ಬ್ರೇಕಿಂಗ್ ನ್ಯೂಸ್
14-06-24 09:03 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 14: ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರನ್ನು ಬಂಧಿಸುವುದು ಬೇಡ, ವಿಚಾರಣೆಗೆ ಹಾಜರಾಗಲು ಅವಕಾಶ ಕೊಡಿ ಎಂದು ಹೈಕೋರ್ಟ್ ಆದೇಶ ಹೊರಡಿಸಿದೆ. ಈ ಮೂಲಕ ಬಂಧನ ಭೀತಿಯಲ್ಲಿದ್ದ ಮಾಜಿ ಮುಖ್ಯಮಂತ್ರಿಗೆ ರಿಲೀಫ್ ಸಿಕ್ಕಿದೆ.
ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬಿಎಸ್ ಯಡಿಯೂರಪ್ಪ ವಿರುದ್ಧ ಬೆಂಗಳೂರಿನ ಸ್ಥಳೀಯ ಕೋರ್ಟ್ ಬಂಧನ ವಾರೆಂಟ್ ಹೊರಡಿಸಿತ್ತು. ವಿಚಾರಣೆಗೆ ಬರಲು ಹಲವು ನೋಟಿಸ್ ನೀಡಿದರೂ ಆರೋಪಿ ಹಾಜರಾಗುತ್ತಿಲ್ಲವೆಂದು ಸಿಐಡಿ ಕೋರ್ಟ್ ಮೊರೆ ಹೋಗಿತ್ತು. ಇದೇ ವೇಳೆ ಹೈಕೋರ್ಟ್‌ನಲ್ಲಿ ಬಂಧನ ಮಾಡದಂತೆ ಬಿಎಸ್ ಯಡಿಯೂರಪ್ಪ ಪರ ವಕೀಲರು ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್, ತುರ್ತಾಗಿ ಬಂಧಿಸುವ ಅಗತ್ಯವಿಲ್ಲ. ವಯಸ್ಸಿನ ಕಾರಣದಿಂದ ಅವರನ್ನು ವಿಚಾರಣೆಗೆ ಬರಲು ಅವಕಾಶ ಕೊಡಿ ಎಂದು ಹೇಳಿದ್ದಲ್ಲದೆ, ಜೂನ್ 17ಕ್ಕೆ ತಪ್ಪದೆ ತನಿಖೆಗೆ ಹಾಜರು ಪಡಿಸುವಂತೆ ವಕೀಲರಿಗೆ ಸೂಚನೆ ನೀಡಿದೆ.
ಯಡಿಯೂರಪ್ಪ ಅವರಿಗೆ ವಯಸ್ಸಾಗಿದ್ದು ಆರೋಗ್ಯ ಸಮಸ್ಯೆಗಳಿರುತ್ತವೆ. ಹೀಗಾಗಿ ಸದ್ಯಕ್ಕೆ ಬಂಧಿಸಿ ತನಿಖೆಗೊಳಪಡಿಸುವ ಅಗತ್ಯವಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯ ಪಟ್ಟಿದೆ. ಮಹಿಳೆ ನೀಡಿರುವ ದೂರಿನ ಬಗ್ಗೆ ಆಕ್ಷೇಪ ಎತ್ತಿದ ವಕೀಲರು, ಆಕೆಯ ದೂರನ್ನು ಗಂಭೀರವಾಗಿ ಪರಿಗಣಿಸಬೇಕಿಲ್ಲ ಎಂದು ಗೃಹ ಸಚಿವರೇ ಹೇಳಿದ್ದರು. 50ಕ್ಕೂ ಹೆಚ್ಚು ಮಂದಿ ವಿರುದ್ಧ ದೂರು ನೀಡಿದ್ದರು. ಮಾಜಿ ಮುಖ್ಯಮಂತ್ರಿ ಮೇಲೆ ಅಂಥದ್ದೇ ಆರೋಪ ಮಾಡಿದ್ದಾರೆ. ಪುರಾವೆ ಇಲ್ಲದೆ ದೂರು ಕೊಟ್ಟ ಮಾತ್ರಕ್ಕೆ ಬಂಧಿಸುವ ಅಗತ್ಯ ಇಲ್ಲ ಎಂದು ವಾದ ಮಂಡಿಸಿದ್ದರು.
Former Karnataka chief minister and senior BJP leader B.S. Yediyurappa, who is facing arrest in connection with a Pocso case, got temporary relief on Friday as the High Court directed the police not to initiate arrest procedures against him. The bench, headed by Justice Krishna S. Dixit, also directed Yediyurappa to appear before the court on Monday (June 17) without fail, as he had mentioned in his reply to the police.
24-02-25 01:36 pm
HK News Desk
Kumar Bangarappa, BJP President: ಬಿಜೆಪಿ ರಾಜ್ಯ...
23-02-25 06:38 pm
Telangana Model, Pramod Muthalik, CM Siddaram...
21-02-25 10:47 pm
Rohini Sindhuri, Roopa moudgil, latest news:...
21-02-25 10:12 pm
Santosh Lad, Modi, Nitin Gadkari: ಬಿಜೆಪಿ ಅಧಿಕ...
21-02-25 04:36 pm
24-02-25 10:14 pm
HK News Desk
India Pak Match 2025 Live: ಪಾಕ್ ತಂಡವನ್ನು ಚಾಂಪ...
23-02-25 11:22 pm
ಗಂಗಾ ನದಿಗಿದೆ ಸ್ವಯಂ ಶುದ್ಧೀಕರಣದ ಶಕ್ತಿ ; ಕೋಟ್ಯಂತ...
23-02-25 09:52 pm
ದುಬೈನಲ್ಲಿ ಕ್ರಿಮಿನಲ್ ಇನ್ವೆಸ್ಟಿಗೇಶನ್ ಅಧಿಕಾರಿಗಳ...
22-02-25 09:48 pm
ದುಬೈ ಉದ್ಯಮಿ ಬಿ.ಆರ್ ಶೆಟ್ಟಿಗೆ ದುಬೈ ಕೋರ್ಟಿನಿಂದ ಮ...
22-02-25 07:51 pm
25-02-25 02:34 pm
Mangalore Correspondent
Puttur doctor, C Section, Mangalore: ಸಿಸೇರಿಯನ...
25-02-25 12:24 pm
Puttur News, Dr Anil Baipadithaya, hospital:...
24-02-25 02:50 pm
Mangalore accident, Surathkal, Raichur: ಸುರತ್...
23-02-25 03:20 pm
Rani Abbakka, Mamata Ballal, Mangalore: ಐನೂರು...
23-02-25 01:12 pm
25-02-25 05:18 pm
Mangalore Correspondent
Kerala Murder, Crime, Affan: ತಿರುವನಂತಪುರ ; ಒಂ...
25-02-25 01:37 pm
Delhi crime, Wife Murder: ತ್ರಿವೇಣಿ ಸಂಗಮದಲ್ಲಿ...
24-02-25 10:51 pm
Illegal drug supply, Mangalore: ಮಂಗಳೂರು ಜೈಲಿಗ...
24-02-25 09:43 pm
Bangalore crime, Police constable, Rape, Bomm...
24-02-25 07:08 pm