ಬ್ರೇಕಿಂಗ್ ನ್ಯೂಸ್
11-06-24 08:12 pm Bangalore Correspondent ಕರ್ನಾಟಕ
ಬೆಂಗಳೂರು, ಜೂ 12: ಚಿತ್ರದುರ್ಗ ಮೂಲದ ಅಭಿಮಾನಿ ರೇಣುಕಾಸ್ವಾಮಿ ಕೊಲೆ ಕೇಸ್‌ಗೆ ಸಂಬಂಧಿಸಿದಂತೆ ನಟ ದರ್ಶನ್‌ಗೆ 6 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಪೊಲೀಸ್ ವಶಕ್ಕೆ ನೀಡಲಾಗಿದೆ.
ನಟ ದರ್ಶನ್ ಆಪ್ತೆ ಪವಿತ್ರಾ ಗೌಡ ಅವರಿಗೆ ಮೊಬೈಲ್ ಸಂದೇಶ ಕಳುಹಿಸಿ ತೊಂದರೆ ಮಾಡಿದ ಎಂಬ ಕಾರಣಕ್ಕೆ ಅಭಿಮಾನಿ ರೇಣುಕಾಸ್ವಾಮಿ ಅವರನ್ನು ದರ್ಶನ್ ಹಾಗೂ ಸಹಚರರು ಕೊಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆ ಮಂಗಳವಾರ ಬೆಳಿಗ್ಗೆ ನಟ ಸೇರಿದಂತೆ 13 ಮಂದಿಯನ್ನು ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸರು ಬಂಧನ ಮಾಡಿದ್ದರು. ಸದ್ಯ ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದು, ನ್ಯಾಯಾಲಯವು 6 ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಿ ಆದೇಶ ಹೊರಡಿಸಿದೆ.
ನ್ಯಾಯಾಧೀಶರ ಮುಂದೆ ಹಾಜರುಪಡಿಸಿದಾಗ ಕಸ್ಟಡಿಗೆ ಕೇಳಲು ರಿಮ್ಯಾಂಡ್ ಅರ್ಜಿಯನ್ನು ಪೊಲೀಸರು ಸಲ್ಲಿಸಿದ್ದರು. ಪೊಲೀಸರ ಪರ ಸರ್ಕಾರಿ ಅಭಿಯೋಜಕ ವಾದ ಮಂಡಿಸಿ, ಸಾಕ್ಷ್ಯಗಳ ನಾಶ ಆಗಿರುವುದರಿಂದ ಎ2 ದರ್ಶನ್ ಅವರನ್ನು 14 ದಿನ ಕಸ್ಟಡಿಗೆ ನೀಡುವಂತೆ ಕೋರಿದರು. ಆದರೆ, ದರ್ಶನ್ ಪರ ವಕೀಲ 14 ದಿನ ಯಾಕೆ ಎಂದು ಪ್ರಶ್ನಿಸಿದರು. ಈಗಾಗಲೇ ದರ್ಶನ್ ಮೊಬೈಲ್ ಸೀಜ್ ಆಗಿದೆ, ದರ್ಶನ್ ಅವರ ತೇಜೋವಧೆ ಮಾಡಲು ಈ ರೀತಿ ಮಾಡಲಾಗುತ್ತಿದೆ ಹೇಳಿದರು.
ಆರೋಪಿಗಳನ್ನು ಕಸ್ಟಡಿಗೆ ನೀಡಲು ಸರ್ಕಾರಿ ಅಭಿಯೋಜಕ ಕೋರಿದರೆ, ದರ್ಶನ್ ಪರ ವಕೀಲ ಅವರಿಗೆ ಕಿರುಕುಳ ನೀಡಬಾರದು, ನ್ಯಾಯಾಂಗ ಬಂಧನಕ್ಕೆ ನೀಡಬೇಕು ಎಂದು ಮನವಿ ಮಾಡಿದರು. ವಾದ- ಪ್ರತಿವಾದ ಆಲಿಸಿದ ಬಳಿಕ ನ್ಯಾಯಾಧೀಶರು ಪೊಲೀಸ್ ಕಸ್ಟಡಿಗೆ ನೀಡಲು ಸೂಚಿಸಿದರು. ನ್ಯಾಯಾಧೀಶರು ಪೊಲೀಸ್ ಕಸ್ಟಡಿಗೆ ಎಂದು ಹೇಳಿದ ಕೂಡಲೇ ನಟ ದರ್ಶನ್ ಕಣ್ಣೀರಿಟ್ಟಿದ್ದು ಕಂಡುಬಂತು.
ಹೀಗಾಗಿ ದರ್ಶನ್ ಅವರನ್ನು ಕಸ್ಟಡಿಗೆ ನೀಡಲಾಗಿದೆ. ಇದಕ್ಕೂ ಮುನ್ನಾ ಆರೋಪಿಗಳಿಗೆ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲಾಯಿತು. ನಟ ದರ್ಶನ್, ಪವಿತ್ರಾ ಗೌಡ ಸೇರಿ ಇತರ ಆರೋಪಿಗಳ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಇಸಿಜಿ, ಬಿ.ಪಿ., ಶುಗರ್ ಇನ್ನಿತರ ಟೆಸ್ಟ್ ಮಾಡಲಾಗಿದ್ದು, ಯಾರಿಗೂ ಗಂಭೀರ ಆರೋಗ್ಯ ಸಮಸ್ಯೆ ಇಲ್ಲ. ಎಲ್ಲರೂ ಆರೋಗ್ಯವಾಗಿದ್ದಾರೆ ಎಂದು ಬೌರಿಂಗ್ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.
ಮತ್ತೊಂದೆಡೆ ರೇಣುಕಾಸ್ವಾಮಿ ಕೊಲೆ ನಡೆದ ಸ್ಥಳಕ್ಕೆ ಪೊಲೀಸರು, ಎಫ್ಎಸ್ಎಲ್ ತಂಡ ಭೇಟಿ ನೀಡಿ ಪರಿಶೀಲಿಸಿದೆ. ಈ ವೇಳೆ ಕೆಲ ವಸ್ತುಗಳನ್ನು ಎಫ್ಎಸ್ಎಲ್ ತಂಡ ಸಂಗ್ರಹಿಸಿದೆ. ವಸ್ತುಗಳನ್ನು ಸೀಜ್ ಮಾಡಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.
ಕೊಲೆ ಪ್ರಕರಣದಲ್ಲಿ ಬಂಧನವಾದ ಆರೋಪಿಗಳು ;
1.ನಟ ದರ್ಶನ್
2.ಪವಿತ್ರಾ ಗೌಡ
3.ಕೆ. ಪವನ್-ದರ್ಶನ್ ಮನೆಯಲ್ಲಿ ಇರುವ ದರ್ಶನ್ ಅಪ್ತ, ಕಿಡ್ನ್ಯಾಪ್ ಮಾಡಲು ಹೇಳಿದ್ದವನು, ಪವಿತ್ರಗೂ ಆಪ್ತ
4.ಪ್ರದೋಶ್- ಹೋಟೆಲ್ ಉದ್ಯಮಿ
5.ನಂದೀಶ್- ಹಲ್ಲೆ ಮಾಡಿದ ಮುಖ್ಯ ವ್ಯಕ್ತಿ, ಕಿಡ್ನ್ಯಾಪ್ ಮಾಡಿಕೊಂಡು ಕರೆತಂದವನು
6.ಕೇಶವಮೂರ್ತಿ, ಪ್ರದೂಶ್ ಗೆಳೆಯ ಹಾಗೂ ಉದ್ಯಮಿ
7.ರಾಘವೇಂದ್ರ- ದರ್ಶನ್ ಅಭಿಮಾನಿ ಸಂಘದ ಅಧ್ಯಕ್ಷ
8.ಎಂ.ಲಕ್ಷ್ಮಣ್
9. ದೀಪಕ್ ಕುಮಾರ್
10.ಕಾರ್ತಿಕ್
11.ಆರ್.ನಾಗರಾಜ್, ದರ್ಶನ್ ಆಪ್ತ
12.ವಿ.ವಿನಯ್
13. ನಿಖಿಲ್ ನಾಯಕ್
ವಿಕ್ಟೋರಿಯಾ ಆಸ್ಪತ್ರೆಯಲ್ಲಿ ರೇಣುಕಾಸ್ವಾಮಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಕುಟುಂಬಸ್ಥರಿಗೆ ಮೃತದೇಹ ಹಸ್ತಾಂತರ ಮಾಡಲಾಗಿದೆ. ಚಿತ್ರದುರ್ಗದಲ್ಲಿ ಅಂತ್ಯಕ್ರಿಯೆ ಮಾಡಲು ಕುಟುಂಬಸ್ಥರು ನಿರ್ಧಾರ ಮಾಡಿದ್ದಾರೆ.
Murder case, Kannada actor Darshan Arrest, 14 days judicial custody ordered by court. Leading Kannada film actor Darshan Thoogudeepa and his close friend and actress Pavithra Gowda were arrested on Tuesday in connection with the murder of a man who allegedly made "derogatory" comments against her, police sources said.
28-07-25 11:07 am
HK News Desk
Raichur Building Fall: ರಾಯಚೂರಿನಲ್ಲಿ ಚರಂಡಿ ಬ್ಲ...
27-07-25 01:09 pm
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
28-07-25 11:07 pm
HK News Desk
ಮತಾಂತರ ಇಲ್ಲದೆ ಅಂತರ್ ಧರ್ಮೀಯ ವಿವಾಹ ಕಾನೂನು ಬಾಹಿರ...
28-07-25 12:28 pm
Israel, Arabic Language: ಇಸ್ರೇಲ್ ಸೈನಿಕರಿಗೆ ಇಸ...
26-07-25 03:31 pm
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
28-07-25 10:41 pm
Mangalore Correspondent
Mangalore Remona Pereira, Golden Book of Wor...
28-07-25 09:40 pm
ಪಡ್ರೆ ಧೂಮಾವತಿ ಕ್ಷೇತ್ರಕ್ಕೆ ಅಪಪ್ರಚಾರ ಮಾಡುತ್ತಿರು...
28-07-25 05:39 pm
Dharmasthala Case, SIT Witness at Netravati R...
28-07-25 03:53 pm
ಕಾಸಿಲ್ಲದೇ ಕನ್ಯಾಕುಮಾರಿ ಯಾತ್ರೆ ; ಜನಮನ ಸೆಳೆದ ಮಂಗ...
28-07-25 01:14 pm
28-07-25 11:20 pm
Mangalore Correspondent
Mangalore Roshan Saldanha; Fraud Case, High c...
27-07-25 08:39 pm
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm