ಬ್ರೇಕಿಂಗ್ ನ್ಯೂಸ್
20-06-24 03:14 pm Bangalore Correspondent ಕರ್ನಾಟಕ
ಬೆಂಗಳೂರು, ಜೂ 20: ಕೇಂದ್ರದ ಮೋಟಾರ್ ಆಕ್ಟ್ ಅನ್ವಯ ಎಲ್ಲ ವಾಹನಗಳಿಗೆ ಕಡ್ಡಾಯವಾಗಿ ಹೆಡ್ ಲೈಟ್ಗಳನ್ನು ಅಳವಡಿಸಿಕೊಳ್ಳಬೇಕು ಎಂದು ರಾಜ್ಯ ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ್ ಆದೇಶ ಹೊರಡಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಹೆಚ್ಚು ಬೆಳಕು ಹೊರಹಾಕುವ ಎಲ್ಇಡಿ ಲೈಟ್ ವಾಹನಗಳಿಗೆ ಅಳವಡಿಸುತ್ತಿದ್ದು, ಅದರಿಂದ ಎದುರುಗಡೆಯಿಂದ ಸಂಚರಿಸುವ ಇತರ ವಾಹನ ಸವಾರರಿಗೆ ತೀವ್ರ ತೊಂದರೆ ಆಗುತ್ತಿದೆ. ಭಾರಿ ಗಾತ್ರದ ವಾಹನಗಳಾದ ಟ್ರಕ್, ಬಸ್ಗಳಲ್ಲಿ ಹೆಚ್ಚು ಪ್ರಖರ ಬೆಳಕು ಹೊರಹಾಕುವ ಮತ್ತು ಕಣ್ಣು ಕುಕ್ಕುವ ಎಲ್ಇಡಿ ದೀಪಗಳನ್ನು ಅಳವಡಿಸುತ್ತಿರುವುದರಿಂದ ಇತರ ವಾಹನಗಳ ಸವಾರರಿಗೆ ಸಮಸ್ಯೆ ಆಗುತ್ತಿದೆ. ಅಲ್ಲದೆ, ಅಪಘಾತ ಪ್ರಕರಣಗಳು ಸಂಭವಿಸುತ್ತಿವೆ ಎಂದಿದ್ದಾರೆ.
ಆದರಿಂದ ಎಲ್ಲ ವಾಹನ ಸವಾರರು ತಮ್ಮ ವಾಹನಗಳಿಗೆ ಕೇಂದ್ರ ಮೋಟಾರು ವಾಹನ ಕಾಯ್ದೆಯಲ್ಲಿ ನಮೂದಿಸಿರುವ ಮಾನದಂಡದಂತೆ ನಿಗದಿತ ಹೆಡ್ ಲೈಟ್ಗಳನ್ನೇ ಅಳವಡಿಸಬೇಕಾಗಿರುವುದು ಕಡ್ಡಾಯವಾಗಿರುತ್ತದೆ. ಒಂದು ವೇಳೆ ಸಿಎಂವಿ ಕಾಯ್ದೆಯಲ್ಲಿನ ನಿಯಮಗಳನ್ನು ಉಲ್ಲಂಘಿಸಿದರೆ, ಅಂತಹ ವಾಹನ ಸವಾರರ ವಿರುದ್ಧ ಕೇಸ್ ದಾಖಲಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಜೊತೆಗೆ, ಘಟಕಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಸಂಚರಿಸುವ ವಾಹನಗಳ ಮೇಲೆ ನಿಗಾವಹಿಸಬೇಕು. ಹೆಚ್ಚು ಪ್ರಖರ ಬೆಳಕು ಹೊರಹಾಕುವ ಮತ್ತು ಕಣ್ಣು ಕುಕ್ಕುವ ಎಲ್ಇಡಿ ಲೈಟ್ ಅಳವಡಿಸಿರುವುದು ಕಂಡುಬಂದರೆ ಜುಲೈನಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವಂತೆ ಅವರು ಆದೇಶದಲ್ಲಿ ಸೂಚಿಸಿದ್ದಾರೆ.

ನಿಯಮ ಹೇಳುವುದೇನು?
ಕೇಂದ್ರ ಮೋಟಾರು ವಾಹನ ನಿಯಮಗಳು (ಸಿಎಂವಿಆರ್), ಭಾರತದಲ್ಲಿನ ವಾಹನಗಳಿಗೆ ಕೆಲವು ನಿಬಂಧನೆಗಳನ್ನು ರೂಪಿಸಿದೆ. ಅದರಲ್ಲಿ ಕೆಲವು ಮಾನದಂಡಗಳನ್ನು ಪಾಲಿಸುವ ಎಲ್‌ಇಡಿ ಹೆಡ್‌ಲೈಟ್‌ಗಳ ಬಳಕೆಗೆ ಅವಕಾಶ ನೀಡಲಾಗಿದೆ. ಈ ಎಲ್‌ಇಡಿ ಹೆಡ್‌ಲೈಟ್‌ಗಳು ಆಟೋಮೇಟಿವ್ ಲೈಟಿಂಗ್‌ಗಾಗಿ ಭಾರತೀಯ ಮಾನದಂಡದಲ್ಲಿ (ಐಎಸ್) ಸೂಚಿಸಿರುವ ನಿರ್ದೇಶನಗಳಿಗೆ ಅನುಗುಣವಾಗಿ ಇರಬೇಕು. ಸಿಎಂವಿಆರ್‌ನ ನಿಯಮಗಳಿಗೆ ಪೂರಕವಾಗಿ ಸೂಕ್ತ ಲೆನ್ಸ್‌ಗಳನ್ನು ಎಲ್‌ಇಡಿ ದೀಪಗಳಿಗೆ ಅಳವಡಿಸಬೇಕು. ಎಲ್‌ಇಡಿ ಹೆಡ್‌ಲೈಟ್‌ಗಳು ರಸ್ತೆಯ ಇನ್ನೊಂದು ದಿಕ್ಕಿನಿಂದ ಬರುವ ವಾಹನ ಸವಾರರಿಗೆ ತೊಂದರೆ ಉಂಟುಮಾಡುವಂತೆ ಇರಬಾರದು. ಎಲ್‌ಇಡಿ ಹೆಡ್‌ಲೈಟ್‌ಗಳನ್ನು ಸೂಕ್ತ ರೀತಿಯಲ್ಲಿ ಅಳವಡಿಸಿರಬೇಕು ಎಂದು ನಿಯಮಗಳು ಹೇಳುತ್ತವೆ. ಈ ನಿಯಮಗಳನ್ನು ಕೂಡ ಅಲೋಕ್ ಕುಮಾರ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
Police have announced a special statewide drive in July, targeting motorists who violate regulations by installing glaring and dazzling LEDs for headlights of their vehicles. ADGP (traffic and road safety) Alok Kumar has issued a memo to enforcement authorities, stating that “cases will be booked against motorists under Indian Motor Vehicles Act for violating the rule”.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 08:45 pm
HK News Staffer
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am
ಆಸ್ಪತ್ರೆ ಸಿಬ್ಬಂದಿಗೆ ಪ್ರಜ್ಞೆ ತಪ್ಪಿಸಿ ಲೈಂಗಿಕ ದೌ...
07-09-26 08:56 pm