ಬ್ರೇಕಿಂಗ್ ನ್ಯೂಸ್
06-06-24 10:30 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 6: ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ 11 ಮಂದಿ ಚುನಾವಣೆ ಇಲ್ಲದೆ ಅವಿರೋಧ ಆಯ್ಕೆಯಾಗಿದ್ದಾರೆ. ಐವಾನ್ ಡಿಸೋಜ, ಸಿಟಿ ರವಿ, ಬೋಸರಾಜು ಸೇರಿ 11 ಮಂದಿ ಅವಿರೋಧ ಆಯ್ಕೆಯಾಗಿದ್ದು, ಸದ್ದಿಲ್ಲದೆ ವಿಧಾನ ಪರಿಷತ್ ಸದಸ್ಯರಾಗಿದ್ದಾರೆ.
ರಾಜ್ಯದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜು, ಮಂಗಳೂರಿನ ಕ್ರೈಸ್ತ ಮುಖಂಡ ಐವಾನ್ ಡಿಸೋಜ ಎರಡನೇ ಬಾರಿಗೆ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಉಳಿದಂತೆ ಕಾಂಗ್ರೆಸಿನಿಂದ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ, ಕೆ.ಗೋವಿಂದ ರಾಜು, ಬಿಲ್ಕಿಸ್ ಬಾನೋ, ಜಗದೇವ್ ಗುತ್ತೇದಾರ್ ಪರಿಷತ್ತಿಗೆ ಆಯ್ಕೆಯಾಗಿದ್ದಾರೆ.
ಬಿಜೆಪಿಯಿಂದ ಸಿಟಿ ರವಿ, ಎನ್.ರವಿಕುಮಾರ್, ಮರಾಠ ಸಮುದಾಯದ ಮುಖಂಡ ಮಾರುತಿ ರಾವ್ ಮುಳೆ ಮತ್ತು ಜೆಡಿಎಸ್ ನಿಂದ ಜಯರವಿ ಗೌಡ ಅವರು ಪರಿಷತ್ತಿಗೆ ಆಯ್ಕೆಗೊಂಡಿದ್ದಾರೆ. 11 ಸ್ಥಾನದ ಆಯ್ಕೆಗೆ ಜೂನ್ 13ರಂದು ಚುನಾವಣೆ ಘೋಷಿಸಲಾಗಿತ್ತು. 11 ಸ್ಥಾನಕ್ಕೆ ಅಷ್ಟೇ ಸಂಖ್ಯೆಯಲ್ಲಿ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣೆ ಇಲ್ಲದೆ ಆಯ್ಕೆ ಆದಂತಾಗಿದೆ. ಒಂದು ಸ್ಥಾನದ ಆಯ್ಕೆಗೆ 19 ವಿಧಾನಸಭೆ ಸದಸ್ಯರ ಬಲ ಅಗತ್ಯ ಇತ್ತು. ಸಂಖ್ಯಾಬಲದ ಆಧಾರದಲ್ಲಿ 36 ಸದಸ್ಯರಿರುವ ಕಾಂಗ್ರೆಸಿನಿಂದ ಏಳು ಮಂದಿಯನ್ನು ಆಯ್ಕೆ ಮಾಡಲಾಗಿತ್ತು.
Eleven members of the Legislative Council have been elected unopposed to the Legislative Council from the Legislative Assembly. Ivan D'Souza, Ct Ravi and Boseraju are among the 11 elected unopposed members of the Legislative Council.
22-12-25 06:29 pm
HK News Desk
ಸ್ಥಳೀಯ ಮಟ್ಟದಲ್ಲೇ ಗೊಂದಲ ಬಗೆಹರಿಸಿಕೊಳ್ಳಿ, ಎಲ್ಲದಕ...
21-12-25 05:33 pm
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
22-12-25 06:32 pm
HK News Desk
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
22-12-25 06:36 pm
Mangalore Correspondent
ಕೋಳಿ ಅಂಕದಲ್ಲಿ ಪೆಟ್ಟು ಕೊಡಲು ಇವರ ಅಪ್ಪನ ಜಾಗವಾ?...
22-12-25 12:26 pm
ಕೇಪು ಜಾತ್ರೆ ಕೋಳಿ ಅಂಕಕ್ಕೆ ಎರಡನೇ ದಿನವೂ ಪೊಲೀಸ್ ದ...
21-12-25 11:04 pm
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
22-12-25 04:00 pm
Mangalore Correspondent
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm