ಬ್ರೇಕಿಂಗ್ ನ್ಯೂಸ್
07-06-24 10:00 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 7: ಉತ್ತರಾಖಂಡ ರಾಜ್ಯದ ಸಹಸ್ತ್ರ ತಾಲ್‌ಗೆ ಚಾರಣಕ್ಕೆ ತೆರಳಿ, ಹವಾಮಾನ ವೈಪರೀತ್ಯದಿಂದ ಅಪಾಯಕ್ಕೆ ಸಿಲುಕಿ ಮೃತಪಟ್ಟ ಒಂಬತ್ತು ಮಂದಿ ಕನ್ನಡಿಗರ ಮೃತದೇಹಗಳನ್ನು ವಿಮಾನದ ಮೂಲಕ ಬೆಂಗಳೂರಿಗೆ ತರಲಾಗಿದ್ದು ಶುಕ್ರವಾರ ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಯಿತು.
ಮೃತದೇಹಗಳನ್ನು ಪಡೆಯುತ್ತಿದ್ದಂತೆ ಶೋಕತಪ್ತ ಸಂಬಂಧಿಕರು ಕಣ್ಣೀರು ಹಾಕಿದರು. ಸ್ಥಳದಲ್ಲಿದ್ದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಪಾರ್ಥಿವ ಶರೀರಗಳಿಗೆ ಅಂತಿಮ ನಮನ ಸಲ್ಲಿಸಿದರು. ಶಿರಸಿಯ ಪದ್ಮಿನಿ ಹೆಗಡೆ, ವೆಂಕಟೇಶ್ ಪ್ರಸಾದ್, ಆಶಾ ಸುಧಾಕರ್, ಪದ್ಮನಾಭ ಭಟ್ ಕುಂದಾಪುರ, ಕೃಷ್ಣಮೂರ್ತಿ, ಸಿಂಧು ವಕೆರಲಂ, ವಿನಾಯಕ್ ಮುಂಗುರವಾಡಿ, ಸುಜಾತಾ ಮುಂಗುರವಾಡಿ, ಚಿತ್ರಾ ಪ್ರಣೀತ್, ಅನಿತಾ ರಂಗಪ್ಪ ದುರಂತದಲ್ಲಿ ಮೃತಪಟ್ಟವರು.
ಸಾವಲ್ಲೂ ಒಂದಾದ ಹುಬ್ಬಳ್ಳಿ ದಂಪತಿ
ಚಾರಣಕ್ಕೆ ತೆರಳಿ ಹಿಮಪಾತದಿಂದ ಸಾವನ್ನಪ್ಪಿದ 9 ಕನ್ನಡಿಗರಲ್ಲಿ ಹುಬ್ಬಳ್ಳಿ ಮೂಲದ ಮುಂಗುರವಾಡಿ ದಂಪತಿಯೂ ಇದ್ದಾರೆ. ಕರ್ನಾಟಕದಿಂದ ತೆರಳಿದ್ದ 22 ಚಾರಣಿಗರ ತಂಡ ಉತ್ತರಾಖಂಡದ ಸಹಸ್ತ್ರತಾಲ್ ಪರ್ವತ ಪ್ರದೇಶಕ್ಕೆ ತೆರಳಿತ್ತು. ಚಾರಣದ ಗಮ್ಯಸ್ಥಾನವನ್ನು ತಲುಪಿದ ತಂಡ ಮತ್ತೆ ಶಿಬಿರಕ್ಕೆ ಹಿಂತಿರುಗುತ್ತಿದ್ದಾಗ ಹಿಮಗಾಳಿಯಿಂದಾಗಿ ಹವಾಮಾನ ಹದಗೆಟ್ಟಿದ್ದು ಎಲ್ಲ ಚಾರಣಿಗರು ಅಪಾಯಕ್ಕೆ ಸಿಲುಕಿದ್ದರು. ಇದರಲ್ಲಿ 9 ಚಾರಣಿಗರು ಹಿಮದಿಂದಾಗಿ ತೀವ್ರ ಚಳಿಗೆ ಮೃತಪಟ್ಟಿದ್ದು, 13 ಜನರನ್ನು ರಕ್ಷಣೆ ಮಾಡಲಾಗಿದೆ. ಇವರಲ್ಲಿ ಹುಬ್ಬಳ್ಳಿ ಮೂಲದ ವಿನಾಯಕ ಮುಂಗುರವಾಡಿ ಹಾಗೂ ಸುಜಾತಾ ಮುಂಗುರವಾಡಿ ದಂಪತಿ ದುರಂತ ಸಾವು ಕಂಡಿದ್ದಾರೆ. ಈ ದಂಪತಿಯ ಹುಟ್ಟಿದ ದಿನ ಒಂದೇ(ಅಕ್ಟೋಬರ್ 3) ಆಗಿತ್ತು. ವಿಪರ್ಯಾಸವೆಂದರೆ ಜೂನ್ 4ರಂದು ಒಟ್ಟಿಗೇ ಮೃತಪಟ್ಟು ಸಾವಲ್ಲೂ ಒಂದಾಗಿದ್ದಾರೆ.
ಇವರಿಬ್ಬರೂ ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ 1994 ರಲ್ಲಿ ಇಂಜಿನಿಯರಿಂಗ್ ಪದವಿ ಪಡೆದಿದ್ದರು. ವಿನಾಯಕ ಮೆಕ್ಯಾನಿಕಲ್ ವಿಭಾಗದಿಂದ ಚಿನ್ನದ ಪದಕ ಪಡೆದಿದ್ದರು. ಆರಂಭದ ದಿನಗಳಲ್ಲಿ ಹುಬ್ಬಳ್ಳಿಯ ಉಣಕಲ್‌ನಲ್ಲಿ ವಾಸವಿದ್ದ ಇಬ್ಬರೂ ಉದ್ಯೋಗ ಅರಸಿಕೊಂಡು 1996ರಲ್ಲಿ ಬೆಂಗಳೂರಿಗೆ ತೆರಳಿದ್ದರು. ಖಾಸಗಿ ಕಂಪನಿಯಲ್ಲಿ ಉದ್ಯೋಗ ಮಾಡುತ್ತಲೇ 'ಉತ್ತರ ಕರ್ನಾಟಕ ಸ್ನೇಹಲೋಕ ಟ್ರಸ್ಟ್' ಎಂಬ ಸಂಸ್ಥೆಯನ್ನು ಹುಟ್ಟುಹಾಕಿ ಕಳೆದ 16 ವರ್ಷಗಳಿಂದ ಜನರ ಸೇವೆಯಲ್ಲಿ ತೊಡಗಿದ್ದರು. ಪ್ರತಿ ವರ್ಷ ಚಾರಣ ಹೋಗುವುದು ಇವರ ಹವ್ಯಾಸ ಆಗಿತ್ತು.
The bodies of all nine persons from Bengaluru, who lost their lives during the Sahastra Tal trek in Uttarakhand, were handed over to their families here on Friday. While 13 survivors of the 22-member group from Bengaluru arrived in the city on Thursday, the bodies arrived Friday on commercial flights from Delhi.
24-02-25 01:36 pm
HK News Desk
Kumar Bangarappa, BJP President: ಬಿಜೆಪಿ ರಾಜ್ಯ...
23-02-25 06:38 pm
Telangana Model, Pramod Muthalik, CM Siddaram...
21-02-25 10:47 pm
Rohini Sindhuri, Roopa moudgil, latest news:...
21-02-25 10:12 pm
Santosh Lad, Modi, Nitin Gadkari: ಬಿಜೆಪಿ ಅಧಿಕ...
21-02-25 04:36 pm
24-02-25 10:14 pm
HK News Desk
India Pak Match 2025 Live: ಪಾಕ್ ತಂಡವನ್ನು ಚಾಂಪ...
23-02-25 11:22 pm
ಗಂಗಾ ನದಿಗಿದೆ ಸ್ವಯಂ ಶುದ್ಧೀಕರಣದ ಶಕ್ತಿ ; ಕೋಟ್ಯಂತ...
23-02-25 09:52 pm
ದುಬೈನಲ್ಲಿ ಕ್ರಿಮಿನಲ್ ಇನ್ವೆಸ್ಟಿಗೇಶನ್ ಅಧಿಕಾರಿಗಳ...
22-02-25 09:48 pm
ದುಬೈ ಉದ್ಯಮಿ ಬಿ.ಆರ್ ಶೆಟ್ಟಿಗೆ ದುಬೈ ಕೋರ್ಟಿನಿಂದ ಮ...
22-02-25 07:51 pm
25-02-25 02:34 pm
Mangalore Correspondent
Puttur doctor, C Section, Mangalore: ಸಿಸೇರಿಯನ...
25-02-25 12:24 pm
Puttur News, Dr Anil Baipadithaya, hospital:...
24-02-25 02:50 pm
Mangalore accident, Surathkal, Raichur: ಸುರತ್...
23-02-25 03:20 pm
Rani Abbakka, Mamata Ballal, Mangalore: ಐನೂರು...
23-02-25 01:12 pm
25-02-25 08:10 pm
Mangalore Correspondent
Mangalore, Kotekar bank robbery, Bhaskar Belc...
25-02-25 05:18 pm
Kerala Murder, Crime, Affan: ತಿರುವನಂತಪುರ ; ಒಂ...
25-02-25 01:37 pm
Delhi crime, Wife Murder: ತ್ರಿವೇಣಿ ಸಂಗಮದಲ್ಲಿ...
24-02-25 10:51 pm
Illegal drug supply, Mangalore: ಮಂಗಳೂರು ಜೈಲಿಗ...
24-02-25 09:43 pm