ಬ್ರೇಕಿಂಗ್ ನ್ಯೂಸ್
23-06-24 12:49 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್.23: ಅಸಹಜ ಲೈಂಗಿಕ ದೌರ್ಜನ್ಯ ದೂರಿಗೆ ಸಂಬಂಧಿಸಿ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರನ್ನ ಹಾಸನ ಪೊಲೀಸರು ಬಂಧಿಸಿದ್ದಾರೆ.
ಶನಿವಾರ ಸಂತ್ರಸ್ತ ವ್ಯಕ್ತಿ, ಜೆಡಿಎಸ್ ಕಾರ್ಯಕರ್ತರೊಬ್ಬರು ನೀಡಿದ್ದ ದೂರು ಆಧರಿಸಿ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 377 (ಅಸ್ವಾಭಾವಿಕ ಅಪರಾಧ), 342 ಹಾಗೂ 506 (ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಡಿಜಿಪಿ ಕಚೇರಿಯಲ್ಲಿ ದೂರು ನೀಡಿದ್ದ ಸಂತ್ರಸ್ತ ಹಾಸನ ಎಸ್‌ಪಿಗೂ ದೂರಿನ ಪ್ರತಿಯನ್ನು ಇ-ಮೇಲ್ ಮಾಡಿದ್ದ. ಮೇಲ್ ಆಧರಿಸಿ ಸಂತ್ರಸ್ತನನ್ನ ಕರೆಸಿ ಮಾಹಿತಿ ಪಡೆದ ಪೊಲೀಸರು ಎಫ್ಐಆರ್ ದಾಖಲಿಸಿದ್ದರು.
ಇದರ ಬೆನ್ನಲ್ಲೇ ತನ್ನ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಹೊರಿಸಿದ್ದ ವ್ಯಕ್ತಿಯ ವಿರುದ್ಧ ಪ್ರತಿದೂರು ನೀಡಲು ಸೂರಜ್ ರೇವಣ್ಣ ಶನಿವಾರ ಸಂಜೆ 6 ಗಂಟೆ ವೇಳೆಗೆ ಹಾಸನದ ಸೆನ್ ಪೊಲೀಸ್ ಠಾಣೆಗೆ ತೆರಳಿದ್ದರು. ಇದೇ ವೇಳೆ ಪೊಲೀಸರು ವಿಚಾರಣೆ ಆರಂಭಿಸಿದ್ದು ರಾತ್ರಿ 11:30ರ ವರೆಗೂ ಪ್ರಶ್ನೆ ಮಾಡಿದ್ದರು. ಬಳಿಕ ಸೂರಜ್ ಜೊತೆಗೆ ನಿಗೂಢ ಸ್ಥಳಕ್ಕೆ ತೆರಳಿದ್ದ ಪೊಲೀಸರು ತಡರಾತ್ರಿ 1:30ರ ವರೆಗೂ ವಿಚಾರಣೆ ಮುಂದುವರಿಸಿದ್ದರು. ಸಕಲೇಶಪುರ ಡಿವೈಎಸ್‌ಪಿ ಪ್ರಮೋದ್ ಕುಮಾರ್ ಅವರು ಸೂರಜ್ ರೇವಣ್ಣ ಅವರನ್ನ ತೀವ್ರ ವಿಚಾರಣೆಗೆ ಒಳಪಡಿಸಿದ್ದು ಬಂಧನ ಖಚಿತ ಪಡಿಸಿದ್ದಾರೆ.
ಸಂತ್ರಸ್ತನ ದೂರಿನಲ್ಲೇನಿದೆ ?
ಸೂರಜ್ ರೇವಣ್ಣ ನನಗೆ ಚುನಾವಣೆ ಸಂದರ್ಭದಲ್ಲಿ ಪರಿಚಯವಾಗಿದ್ದರು. ಅವರ ತಮ್ಮ ಪ್ರಜ್ವಲ್ ರೇವಣ್ಣ ಪರ ಕೆಲಸ ಮಾಡಿದ್ದೇನೆ. ಆ ಸಂದರ್ಭದಲ್ಲಿ ನನ್ನ ನಂಬರನ್ನ ಸೂರಜ್ ತೆಗೆದುಕೊಂಡಿದ್ದರು. ಜೂ.14 ರಂದು ಸೂರಜ್ ನನಗೆ ಮೆಸೇಜ್ ಮಾಡಿದ್ದರು. ಮೆಸೇಜ್‍ನಲ್ಲಿ ನನ್ನ ಬಗ್ಗೆ ಎಲ್ಲಾ ಮಾಹಿತಿ ಪಡೆದಿದ್ದರು. ನಂತರ ಜೂ.16 ರಂದು ಹೊಳೆನರಸೀಪುರ ತಾಲೂಕಿನ, ಗನ್ನೀಕಡ ತೋಟಕ್ಕೆ ಸಂಜೆ ಬರಲು ಹೇಳಿದ್ದರು. ನಾನು ಹೋದ ಸಂದರ್ಭ ಮನೆಯಲ್ಲಿ ಒಬ್ಬರೇ ಇದ್ದರು. ನನಗೆ ಇಷ್ಟವಿಲ್ಲದಿದ್ದರೂ ಲೈಂಗಿಕ ಕಿರುಕುಳ ನೀಡಿದ್ದಾರೆ. ಆ ಸಂದರ್ಭ ನನಗೆ ಪುರುಷರನ್ನು ಕಂಡರೆ ಆಸಕ್ತಿ. ಮಹಿಳೆಯರನ್ನು ಕಂಡರೆ ಆಸಕ್ತಿ ಇಲ್ಲ ಎಂದು ಹೇಳಿ ನನ್ನ ಮೇಲೆ ದೌರ್ಜನ್ಯ ಎಸಗಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಪ್ರಜ್ವಲ್ ರೇವಣ್ಣ ನೂರಾರು ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬಂಧನವಾಗಿದ್ದು ಈಗ ಜೈಲಿನಲ್ಲಿದ್ದಾರೆ. ಇದರ ಬೆನ್ನಲ್ಲೇ ಅಣ್ಣ ಸೂರಜ್ ರೇವಣ್ಣ ಕೂಡ ಸಲಿಂಗಕಾಮದ ಪ್ರಕರಣದಲ್ಲಿ ಸಿಲುಕಿದ್ದು ಬಂಧನವಾಗಿದ್ದಾರೆ.
Hassan Police arrested JD(S) MLC Suraj Revanna after questioning him about the sexual abuse case registered against him in Hassan late in the night on June 22. A 27-year-old youth from Arakalgud taluk, who identified himself as a JD(S) party worker, filed a complaint on June 22 at Holenarasipur Rural Police Station alleging that the legislator sexually harassed him in his farmhouse at Gannikada in Holenarasipur taluk on June 16.
16-05-25 10:04 am
Bangalore Correspondent
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
16-05-25 04:45 pm
HK News Desk
ಮುಸ್ಲಿಂ ವ್ಯಕ್ತಿಗೆ ಕುರಾನ್ ಪ್ರಕಾರ ನಾಲ್ಕು ಮದುವೆ...
15-05-25 09:09 pm
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
16-05-25 10:27 pm
Mangalore Correspondent
Siddaramaiah, Cm Mangalore, BJP black flag: ಸ...
16-05-25 06:05 pm
Mangalore, Dinesh Gundurao: ಇಡಿ ದೇಶದಲ್ಲಿ ಅತೀ...
16-05-25 02:47 pm
Mangalore Cargo Ship, Lakshadweep: ಲಕ್ಷದ್ವೀಪಕ...
16-05-25 10:06 am
Capt Brijesh Chowta, Mangalore Mp, CM Siddara...
15-05-25 08:04 pm
16-05-25 11:06 pm
Mangalore Correspondent
Belagavi Protest, Quran Burnt, Police, Crime:...
16-05-25 09:20 pm
Davanagere Crime, Gold Robbery: ಆನ್ಲೈನ್ ಗೇಮಿಂ...
15-05-25 11:06 pm
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm