ಬ್ರೇಕಿಂಗ್ ನ್ಯೂಸ್
01-07-24 11:01 pm HK News Desk ಕರ್ನಾಟಕ
ಬೀದರ್, ಜುಲೈ 1: ಇದು ಯಾರ ಕಿತಾಪತಿಯೋ, ವಿಸ್ಮಯಕಾರಿ ಘಟನೆಯೋ ಏನೋ.. ರಾತ್ರಿ ವೇಳೆ ಹೊಂಡದಲ್ಲಿ ಹೂತು ಅಂತ್ಯಸಂಸ್ಕಾರ ಮಾಡಿದ್ದ ಒಂದೂವರೆ ವರ್ಷದ ಮಗುವಿನ ಮೃತದೇಹ ಬೆಳಗಾಗುವಷ್ಟರಲ್ಲಿ ಸೀರೆಯಿಂದ ಕಟ್ಟಿದ ಉಯ್ಯಾಲೆಯಲ್ಲಿ ಪ್ರತ್ಯಕ್ಷಗೊಂಡ ಘಟನೆ ಬೀದರ್ ಜಿಲ್ಲೆಯಲ್ಲಿ ನಡೆದಿದ್ದು ಗ್ರಾಮಸ್ಥರು, ಕುಟುಂಬಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.
ಬಸವಕಲ್ಯಾಣ ತಾಲೂಕಿನ ಮಂಠಾಳ ಎಂಬ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮಂಠಾಳ ಗ್ರಾಮದ ನಿವಾಸಿ ಅಂಬಯ್ಯಸ್ವಾಮಿ ಎಂಬವರ ಒಂದೂವರೆ ವರ್ಷದ ಹೆಣ್ಣು ಮಗಳು ದೀಪ್ತಿ ಅನಾರೋಗ್ಯದಿಂದ ಜೂನ್ 29ರ ಸಂಜೆ ಸಾವನ್ನಪ್ಪಿದ್ದಳು. ಈ ಹಿನ್ನೆಲೆಯಲ್ಲಿ ಕುಟುಂಬಸ್ಥರು ತಡರಾತ್ರಿ ಮಗುವಿನ ಮೃತದೇಹವನ್ನು ಹೊಲದಲ್ಲಿ ಹೂತು ಅಂತ್ಯಸಂಸ್ಕಾರ ನೆರವೇರಿಸಿದ್ದರು. ಆದರೆ ಮರುದಿನ ಜೂನ್ 30ರ ಬೆಳಗ್ಗೆ ಪಕ್ಕದಲ್ಲೇ ಮರಕ್ಕೆ ಕಟ್ಟಿದ್ದ ಉಯ್ಯಾಲೆ (ಜೋಕಾಲಿ) ಯಲ್ಲಿ ಮಗುವಿನ ಮೃತದೇಹ ಕಂಡುಬಂದಿದೆ. ಇದು ಹೇಗೆ ಸಾಧ್ಯವಾಯ್ತು ಎನ್ನುವ ಬಗ್ಗೆ ಕುಟುಂಬಸ್ಥರು ಮತ್ತು ಗ್ರಾಮಸ್ಥರು ಆತಂಕದ ಪ್ರಶ್ನೆ ಮುಂದಿಟ್ಟಿದ್ದಾರೆ.
ಉಯ್ಯಾಲೆಯಲ್ಲಿದ್ದ ಮಗುವಿನ ಮೃತದೇಹವನ್ನು ಕುಟುಂಬಸ್ಥರು ಜೂನ್ 30 ರಂದು ಮತ್ತೆ ಅಂತ್ಯಸಂಸ್ಕಾರ ಮಾಡಿದ್ದಾರೆ. ಮಗುವಿನ ಕಾಲುಗಳಲ್ಲಿದ್ದ ಸರದ ಮೇಲಿನ ಆಸೆಯಿಂದ ಶವವನ್ನು ಹೊರ ತೆಗೆದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
Buried dead body of one year old baby removed by miscreants in Bidar and later has been hanged on a tree using cradle.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
09-09-25 05:14 pm
Mangalore Correspondent
MLA Vedavyas Kamath, Mangalore, Yakshangana:...
09-09-25 04:47 pm
Mangalore, Bajilakere, Suicide: ನನ್ನವರೇ ನನ್ನನ...
09-09-25 03:07 pm
ದಶಮ ಸಂಭ್ರಮದಲ್ಲಿ ಮಿಥುನ್ ರೈ ಸಾರಥ್ಯದ ಪಿಲಿನಲಿಕೆ ;...
09-09-25 02:30 pm
Mangalore Accident, Kulur, Death: ಕುಳೂರಿನಲ್ಲಿ...
09-09-25 11:48 am
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm