸುಲಭ ಗೆಲುವು ಅಂತ ಎಲ್ಲರೂ ಅಂದುಕೊಂಡಿದ್ದರು. ತೇಜಸ್ವಿ ಸೂರ್ಯ ಈಗಾಗಲೇ ಅಲ್ಲಿ ಈ ಹಿಂದಿನ ಲೋಕಸಭೆಯಲ್ಲಿ ನಿಂತು ಗೆಲುವು ಕಂಡಿದ್ದರು. ಆದರೆ ಈ ಬಾರಿ ಇಲ್ಲಿ ಟಫ್ ಫೈಟ್ ಆಗುತ್ತೆ ಎನ್ನಲಾಗ್ತಿದೆ. ಆದರೆ ಈ ಬಾರಿಯೂ ತೇಜಸ್ವಿ ಸೂರ್ಯ ಭರ್ಜರಿ ಗೆಲುವು ದಾಖಲಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ವಿರುದ್ಧ ಗೆದ್ದು ಬೀಗಿದ್ದಾರೆ.
ಮತ್ತೊಮ್ಮೆ ಬೆಂಗಳೂರು ದಕ್ಷಿಣದಲ್ಲಿ ತೇಜಸ್ವಿ ಸೂರ್ಯ ಪ್ರಜ್ವಲಿಸಲಿದ್ದಾರೆ. ಬೆಂಗಳೂರು ದಕ್ಷಿಣ ಜನ ಮತ್ತೊಮ್ಮೆ ತೇಜಸ್ವಿಗೆ ಮತ ನೀಡಿದ್ದಾರೆ. ಇತ್ತ ಈ ಬಾರಿ ನಾನೇ ಗೆಲ್ತೀನಿ ಅಂದುಕೊಂಡಿದ್ದ ಸೌಮ್ಯ ರೆಡ್ಡಿಗೆ ಬಿಗ್ ಶಾಕ್ ಎದುರಾಗಿದೆ. ಕಳೆದ ವಿಧಾನಸಭೆಯಲ್ಲೂ ಸೌಮ್ಯ ರೆಡ್ಡಿ ಬೆರಳಣಿಕೆಯಷ್ಟು ಮತಗಳಿಂದ ಸೋತ್ತಿದ್ರು. ಆದ್ರೆ ಲೋಕಸಭೆಯಲ್ಲಿ ಭಾರೀ ಅಂತರದಿಂದ ಸೋಲುಂಡಿದ್ದಾರೆ.
For the Lok Sabha election 2024, the counting of votes in the Bangalore North constituency is set to begin at 8 am on Tuesday, June 4. The Bharatiya Janata Party (BJP) has been winning the constituency since 2004.
17-05-25 01:44 pm
Bangalore Correspondent
Santosh Lad, Modi, Pak, War: ಮೋದಿ ತಾವೇ ಸುಪ್ರೀ...
16-05-25 10:04 am
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
16-05-25 04:45 pm
HK News Desk
ಮುಸ್ಲಿಂ ವ್ಯಕ್ತಿಗೆ ಕುರಾನ್ ಪ್ರಕಾರ ನಾಲ್ಕು ಮದುವೆ...
15-05-25 09:09 pm
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
17-05-25 01:01 pm
Mangalore Correspondent
CM Siddaramaiah, New Dc Office Mangalore Inau...
16-05-25 10:27 pm
Siddaramaiah, Cm Mangalore, BJP black flag: ಸ...
16-05-25 06:05 pm
Mangalore, Dinesh Gundurao: ಇಡಿ ದೇಶದಲ್ಲಿ ಅತೀ...
16-05-25 02:47 pm
Mangalore Cargo Ship, Lakshadweep: ಲಕ್ಷದ್ವೀಪಕ...
16-05-25 10:06 am
16-05-25 11:06 pm
Mangalore Correspondent
Belagavi Protest, Quran Burnt, Police, Crime:...
16-05-25 09:20 pm
Davanagere Crime, Gold Robbery: ಆನ್ಲೈನ್ ಗೇಮಿಂ...
15-05-25 11:06 pm
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm