ಬ್ರೇಕಿಂಗ್ ನ್ಯೂಸ್
22-06-24 04:43 pm Bangalore Correspondent ಕರ್ನಾಟಕ
ಬೆಂಗಳೂರು, ಜೂ.22: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಡಿ-ಬಾಸ್ ಗ್ಯಾಂಗ್ ಲೀಡರ್ ನಟ ದರ್ಶನ್ ಸೇರಿದಂತೆ ನಾಲ್ವರು ಆರೋಪಿಗಳನ್ನ ಪೊಲೀಸರು ಮ್ಯಾಜಿಸ್ಟ್ರೇಟ್ ಕೋರ್ಟ್ಗೆ ಹಾಜರುಪಡಿಸಿದ್ರು. ಕಸ್ಟಡಿ ಅಂತ್ಯಗೊಂಡ ಹಿನ್ನೆಲೆ ಆರೋಪಿಗಳಾದ ದರ್ಶನ್, ಧನರಾಜ್, ವಿನಯ್, ಪ್ರದೋಶ್ರನ್ನು ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ರು. ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶರು ನಟ ದರ್ಶನ್ ಸೇರಿದಂತೆ ನಾಲ್ವರು ಆರೋಪಿಗಳಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
12 ದಿನಗಳ ಕಾಲ ಕಸ್ಟಡಿ ಪಡೆದು ವಿಚಾರಣೆ ನಡೆಸಿದ ಪೊಲೀಸರು ಹಲವು ಸಾಕ್ಷ್ಯಗಳನ್ನು ಕಲೆ ಹಾಕಿದ್ರು. ಮತ್ತೆ ಕಸ್ಟಡಿ ಅಗತ್ಯವಿಲ್ಲ ಎಂದು ಕೋರ್ಟ್ಗೆ ಪೊಲೀಸರು ವರದಿ ನೀಡಿದ್ದಾರೆ. ಹೀಗಾಗಿ ನ್ಯಾಯಾಧೀಶರು ದರ್ಶನ್ ಸೇರಿದಂತೆ ನಾಲ್ವರು ಆರೋಪಿಗಳನ್ನು ಜುಲೈ 4ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ. ಈಗಾಗಲೇ ರೇಣುಕಾಸ್ವಾಮಿ ಕೊಲೆ ಕೇಸ್ನ ಮೊದಲ ಆರೋಪಿಯಾಗಿರುವ ಪವಿತ್ರಾ ಗೌಡ ಸೇರಿದಂತೆ ಇನ್ನಿತರ ಆರೋಪಿಗಳು ಕೂಡ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದು, ಅವರಿಗೂ ಜುಲೈ 4ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ
ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್, ಸೊ- ಕಾಲ್ಡ್ ಗೆಳತಿ ಪವಿತ್ರಾ ಗೌಡ ಸೇರಿದಂತೆ ಕೆಲ ಆರೋಪಿಗಳನ್ನು ಜೂನ್ 11 ರಂದು ಮಂಗಳವಾರ ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದರು. ಪ್ರಕರಣದಲ್ಲಿ ಒಟ್ಟು 17 ಆರೋಪಿಗಳಿದ್ದು, ಇತರೆ ಕೆಲವು ಆರೋಪಿಗಳನ್ನು ನಂತರದ ದಿನಗಳಲ್ಲಿ ಬಂಧಿಸಲಾಗಿದೆ. ಕೆಲವು ಆರೋಪಿಗಳು ತಾವೇ ಪೊಲೀಸರ ಮುಂದೆ ಬಂದು ಸರೆಂಡರ್ ಆಗಿದ್ರು
ಕೋರ್ಟ್‌ನಲ್ಲಿ ಜಡ್ಜ್ ನಿಮಗೆ ಕಸ್ಟಡಿಯಲ್ಲಿ ಏನಾದ್ರೂ ತೊಂದರೆ ಆಯ್ತಾ ಎಂದು ಕೇಳಿದರು. ಇದಕ್ಕೆ ಉತ್ತರಿಸಿದ ದರ್ಶನ್ ಅವರು ಇಲ್ಲ ಸ್ವಾಮಿ ಯಾವುದೇ ತೊಂದರೆ ಆಗಿಲ್ಲ ಎಂದರು.
ಆರೋಪಿಗಳಿಗೆ ವೈದ್ಯಕೀಯ ಪರೀಕ್ಷೆಯನ್ನು ಮಾಡಿಸಿದ್ರಾ. ನಿಮಗೆ ಏನಾದ್ರೂ ಮೆಡಿಕಲ್ ಟ್ರೀಟ್ಮೆಂಟ್ ಅವಶ್ಯಕತೆ ಇದೆಯಾ ಎಂದು ನ್ಯಾಯಾಧೀಶರು ಕೇಳಿದಕ್ಕೆ ಹೌದು ಬೆಳಗ್ಗೆ ಸ್ಟೇಷನ್‌ನಲ್ಲಿ ಮಾಡಿಸಿದ್ರು. ಬೇರೆ ಟ್ರೀಟ್ಮೆಂಟ್ ಅವಶ್ಯಕತೆ ಇಲ್ಲ ಸ್ವಾಮಿ ಎಂದ ದರ್ಶನ್ ಹೇಳಿದ್ದಾರೆ.
ಇಂದು ನಟ ದರ್ಶನ್ ಅವರು ಎರಡನೇ ಬಾರಿ ಪರಪ್ಪನ ಅಗ್ರಹಾರ ಜೈಲು ಸೇರಲಿದ್ದಾರೆ. ಈ ಹಿಂದೆ ಪತ್ನಿ ವಿಜಯಲಕ್ಷ್ಮಿ ಅವರ ಮೇಲೆ ಹಲ್ಲೆ ನಡೆಸಿದ್ದ ಕೇಸ್ನಲ್ಲಿ ದರ್ಶನ್ ಜೈಲು ಪಾಲಾಗಿದ್ದರು. ಇಂದು ಕೋರ್ಟ್ ದರ್ಶನ್ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಿದ ಹಿನ್ನೆಲೆಯಲ್ಲಿ 2ನೇ ಬಾರಿ ಸೆಂಟ್ರಲ್ ಜೈಲು ಸೇರಿಕೊಳ್ಳಲಿದ್ದಾರೆ.
Kannada actor Darshan Thoogudeepa and four others have been remanded by a Bengaluru Court to judicial custody until July 4 (Thursday) as part of the ongoing investigation into the Renuka Swamy murder case. They will be held as undertrial prisoners at Parappana Agrahara Central Jail.
24-02-25 01:36 pm
HK News Desk
Kumar Bangarappa, BJP President: ಬಿಜೆಪಿ ರಾಜ್ಯ...
23-02-25 06:38 pm
Telangana Model, Pramod Muthalik, CM Siddaram...
21-02-25 10:47 pm
Rohini Sindhuri, Roopa moudgil, latest news:...
21-02-25 10:12 pm
Santosh Lad, Modi, Nitin Gadkari: ಬಿಜೆಪಿ ಅಧಿಕ...
21-02-25 04:36 pm
24-02-25 10:14 pm
HK News Desk
India Pak Match 2025 Live: ಪಾಕ್ ತಂಡವನ್ನು ಚಾಂಪ...
23-02-25 11:22 pm
ಗಂಗಾ ನದಿಗಿದೆ ಸ್ವಯಂ ಶುದ್ಧೀಕರಣದ ಶಕ್ತಿ ; ಕೋಟ್ಯಂತ...
23-02-25 09:52 pm
ದುಬೈನಲ್ಲಿ ಕ್ರಿಮಿನಲ್ ಇನ್ವೆಸ್ಟಿಗೇಶನ್ ಅಧಿಕಾರಿಗಳ...
22-02-25 09:48 pm
ದುಬೈ ಉದ್ಯಮಿ ಬಿ.ಆರ್ ಶೆಟ್ಟಿಗೆ ದುಬೈ ಕೋರ್ಟಿನಿಂದ ಮ...
22-02-25 07:51 pm
25-02-25 02:34 pm
Mangalore Correspondent
Puttur doctor, C Section, Mangalore: ಸಿಸೇರಿಯನ...
25-02-25 12:24 pm
Puttur News, Dr Anil Baipadithaya, hospital:...
24-02-25 02:50 pm
Mangalore accident, Surathkal, Raichur: ಸುರತ್...
23-02-25 03:20 pm
Rani Abbakka, Mamata Ballal, Mangalore: ಐನೂರು...
23-02-25 01:12 pm
25-02-25 01:37 pm
HK News Desk
Delhi crime, Wife Murder: ತ್ರಿವೇಣಿ ಸಂಗಮದಲ್ಲಿ...
24-02-25 10:51 pm
Illegal drug supply, Mangalore: ಮಂಗಳೂರು ಜೈಲಿಗ...
24-02-25 09:43 pm
Bangalore crime, Police constable, Rape, Bomm...
24-02-25 07:08 pm
Sirsi Murder, KSRTC Bus, crime: ಶಿರಸಿ ; ಹತ್ತು...
23-02-25 03:42 pm