ಬ್ರೇಕಿಂಗ್ ನ್ಯೂಸ್
15-06-24 06:35 pm Bangalore Correspondent ಕರ್ನಾಟಕ
ಬೆಂಗಳೂರು, ಜೂ 15: ಚಿತ್ರದುರ್ಗದ ನಿವಾಸಿ 33 ವರ್ಷದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಮತ್ತು ಇತರ ಆರೋಪಿಗಳನ್ನು ಮ್ಯಾಜಿಸ್ಟ್ರೇಟ್ ಕೋರ್ಟ್ ಹೆಚ್ಚಿನ ವಿಚಾರಣೆಗಾಗಿ ಮತ್ತೆ ಐದು ದಿನ ಪೊಲೀಸರ ವಶಕ್ಕೆ ನೀಡಿ ಆದೇಶಿಸಿದೆ.
ದರ್ಶನ್ ಹಾಗೂ ಇತರೆ ಆರೋಪಿಗಳ ಆರು ದಿನಗಳ ಪೊಲೀಸ್ ಕಸ್ಟಡಿ ಅವಧಿ ಭಾನುವಾರಕ್ಕೆ ಕೊನೆಗೊಳ್ಳಲಿದೆ. ಆದರೆ ನಾಳೆ ಭಾನುವಾರವಾಗಿರುವುದರಿಂದ ನ್ಯಾಯಾಲಯಕ್ಕೆ ರಜೆ ಇರುತ್ತದೆ. ಹೀಗಾಗಿ, ಕೊಲೆ ಪ್ರಕರಣದ ಎಲ್ಲ ಆರೋಪಿಗಳನ್ನು ಪೊಲೀಸರು ಇಂದೇ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ಹಾಜರುಪಡಿಸಿ, ಹೆಚ್ಚಿನ ವಿಚಾರಣೆಗಾಗಿ ಮತ್ತೆ 9 ದಿನ ತಮ್ಮ ವಶಕ್ಕೆ ನೀಡುವಂತೆ ಪೊಲೀಸರು ಮನವಿ ಮಾಡಿದರು.
ಆರೋಪಿಗಳ ವಿಚಾರಣೆ ನಡೆಸಿದ ಕೋರ್ಟ್, ಪೊಲೀಸ್ ಕಸ್ಟಡಿಯ ಅವಧಿಯನ್ನು ಐದು ದಿನಗಳ ಕಾಲ ವಿಸ್ತರಿಸಿ ಆದೇಶಿಸಿದೆ.
ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ತೂಗುದೀಪ, ನಟಿ ಪವಿತ್ರಾ ಗೌಡ ಸೇರಿದಂತೆ 11 ಆರೋಪಿಗಳನ್ನು ಮಂಗಳವಾರ ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದರು. ಪ್ರಕರಣದಲ್ಲಿ ಒಟ್ಟು 19 ಆರೋಪಿಗಳಿದ್ದು, ಇತರೆ ಕೆಲವು ಆರೋಪಿಗಳನ್ನು ನಂತರದ ದಿನಗಳಲ್ಲಿ ಬಂಧಿಸಲಾಗಿದ್ದು, ಕೆಲವು ಆರೋಪಿಗಳು ತಾವೇ ಪೊಲೀಸರ ಮುಂದೆ ಶರಣಾಗಿದ್ದರು.
ಬಂಧಿತ ಪವಿತ್ರಾ ಗೌಡ ಅವರಿಗೆ ಸಾಮಾಜಿಕ ಮಾಧ್ಯಮದಲ್ಲಿ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದರಿಂದ ಮತ್ತು ಆಕ್ಷೇಪಾರ್ಹ ಕಾಮೆಂಟ್‌ಗಳನ್ನು ಪೋಸ್ಟ್ ಮಾಡಿದ್ದರಿಂದಲೇ ಕೊಲೆ ನಡೆದಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
Another five days police custody issued to actor Darshan and gang in murder. The special court has ordered for another five days police custody. SPP had asked for nine days custody in which court has ordered for five days.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm