ಬ್ರೇಕಿಂಗ್ ನ್ಯೂಸ್
12-06-24 01:48 pm Bangalore Correspondent ಕರ್ನಾಟಕ
ಬೆಂಗಳೂರು, ಜೂ 12: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಬಂಧನ ವಿಚಾರ ಮಾಧ್ಯಮದವರಿಗೆ ಏನ್ ಮಾಹಿತಿ ಇದೆಯೋ ನನಗೂ ಅದೇ ಮಾಹಿತಿಯಿದೆ. ಕೊಲೆಯಲ್ಲಿ ಭಾಗಿಯಾಗಿದ್ದಾರೆಂದು ದರ್ಶನ್ ನನ್ನ ಬಂಧಿಸಿ ಪೊಲೀಸರು ತನಿಖೆ ಮಾಡುತ್ತಿದ್ದಾರೆ. ತನಿಖೆಯಲ್ಲಿ ಏನು ವಿಚಾರಗಳು ಹೊರ ಬರುತ್ತದೆಯೊ ಅದರ ಮೇಲೆ ಕ್ರಮ ತೆಗೆದುಕೊಳ್ಳುತ್ತೀವಿ ಎಂದು ಗೃಹ ಸಚಿವ ಪರಮೇಶ್ವರ ಹೇಳಿದರು.
ಸುದ್ದಿಗಾರರ ಜೊತೆ ಬುಧವಾರ ಮಾತನಾಡಿದ ಅವರು, 'ಕಾನೂನು ಎಲ್ಲರಿಗೂ ಒಂದೇ. ದರ್ಶನ್ ಗೂ ಕಾನೂನು ಒಂದೇ. ಪರಮೇಶ್ವರವರಿಗೂ ಕಾನೂನು ಒಂದೇ. ಕಾನೂನನ್ನು ಯಾರೂ ಕೈಗೆತ್ತಿಕೊಳ್ಳಬಾರದು ಎಂದರು.
ರೇಣುಕಾಸ್ವಾಮಿ ತಪ್ಪು ಮಾಡಿದ್ದರೆ ಅವರ ಮೇಲೆ ಪೊಲೀಸರಿಗೆ ದೂರು ನೀಡಬಹುದಿತ್ತು. ಪೊಲೀಸರು ತನಿಖೆ ಮಾಡುತ್ತಿದ್ದರು.
ಪ್ರಕರಣದಿಂದ ಬಚಾವಾಗಲು ದರ್ಶನ್ ಪ್ರಭಾವಿ ರಾಜಕಾರಣಿಗಳಿಗೆ ಕರೆ ಮಾಡಿದ್ದರೆಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಪರಮೇಶ್ವರ, ನನಗೆ ಗೊತ್ತಿದ್ದಂತೆ ಯಾರೂ ಪ್ರಯತ್ನ ಮಾಡಿಲ್ಲ. ನನ್ನ ಹತ್ತಿರ ಅಂತೂ ಯಾರು ಪ್ರಯತ್ನ ಮಾಡಿಲ್ಲ. ಸರ್ಕಾರದಿಂದ ನಾವ್ಯಾರು ಮಧ್ಯಪ್ರವೇಶ ಮಾಡಲ್ಲ ಎಂದರು
ರೇಣುಕಾಸ್ವಾಮಿ ಕುಟುಂಬದ ಪರವಾಗಿ ಸರ್ಕಾರ ಏನು ಮಾಡಬಹುದು ಎಂದು ಮುಖ್ಯಮಂತ್ರಿ ಜೊತೆ ಚರ್ಚಿಸಿ ತೀರ್ಮಾನ ಮಾಡುತ್ತೇವೆ ಅಂದ್ರು.
ಉನ್ನತಮಟ್ಟದ ತನಿಖೆಗೆ ಒತ್ತಾಯ ಕೇಳಿಬಂದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಎಲ್ಲವನ್ನೂ ಸಿಬಿಐಗೆ ಕೊಡುವ ಅಗತ್ಯವಿಲ್ಲ. ಈಗ 13 ಮಂದಿಯನ್ನು ಬಂಧಿಸಿದ್ದೇವೆ. ಯಾರು ಮಾಡಿದ್ದಾರೆ, ಯಾಕೆ ಮಾಡಿದ್ದಾರೆ ಹೆಚ್ಚು ಕಡಿಮೆ ಎಲ್ಲ ವಿಚಾರಗಳು ಗೊತ್ತಾಗಿದೆ. ಬೇರೆ ತನಿಖಾ ಏಜೆನ್ಸಿಗಳಿಗೆ ಕೊಡುವ ಅಗತ್ಯ ಇಲ್ಲ. ಪ್ರಕರಣದ ಸಮಗ್ರ ವಿವರ ತನಿಖೆ ಸಂಪೂರ್ಣ ಆದ ಮೇಲೆ ಗೊತ್ತಾಗುತ್ತದೆ. ಅದಕ್ಕೂ ಮೊದಲು ನಾನು ಕೇಳೋದಿಲ್ಲ.
ದರ್ಶನ್ ಮೇಲೆ ರೌಡಿ ಶೀಟ್ ತೆರೆಯುವ ಬಗ್ಗೆ ಕೇಳಿದ ಪ್ರಶ್ನೆಗೆ, 'ಹಲವು ಪ್ರಕರಣಗಳಲ್ಲಿ ದರ್ಶನ್ ಭಾಗಿಯಾಗಿದ್ದಾರೆಂದು, ಮಾಧ್ಯಮಗಳಲ್ಲಿ ಸಾಕಷ್ಟು ಕೇಸ್ ಬಗ್ಗೆ ನಾನು ನೋಡಿದ್ದೇನೆ. ಇದನ್ನು ಪೊಲೀಸರು ತನಿಖೆ ಮಾಡುತ್ತಾರೆ. ನಮ್ಮನ್ನು ಕೇಳಿ ಸೆಕ್ಷನ್ ಹಾಕುವುದಿಲ್ಲ. ತನಿಖೆಯಾದಮೇಲೆ ಏನು ಶಿಫಾರಸು ಮಾಡ್ತಾರೆಂದು ನೋಡೋಣ ಎಂದರು.
ಕೊಲೆ ಆರೋಪಿಗಳಿಗೆ ಬಿರಿಯಾನಿ ತರಿಸಿ ಕೊಟ್ಟ ವಿಚಾರವೂ ನನಗೆ ಗೊತ್ತಿಲ್ಲ. ಹಾಗೆಂದು, ಊಟ ಇಲ್ಲದೆ ಸಾಯಿಸುವುದಕ್ಕೆ ಆಗಲ್ವಲ್ಲ. ಊಟ ತರಿಸಿ ಕೊಡುತ್ತಾರೆ. ಅದರಲ್ಲಿ ಬಿರಿಯಾನಿ ತರಿಸಿಕೊಟ್ರಾ ಅಂತ ಗೊತ್ತಿಲ್ಲ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಗೃಹ ಸಚಿವ ಜಿ. ಪರಮೇಶ್ವರ ಚರ್ಚೆ ನಡೆಸಿದರು. ರಾಜ್ಯ ಪೋಲಿಸ್ ಮಹಾನಿರ್ದೇಶಕ ಅಲೋಕ್‌ಮೋಹನ್, ಗುಪ್ತಚರ ಇಲಾಖಾ ಮುಖ್ಯಸ್ಥ ಶರತ್ ಚಂದ್ರ, ಬೆಂಗಳೂರು ನಗರ ಪೋಲಿಸ್ ಆಯುಕ್ತ ದಯಾನಂದ್ ಕೂಡ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿದರು
Murder case, Plan to open a rowdy sheet case against Darshan, says Home Minister Parameshwar. We have given free hands to the police department to work on this case. It is left to them to open the Rowdy Shett case or not, as he has been involved in many other crimes, he added.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm