ಬ್ರೇಕಿಂಗ್ ನ್ಯೂಸ್
14-06-24 12:12 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 13: “ಎತ್ತಿನಹೊಳೆ ಕಾಮಗಾರಿಗೆ ಅಡಚಣೆ ಉಂಟು ಮಾಡಿರುವ 500 ಎಕರೆ ಜಾಗವನ್ನು ಹಸ್ತಾಂತರಿಸಲು ಅರಣ್ಯ ಇಲಾಖೆ ಒಪ್ಪಿಗೆ ನೀಡಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ನೀರಾವರಿ ಸಚಿವರೂ ಆಗಿರುವ ಶಿವಕುಮಾರ್ ಯೋಜನೆ ಸಂಬಂಧಿಸಿ ವಿಕಾಸಸೌಧದಲ್ಲಿ ಗುರುವಾರ ಕಂದಾಯ ಸಚಿವ ಕೃಷ್ಣ ಭೈರೇಗೌಡ, ಅರಣ್ಯ ಸಚಿವ ಈಶ್ವರ ಖಂಡ್ರೆ, ದೆಹಲಿಯಲ್ಲಿ ಕರ್ನಾಟಕ ಸರಕಾರದ ವಿಶೇಷ ಪ್ರತಿನಿಧಿ ಟಿ.ಬಿ ಜಯಚಂದ್ರ ಹಾಗೂ ಸಂಬಂಧಪಟ್ಟ ಇಲಾಖೆಗಳ ಪ್ರಮುಖ ಅಧಿಕಾರಿಗಳ ಜತೆ ಸಭೆ ನಡೆಸಿದರು. ಸಭೆ ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಿದರು.
ಎತ್ತಿನಹೊಳೆ ಯೋಜನೆ ಹಾಗೂ ಭದ್ರಾ ಮೇಲ್ದಂಡೆ ಯೋಜನೆಗೆ ಸಂಬಂಧಿಸಿದ ಕೆಲಸ ತ್ವರಿತ ಗತಿಯಲ್ಲಿ ನಡೆಸಲು ಚರ್ಚೆ ಮಾಡಿದ್ದೇವೆ. ಯೋಜನೆಗೆ ಅಗತ್ಯವಿರುವ ಜಾಗವನ್ನು ಅರಣ್ಯ ಇಲಾಖೆ ನೀಡುತ್ತಿದ್ದು, ಇದಕ್ಕೆ ಪ್ರತಿಯಾಗಿ ಕಂದಾಯ ಇಲಾಖೆಯಿಂದ ಅರಣ್ಯ ಇಲಾಖೆಗೆ 500 ಎಕರೆ ಜಾಗ ನೀಡಲಿದೆ. ಈ ಪ್ರಕ್ರಿಯೆಯನ್ನು ಕಾನೂನು ಚೌಕಟ್ಟಿನಲ್ಲಿ ಪೂರ್ಣಗೊಳಿಸುತ್ತೇವೆ. ಕಾಮಗಾರಿಗೆ ಎದುರಾಗಿರುವ ಸಮಸ್ಯೆಗಳನ್ನು ಗುರುತಿಸಿದ್ದು, ಅವುಗಳಿಗೆ ಪರಿಹಾರ ಹುಡುಕಲು ಸಭೆಯಲ್ಲಿ ಚರ್ಚಿಸಿದ್ದೇವೆ.
260 ಕಿ.ಮೀ ಉದ್ದದ 20 ಸ್ಥಳಗಳಲ್ಲಿ ಅರಣ್ಯ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳು ಇವೆ. ಈ ಯೋಜನೆಗೆ ಅರಣ್ಯ ಇಲಾಖೆ ಅನುಮತಿ ಅಗತ್ಯವಿದ್ದ ಕಾರಣ ನಮ್ಮ ಅರಣ್ಯ ಸಚಿವರು ಹಾಗೂ ಇಲಾಖೆ ಸಚಿವರ ಜತೆ ಚರ್ಚೆ ಮಾಡಿದ್ದೇವೆ. ಕಂದಾಯ, ನೀರಾವರಿ ಹಾಗೂ ಅರಣ್ಯ ಇಲಾಖೆ ಸೇರಿ ಒಟ್ಟಾಗಿ ಜಂಟಿ ಸರ್ವೇ ಮಾಡುತ್ತಿದ್ದೇವೆ. ಅರಣ್ಯ ಇಲಾಖೆಗೆ ಬದಲಿ ಜಮೀನು ನೀಡಲು ಕಂದಾಯ ಇಲಾಖೆ ಒಪ್ಪಿದೆ. ಕೂಡಲೇ ಈ ಕಾಮಗಾರಿ ನಡೆಸಲು ಮನವಿ ಮಾಡಿದ್ದೇವೆ ಎಂದರು.
ಈ ಮಧ್ಯೆ ಕೆಲವು ಜಾಗದಲ್ಲಿ ರೈತರಿಗೆ 51 ಕೋಟಿ ಪರಿಹಾರ ನೀಡಬೇಕಾಗಿದೆ. ಈ ಪೈಕಿ 10 ಕೋಟಿ ಹಣ ನೀಡಲಾಗಿದ್ದು, 41 ಕೋಟಿ ಬಾಕಿ ಇದೆ. ಈ ಜಾಗದ ವಿಚಾರವಾಗಿ ಅರಣ್ಯ ಇಲಾಖೆ ಹಾಗೂ ಕಂದಾಯ ಇಲಾಖೆ ನಡುವೆ ಗೊಂದಲವಿದೆ. ಹೀಗಾಗಿ ಈ ವಿಚಾರವನ್ನು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗುವುದು. ದೊಡ್ಡಬಳ್ಳಾಪುರದ ಲಕ್ಕೇನಹಳ್ಳಿಯಲ್ಲಿ ಸಮತೋಲಿತ ಜಲಾನಯನ ಯೋಜನೆ ಬಾಕಿ ಇದ್ದು ಇದರ ಕಾಮಗಾರಿ ಆರಂಭಿಸಲು ತಯಾರಿ ಮಾಡಲಾಗಿದೆ. ಮುಂದಿನ ತಿಂಗಳ ಒಳಗಾಗಿ ನೀರನ್ನು ಹೊರತರಲು ನಿರ್ದೇಶನ ನೀಡಲಾಗಿದೆ. ಮೊದಲ ಹಂತದಲ್ಲಿ 48 ಕಿ.ಮೀ ನೀರು ಹರಿಸುವಂತೆ ಸೂಚನೆ ನೀಡಲಾಗಿದೆ. ಯೋಜನೆಯಿಂದ ಮತ್ತಷ್ಟು ಪ್ರಯೋಜನ ಪಡೆಯುವ ಉದ್ದೇಶದೊಂದಿಗೆ ಸಮುದ್ರಕ್ಕೆ ಸೇರುತ್ತಿರುವ ನೀರನ್ನು ಹೇಗೆ ಎಲ್ಲೆಲ್ಲಿ ನಾವು ಹಿಡಿದಿಟ್ಟು ಬಳಸಿಕೊಳ್ಳಬಹುದು ಎಂಬುದರ ಬಗ್ಗೆ ಅಧ್ಯಯನ ನಡೆಸಲು ಉನ್ನತ ಮಟ್ಟದ ತಾಂತ್ರಿಕ ಸಮಿತಿ ರಚಿಸಲಿದ್ದೇವೆ ಎಂದರು. ಎತ್ತಿನಹೊಳೆ ಯೋಜನೆಯಲ್ಲಿ ನೀರು ಸಿಗಲ್ಲ ಎಂದಿದ್ದರೂ, ರಾಜ್ಯ ಸರ್ಕಾರ ಮಾತ್ರ ಬೇಕಾಬಿಟ್ಟಿ ದುಡ್ಡು ಸುರಿದು ಅರಣ್ಯ ಜಾಗವನ್ನೂ ಕಬಳಿಸಿ ಕಾಮಗಾರಿ ನಡೆಸುತ್ತಿರುವುದಕ್ಕೆ ಭಾರೀ ಟೀಕೆ ವ್ಯಕ್ತವಾಗಿದೆ.
"The forest department has agreed to hand over 500 acres of land which has hampered the yettinahole work," said Deputy CM DK Shivakumar. Shivakumar said. Shivakumar, who is also the irrigation minister, held a meeting with Revenue Minister Krishna Byre Gowda, Forest Minister Eshwar Khandre, Karnataka government's special representative T B Jayachandra and other officials of the concerned departments at Vikasa Soudha on Thursday. He informed the media after the meeting.
25-12-25 08:00 pm
Bangalore Correspondent
Chitradurga Seabird Bus accident: ಚಿತ್ರದುರ್ಗ...
25-12-25 06:26 pm
SeaBird Bus Fire Accident, Chitradurga: ಕಂಟೈನ...
25-12-25 12:12 pm
ತಡರಾತ್ರಿ ವರೆಗೂ ವಹಿವಾಟು ; ಹೊಟೇಲ್ ವ್ಯವಸ್ಥಾಪಕರಿಂ...
24-12-25 11:20 pm
ಶಿವಮೊಗ್ಗ ; ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ...
24-12-25 10:26 pm
24-12-25 11:13 pm
HK News Desk
ಅಯೋಧ್ಯೆ ಮಂದಿರಕ್ಕೆ ಚಿನ್ನ, ವಜ್ರ, ಪಚ್ಚೆ ಕಲ್ಲುಗಳಿ...
24-12-25 07:38 pm
ಹಿಂಸೆಗೆ ನಲುಗಿದ ಬಾಂಗ್ಲಾ ; ಹಿಂದುಗಳನ್ನು ಗುರಿಯಾಗಿ...
23-12-25 03:28 pm
ಭಾರತ ಹಿಂದೂ ರಾಷ್ಟ್ರ ಎನ್ನಲು ಸಾಂವಿಧಾನಿಕ ಅನುಮೋದನೆ...
22-12-25 06:32 pm
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
25-12-25 10:54 pm
Mangalore Correspondent
ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ ; ನವ ವರ್ಷ- ನ...
24-12-25 10:30 pm
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
ವಿದ್ಯಾರ್ಥಿಗಳ ಕುಸಿತ, ಅಸ್ತಿತ್ವ ಕಳಕೊಂಡ ಸಣ್ಣ ಕಾಲೇ...
24-12-25 12:23 pm
ಬಜಪೆ ಪಟ್ಟಣ ಪಂಚಾಯತ್ ಚುನಾವಣೆ ; ಬಿಜೆಪಿಗೆ ಸ್ಪಷ್ಟ...
24-12-25 12:02 pm
23-12-25 01:41 pm
Mangalore Correspondent
ನೀವು 24 ಸಾವಿರ ಕಟ್ಟಿದರೆ ತಿಂಗಳಿಗೆ 20 ಲಕ್ಷ, ಕೇಂದ...
22-12-25 04:00 pm
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm