ಬ್ರೇಕಿಂಗ್ ನ್ಯೂಸ್
17-06-24 09:52 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್.17: ಲಿಂಗಾಯತರಿಗೆ ಪ್ರತ್ಯೇಕ ಧರ್ಮ ಸ್ಥಾನಮಾನ ನೀಡಬೇಕೆಂದು ಈ ಹಿಂದೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮಾಡಿದ್ದ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದ ಸುಮಾರು ಆರು ವರ್ಷಗಳ ಬಳಿಕ ಮತ್ತೆ ಜಾಗತಿಕ ಲಿಂಗಾಯತ ಮಹಾಸಭಾವು ಪ್ರತ್ಯೇಕ ಧರ್ಮ ಸ್ಥಾನಮಾನಕ್ಕಾಗಿ ಒತ್ತಾಯಿಸಲು ನಿರ್ಧರಿಸಿದೆ ಎಂದು ಮಹಾಸಭಾದ ಪ್ರಧಾನ ಕಾರ್ಯದರ್ಶಿ ಎಸ್.ಎಂ ಜಾಮದಾರ್ ಹೇಳಿದ್ದಾರೆ.
ಕೊಪ್ಪಳದಲ್ಲಿ ನಡೆಯುತ್ತಿರುವ ಲಿಂಗಾಯತ ಮಹಾಸಭಾದ ಕಾರ್ಯಕಾರಿ ಸಮಿತಿ ಸಭೆಯ ನೇಪಥ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಾಮದಾರ್, ಲಿಂಗಾಯತರಿಗೆ ಪ್ರತ್ಯೇಕ ಧರ್ಮದ ಸ್ಥಾನಮಾನ ಅಗತ್ಯದ ಕುರಿತು ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಲು ಮಹಾಸಭಾ ಸರ್ವ ಪ್ರಯತ್ನ ನಡೆಸಲಿದೆ. ಈ ಬಗ್ಗೆ ಒಂದು ತಿಂಗಳಲ್ಲಿ ಜ್ಞಾಪಕ ಪತ್ರ ಸಲ್ಲಿಸಲಾಗುವುದು ಎಂದಿದ್ದಾರೆ.
ದಲಿತರು ಮತ್ತು ಬುಡಕಟ್ಟುಗಳ ಒಂದು ವಿಭಾಗವು ಲಿಂಗಾಯತ ಸಮುದಾಯದ ಅಡಿಯಲ್ಲಿ ಬರುತ್ತದೆ. ಲಿಂಗಾಯತರಿಗೆ ಪ್ರತ್ಯೇಕ ಧರ್ಮದ ಸ್ಥಾನಮಾನ ನೀಡಿದರೆ, ಎಸ್‌ಸಿ/ಎಸ್‌ಟಿಗಳಿಗೆ ನೀಡಲಾಗುವ ಪ್ರಯೋಜನಗಳನ್ನು ಅವರು ಕಳೆದುಕೊಳ್ಳುತ್ತಾರೆ ಎಂದು ರಾಜ್ಯ ಸರ್ಕಾರದ ಪ್ರಸ್ತಾವನೆಯನ್ನು ಕೇಂದ್ರವು ತಿರಸ್ಕರಿಸಿತ್ತು. ಈಗ ಅನೇಕ ದಲಿತರು ಬೌದ್ಧ ಧರ್ಮಕ್ಕೆ ಸೇರಿದ್ದಾರೆ. ಆದರೆ, ಅವರಿನ್ನೂ ಎಸ್‌ಸಿ/ಎಸ್‌ಟಿಗಳಿಗೆ ನೀಡಲಾಗುವ ಪ್ರಯೋಜನಗಳನ್ನು ಅನುಭವಿಸುತ್ತಿದ್ದಾರೆ. ಹಾಗಾಗಿ ರಾಜ್ಯದ ಪ್ರಸ್ತಾವನೆಯನ್ನು ತಿರಸ್ಕರಿಸಿದ್ದಕ್ಕೆ ಕೇಂದ್ರ ನೀಡಿರುವ ಕಾರಣ ತಪ್ಪು ಎಂದು ನಿವೃತ್ತ ಐಎಎಸ್ ಅಧಿಕಾರಿ ಜಾಮದಾರ್ ಅಭಿಪ್ರಾಯಪಟ್ಟಿದ್ದಾರೆ.
ಎಲ್ಲ ವೀರಶೈವರು ಲಿಂಗಾಯತರು. ಆದರೆ, ಎಲ್ಲ ಲಿಂಗಾಯತರು ವೀರಶೈವರಲ್ಲ. ಜಾಗತಿಕ ಲಿಂಗಾಯತ ಮಹಾಸಭಾ ಅಸ್ತಿತ್ವಕ್ಕೆ ಬಂದಿದ್ದು ಸುಮಾರು ಐದಾರು ವರ್ಷಗಳ ಹಿಂದೆ. ಲಿಂಗಾಯತರಿಗೆ ಪ್ರತ್ಯೇಕ ಧರ್ಮ ಸ್ಥಾನಮಾನಕ್ಕಾಗಿ ನಮ್ಮ ಹೋರಾಟವು ಈ ಸಮಸ್ಯೆಗೆ ತಾರ್ಕಿಕ ತೀರ್ಮಾನ ಸಿಗುವವರೆಗೂ ಮುಂದುವರಿಯುತ್ತದೆ. ಜಿಲ್ಲಾ ಘಟಕಗಳಿಗೆ ಚುನಾವಣೆ ನಡೆಸುವ ಮೂಲಕ ಮಹಾಸಭಾವನ್ನು ಪುನರ್ ಸಂಘಟಿಸಿ ಬಲಪಡಿಸುತ್ತೇವೆ ಎಂದು ಜಾಮದಾರ್ ಹೇಳಿದ್ದಾರೆ.
Nearly six years after the Union government rejected the Siddaramaiah-led Congress government’s proposal to accord separate religion status for Lingayats, the Jagatika Lingayat Mahasabha has decided to push for the tag.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm