ಬ್ರೇಕಿಂಗ್ ನ್ಯೂಸ್
23-06-24 07:38 pm HK News Desk ಕರ್ನಾಟಕ
ತುಮಕೂರು, ಜೂನ್ 23: ಪದವಿ ಓದುತ್ತಿದ್ದ 20 ವರ್ಷದ ವಿದ್ಯಾರ್ಥಿನಿ ಮತ್ತು 40 ವರ್ಷದ ವಿವಾಹಿತ ಪುರುಷ ಮೂರು ದಿನಗಳಿಂದ ನಾಪತ್ತೆಯಾಗಿದ್ದು ಭಾನುವಾರ ಬೆಳಗ್ಗೆ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ತಮ್ಮ ಪ್ರೀತಿಗೆ ಮನೆಯವರು ಒಪ್ಪಿಗೆ ನೀಡಿಲ್ಲವೆಂದು ಇಬ್ಬರೂ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಮಾವತ್ತೂರು ಕೆರೆಯಲ್ಲಿ ಇವರಿಬ್ಬರ ಶವಗಳು ಪತ್ತೆಯಾಗಿವೆ. ಅನನ್ಯ (19) ಹಾಗೂ ರಂಗಶಾಮಣ್ಣ (40) ಮೃತರೆಂದು ತಿಳಿದುಬಂದಿದೆ. ಅನನ್ಯಾ ಕೊರಟಗೆರೆ ತಾಲೂಕಿನ ಲಕ್ಕಯ್ಯನಪಾಳ್ಯ ಗ್ರಾಮದವಳಾಗಿದ್ದು, ತುಮಕೂರಿನಲ್ಲಿ ಪದವಿ ಅಭ್ಯಾಸ ಮಾಡುತ್ತಿದ್ದಳು. ಪಕ್ಕದ ಬೈರಗೊಂಡ್ಲು ಗ್ರಾಮದ ರಂಗಶಾಮಣ್ಣ ವಿವಾಹಿತ ವ್ಯಕ್ತಿಯಾಗಿದ್ದು, ಈತನಿಗೆ ಮಡದಿ ಮತ್ತು ಮಕ್ಕಳಿದ್ದಾರೆ. ಆದರೆ, ಮಗಳ ವಯಸ್ಸಿನ ಯುವತಿಯನ್ನು ಪ್ರೀತಿಸಿ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.


ಅಕ್ಕಪಕ್ಕದ ಗ್ರಾಮಸ್ಥರಾದ ಇಬ್ಬರೂ ನಾಪತ್ತೆಯಾಗಿ ಮೂರು ದಿನಗಳಾದರೂ ಪತ್ತೆ ಆಗಿರಲಿಲ್ಲ. ಮೊಬೈಲ್ ಟ್ರೇಸ್ ಮಾಡಿದಾಗ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಮಾವತ್ತೂರು ಕೆರೆಯ ಬಳಿ ಟ್ರೇಸ್ ಆಗಿತ್ತು. ಕೆರೆಯ ಬಳಿ ನಿಲ್ಲಿಸಿದ್ದ ರಂಗಶಾಮಣ್ಣನ ಕಾರಿನಲ್ಲಿ ಇಬ್ಬರ ಮೊಬೈಲ್ ಮತ್ತು ಕೆರೆಯ ದಂಡೆಯಲ್ಲಿ ಇಬ್ಬರ ಚಪ್ಪಲಿಗಳು ಪತ್ತೆಯಾಗಿದ್ದವು. ಇಬ್ಬರೂ ಆತ್ಮಹತ್ಯೆಗೆ ಶರಣಾಗಿರುವ ಶಂಕೆಯನ್ನು ವ್ಯಕ್ತಪಡಿಸಿದ ಪೊಲೀಸರು ಅಗ್ನಿಶಾಮಕ ದಳದ ಸಹಾಯದಿಂದ ಶವ ಪತ್ತೆಗೆ ಮುಂದಾಗಿದ್ದರು.
ಶನಿವಾರ ತಡರಾತ್ರಿಯಾದ ಹಿನ್ನೆಲೆಯಲ್ಲಿ ಪತ್ತೆ ಕಾರ್ಯ ಸ್ಥಗಿತಗೊಳಿಸಿ ಭಾನುವಾರ ಬೆಳಗ್ಗೆಯಿಂದ ಕಾರ್ಯಾಚರಣೆ ಮುಂದುವರೆಸಿದ್ದರು. ಈ ವೇಳೆ ರಂಗಶಾಮಣ್ಣ ಹಾಗೂ ವಿದ್ಯಾರ್ಥಿನಿ ಅನನ್ಯಾ ಅವರ ಮೃತದೇಹಗಳು ಕೆರೆಯಲ್ಲಿ ಪತ್ತೆಯಾಗಿವೆ. ಇಬ್ಬರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಇಬ್ಬರು ಪ್ರೇಮಿಗಳನ್ನು ಅವರ ಮನೆಯವರೇ ಕೊಲೆ ಮಾಡಿರಬಹುದೇ ಎಂಬ ಶಂಕೆಯನ್ನೂ ಪೊಲೀಸರು ವ್ಯಕ್ತಪಡಿಸಿದ್ದು, ಮರಣೋತ್ತರ ಪರೀಕ್ಷೆಯಿಂದ ಮಾಹಿತಿ ಲಭ್ಯವಾಗಲಿದೆ.
Tumkur suicide case, 20 year old college girl flees with 50 year old uncle, bodies of both found at lake. A 19-year-old college student and a married man are reported missing and it is suspected that they may have committed suicide by jumping into the Mavathur lake in Koratagere taluk. Their footwear were found by the edge of the water, giving rise to suspicion.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
10-04-26 01:26 pm
HK News Desk
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
10-04-26 12:35 pm
Dinesh Kumar, Mangaluru
Besant Evening College, BPL Cricket: ಬೆಸೆಂಟ್...
07-04-26 01:22 pm
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm