ಚಿಕ್ಕೋಡಿ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆದ್ದ ಖುಷಿಯಲ್ಲಿ ಪಾಕ್​​ ಪರ ಘೋಷಣೆ ಆರೋಪ ; ಆರೋಪಿ ಬಂಧನ

05-06-24 11:58 am       HK News Desk   ಕರ್ನಾಟಕ

ಚಿಕ್ಕೋಡಿ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆದ್ದ ಹಿನ್ನೆಲೆ ಸಂಭ್ರಮಾಚರಣೆಯಲ್ಲಿ ಯುವಕನೋರ್ವ ಪಾಕಿಸ್ತಾನದ ಪರ ಘೋಷಣೆ ಕೂಗಿದ್ದು, ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ.

ಚಿಕ್ಕೋಡಿ, ಜೂ.05: ಚಿಕ್ಕೋಡಿ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆದ್ದ ಹಿನ್ನೆಲೆ ಸಂಭ್ರಮಾಚರಣೆಯಲ್ಲಿ ಯುವಕನೋರ್ವ ಪಾಕಿಸ್ತಾನದ ಪರ ಘೋಷಣೆ ಕೂಗಿದ್ದು, ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ.

ಜಮೀರ್ ನಾಯಿಕವಾಡಿ (25) ಬಂಧಿತ ಆರೋಪಿ. ಮಂಗಳವಾರ ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಚಿಕ್ಕೋಡಿಯಲ್ಲಿ ಕಾಂಗ್ರೆಸ್ ಭರ್ಜರಿ ಜಯ ಗಳಿಸಿತ್ತು. ಈ ಹಿನ್ನೆಲೆ ಮತ ಎಣಿಕೆ ಕೇಂದ್ರದ ಹಿನ್ನೆಲೆ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದ್ದಾರೆ.

ಈ ವೇಳೆ ಆರೋಪಿ ಜಮೀರ್ "ಪಾಕಿಸ್ತಾನ್ ಕೀ ಜೈ" ಎಂದು ಘೋಷಣೆ ಕೂಗಿದ್ದಾನೆ. ಈ ಹಿನ್ನೆಲೆ ಆರೋಪಿಯನ್ನು ದಸ್ತಗಿರಿ ಮಾಡಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

ಚಿಕ್ಕೋಡಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ, ಈ ಕುರಿತು ಪೊಲೀಸರು ತನಿಖೆ ಮಾಡುತ್ತಾರೆ, ಸದ್ಯ ಆರೋಪಿಯನ್ನು ಬಂಧನ ಮಾಡಿದ್ದಾರೆ, ದೇಶ ವಿರೋಧಿ ಘೋಷಣೆ ಯಾರೆ ಕೂಗಿದರು ಅದು ತಪ್ಪು. ನಾವು ಖಂಡನೆ ವ್ಯಕ್ತಪಡಿಸುತ್ತೇವೆ ಎಂದು ಸಚಿವ ಸತೀಶ್​ ಜಾರಕಿಹೊಳಿ ಹೇಳಿದ್ದಾರೆ.

Chikkodi Police arrested a 26-year-old man on the charge of shouting Pakistan Zindabad during the victory procession of Congress candidate Priyanka Jarkiholi on Tuesday. Superintendent of Police Bheema Shankar Guled gave the name of the arrested man as Zameer Naikwadi.