ಬ್ರೇಕಿಂಗ್ ನ್ಯೂಸ್
06-12-20 11:38 am Headline Karnataka News Network ಕರ್ನಾಟಕ
ಚಿತ್ರದುರ್ಗ, ಡಿ.6: ಕೆಎಸ್ಸಾರ್ಟಿಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿಬಿದ್ದ ಪರಿಣಾಮ ಇಬ್ಬರು ಮೃತಪಟ್ಟು, ಐವರು ಗಾಯಗೊಂಡ ಘಟನೆ ಹಿರಿಯೂರು ನಗರದ ಚಳ್ಳಕೆರೆ ರಸ್ತೆಯಲ್ಲಿ ರವಿವಾರ ಬೆಳಗ್ಗಿನ ಜಾವ ನಡೆದಿದೆ.
ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಮೃತಪಟ್ಟವರ ಗುರುತು ಪತ್ತೆಯಾಗಿಲ್ಲ.
ಶಹಾಪುರದಿಂದ ಬೆಂಗಳೂರು ಕಡೆ ಸಂಚರಿಸುತ್ತಿದ್ದ ಈಶಾನ್ಯ ಸಾರಿಗೆ ನಿಗಮದ ಯಾದಗಿರಿ ವಿಭಾಗದ ಈ ಬಸ್ಸಿನಲ್ಲಿ ಸುಮಾರು 50ರಷ್ಟು ಪ್ರಯಾಣಿಕರಿದ್ದರೆನ್ನಲಾಗಿದೆ. ಬಸ್ ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಹಿರಿಯೂರು ನಗರದ ಚಳ್ಳಕೆರೆ ರಸ್ತೆಯಲ್ಲಿ ಚಲಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿತ್ತೆನ್ನಲಾಗಿದೆ. ಇದರಿಂದ ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಐವರು ಗಾಯಗೊಂಡಿದ್ದು, ಈ ಪೈಕಿ ಇಬ್ಬರು ತೀವ್ರ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಗಾಯಾಳುಗಳನ್ನು ಹಿರಿಯೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಹಿರಿಯೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Two dead and five injured after a KSRTC Bus toppled at Chelikere, Chitradurga in the early morning of Sunday 6, December, 2020.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 10:58 pm
HK News Desk
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
05-08-25 10:34 pm
Mangalore Correspondent
Dharmasthala Case, Update, 11-12 spot: ಧರ್ಮಸ್...
05-08-25 08:22 pm
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
06-08-25 11:04 am
Udupi Correspondent
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm