ಬ್ರೇಕಿಂಗ್ ನ್ಯೂಸ್
01-07-24 02:04 pm HK News Desk ಕರ್ನಾಟಕ
ಚಿಕ್ಕಮಗಳೂರು, ಜುಲೈ 1: ಜಿಲ್ಲೆಯ ಪ್ರಸಿದ್ಧ ಪ್ರವಾಸಿತಾಣವಾದ ದೇವರಮನೆ ಮೋಜು, ಮಸ್ತಿಯ ಅಡ್ಡವಾಗಿದೆ. ಇದರಿಂದಾಗಿ ಶ್ರೀ ಕ್ಷೇತ್ರ ಕಾಲಭೈರವೇಶ್ವರನ ಸನ್ನಿಧಿಗೆ ಆಗಮಿಸುವ ಭಕ್ತರಿಗೆ ಮುಜುಗರ ಉಂಟಾಗಿದೆ.
ದೇವರಮನೆಗೆ ಸದಾ ಪ್ರವಾಸಿಗರು ಆಗಮಿಸುತ್ತಾರೆ. ಈಗ ನೈಋತ್ಯ ಮುಂಗಾರು ಮಳೆ ಸುರಿಯುವ ಅವಧಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಆದರೆ ಪ್ರವಾಸಿಗರ ಹುಚ್ಚು ಕುಣಿತ ಮಲೆನಾಡ ಪ್ರಕೃತಿ ಮಡಿಲಿನ ಸೌಂದರ್ಯ ನೋಡಲು ಬರುವ ಪ್ರವಾಸಿಗರಿಗೆ ಮುಜುಗರ ತಂದಿದೆ.
ದೇವರಮನೆಯಲ್ಲಿ ಹೊಯ್ಸಳರ ಕಾಲದ ಇತಿಹಾಸ ಪ್ರಸಿದ್ಧ ಕಾಲಭೈರವೇಶ್ವರನ ದೇವಾಲಯವಿದೆ. ಈ ಕ್ಷೇತ್ರಕ್ಕೆ ಆಗಮಿಸುವ ಭಕ್ತರಿಗೆ ಮದ್ಯ ಕುಡಿದು, ಧಮ್ ಹೊಡೆದುಕೊಂಡು, ರಸ್ತೆ ಮಧ್ಯೆ ಮೋಜು, ಮಸ್ತಿ ಮಾಡುವ ಪ್ರವಾಸಿಗರಿಂದ ವಾಹನಗಳ ಸಂಚಾರಕ್ಕೆ ತೊಂದರೆ ಉಂಟಾಗಿದೆ, ಓಡಾಡಲು ಜಾಗವಿಲ್ಲದಂತೆ ಆಗಿದೆ.
ಕೆಲವು ಪ್ರವಾಸಿಗರು ರಸ್ತೆ ಮಧ್ಯೆ ಕಾರು ನಿಲ್ಲಿಸಿಕೊಂಡು ಡ್ಯಾನ್ಸ್ ಮಾಡುತ್ತಿದ್ದಾರೆ. ಜೋರಾಗಿ ಕಿರುಚಾಡಿ ಗದ್ದಲವನ್ನು ಎಬ್ಬಿಸುತ್ತಿದ್ದಾರೆ. ರಸ್ತೆ ಮಧ್ಯೆ ಕಾರು ನಿಲ್ಲಿಸಿಕೊಂಡು ಕುಣಿದ ಕುಪ್ಪಳಿಸುತ್ತಿರುವ ಪ್ರವಾಸಿಗರು ಯಾರ ಮಾತನ್ನೂ ಸಹ ಕೇಳುತ್ತಿಲ್ಲ.
ಯಾರಿಗೂ ಪೊಲೀಸರ ಭಯವಿಲ್ಲ. ಸ್ಥಳೀಯರ ಮಾತನ್ನು ಕೇಳುತ್ತಿಲ್ಲ. ದೇವರಮನೆ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿದೆ. ಆದರೆ ಬೆರಳೆಣಿಕೆಯಷ್ಟು ಪೊಲೀಸರು ದೇವರಮನೆಯಲ್ಲಿ ಭದ್ರತೆಗೆ ನಿಯೋಜನೆಗೊಂಡರೆ ಉಳಿದ ಕೆಲಸ ಯಾರು ಮಾಡಬೇಕು? ಎಂಬುದು ಪ್ರಶ್ನೆಯಾಗಿದೆ.
ಮುಂಗಾರು ಮಳೆ ಸಂದರ್ಭದಲ್ಲಿ ಚಿಕ್ಕಮಗಳೂರು ಜಿಲ್ಲೆಗೆ ಪ್ರವಾಸಿಗರ ಸಂಖ್ಯೆ ಏರಿಕೆಯಾಗಿದೆ. ಅದರಲ್ಲೂ ಸರಣಿ ರಜೆ, ವಾರಾಂತ್ಯದಲ್ಲಿ ಪ್ರವಾಸಿಗರು ತಂಡೋಪತಂಡವಾಗಿ ಆಗಮಿಸುತ್ತಿದ್ದು, ಚಿಕ್ಕಮಗಳೂರು ಜಿಲ್ಲೆಯ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗುತ್ತಿದೆ.
ಇನ್ನು ಚಾರ್ಮಾಡಿ ಘಾಟಿ ರಸ್ತೆಯಲ್ಲಿಯೂ ಪ್ರಯಾಣಿಕರು, ಪ್ರವಾಸಿಗರು ಹುಚ್ಚಾಟ ಮೆರೆಯುತ್ತಿದ್ದಾರೆ. ಮಳೆಯಿಂದ ಸೃಷ್ಟಿಯಾಗಿರುವ ಕಿರು ಜಲಪಾತಗಳ ವೀಕ್ಷಣೆಗೆ ಬಂಡೆ ಮೇಲೆ ನಿಂತು ಹುಚ್ಚಾಟ ಮಾಡುತ್ತಿದ್ದಾರೆ. ಜಾರುವ ಬಂಡೆಗಳ ಮೇಲೆ ಪ್ರವಾಸಿಗರು ಮೋಜು ಮಸ್ತಿ ಮಾಡುತ್ತಿರುವುದು ಅಪಾಯಕ್ಕೆ ಆಹ್ವಾನ ನೀಡುತ್ತಿದೆ. ಜಾರುವ ಬಂಡೆ ಮೇಲಿಂದ ಬಿದ್ದು ಕೈಕಾಲು ಮುರಿದುಕೊಂಡ ಕೆಲವು ಉದಾಹರಣೆಗಳಿದ್ದರೂ ಪ್ರವಾಸಿಗರು ಬುದ್ಧಿ ಕಲ್ತಿಲ್ಲ
Devaramane tourist spot, youths found dancing drinking Parking car in the middle of the road, video viral. Devootes who were on their way to visit the temple had to park their cars aside because of the act of these youths.
24-02-25 01:36 pm
HK News Desk
Kumar Bangarappa, BJP President: ಬಿಜೆಪಿ ರಾಜ್ಯ...
23-02-25 06:38 pm
Telangana Model, Pramod Muthalik, CM Siddaram...
21-02-25 10:47 pm
Rohini Sindhuri, Roopa moudgil, latest news:...
21-02-25 10:12 pm
Santosh Lad, Modi, Nitin Gadkari: ಬಿಜೆಪಿ ಅಧಿಕ...
21-02-25 04:36 pm
24-02-25 10:14 pm
HK News Desk
India Pak Match 2025 Live: ಪಾಕ್ ತಂಡವನ್ನು ಚಾಂಪ...
23-02-25 11:22 pm
ಗಂಗಾ ನದಿಗಿದೆ ಸ್ವಯಂ ಶುದ್ಧೀಕರಣದ ಶಕ್ತಿ ; ಕೋಟ್ಯಂತ...
23-02-25 09:52 pm
ದುಬೈನಲ್ಲಿ ಕ್ರಿಮಿನಲ್ ಇನ್ವೆಸ್ಟಿಗೇಶನ್ ಅಧಿಕಾರಿಗಳ...
22-02-25 09:48 pm
ದುಬೈ ಉದ್ಯಮಿ ಬಿ.ಆರ್ ಶೆಟ್ಟಿಗೆ ದುಬೈ ಕೋರ್ಟಿನಿಂದ ಮ...
22-02-25 07:51 pm
24-02-25 02:50 pm
Mangalore Correspondent
Mangalore accident, Surathkal, Raichur: ಸುರತ್...
23-02-25 03:20 pm
Rani Abbakka, Mamata Ballal, Mangalore: ಐನೂರು...
23-02-25 01:12 pm
Siddaramaiah, Priyank Kharge Mangalore, D K S...
22-02-25 05:21 pm
Singari Beedi Robbery, IPS, crime: ಸಿಂಗಾರಿ ಬೀ...
21-02-25 08:22 pm
24-02-25 10:51 pm
HK News Desk
Illegal drug supply, Mangalore: ಮಂಗಳೂರು ಜೈಲಿಗ...
24-02-25 09:43 pm
Bangalore crime, Police constable, Rape, Bomm...
24-02-25 07:08 pm
Sirsi Murder, KSRTC Bus, crime: ಶಿರಸಿ ; ಹತ್ತು...
23-02-25 03:42 pm
Visa fraud, Bangalore crime, Arrest: ವಿದೇಶಿ ವ...
22-02-25 10:36 pm